WTC Final: 2 ವಿಕೆಟ್‌ಗಳಿಂದ ಪಾಕ್ ಮಣಿಸಿದ ದಕ್ಷಿಣ ಆಫ್ರಿಕಾ WTC ಫೈನಲ್‌ಗೆ ಲಗ್ಗೆ
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ದಕ್ಷಿಣ ಆಫ್ರಿಕಾ ಪ್ರವೇಶ ಪಡೆದಿದೆ. ಪ್ರಸಕ್ತ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಟೂರ್ನಿಯ ಮತ್ತೊಂದು ಸೆಮಿಫೈನಲ್‌ಗೆ ಪ್ರವೇಶ ಪಡೆದಿದೆ. ಈ ಮೂಲಕ ಚೋಕರ್ ಪಟ್ಟವನ್ನು ಕಳಚಲು ಸಿದ್ಧತೆ ನಡೆಸಿದೆ. ಬಾಕ್ಸಿಂಗ್ ಡೇ ಟೆಸ್ಟ್‌ನ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಬೌಲರ್ ಕಗಿಸೊ ರಬಾಡ್ ತಮ್ಮ ಸ್ಥಿರ ಬ್ಯಾಟಿಂಗ್ ಮೂಲಕ ತಂಡಕ್ಕೆ ನೆರವಾದರು. ಈ ಮೂಲಕ ರಬಾಡ ತಮ್ಮ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸಲು ಮಹತ್ವದ ಪಾತ್ರವನ್ನು ನಿರ್ವಹಿಸಿದರು.
ಈ ಮೂಲಕ 2023-25ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆ ದಕ್ಷಿಣ ಆಫ್ರಿಕಾ ಪಾಲಾಗಿದೆ. ಅಲ್ಲದೆ ಈ ಟೂರ್ನಿಯ ಫೈನಲ್ ಪ್ರವೇಶಿಸಿದ ನಾಲ್ಕನೇ ತಂಡ ಎಂಬ ಹಿರಿಮೆ ಹೊಂದಿದೆ. ಇದಕ್ಕೂ ಮೊದಲು ಟೀಮ್ ಇಂಡಿಯಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ತಂಡಗಳು ಫೈನಲ್ ಪ್ರವೇಶಿಸಿದ್ದವು. ಈಗ ಈ ಸಾಲಿಗೆ ದಕ್ಷಿಣ ಆಫ್ರಿಕಾ ಸೇರಿದೆ. WTC 2023-25 ಸೈಕಲ್‌ನ ಅಂತಿಮ ಪಂದ್ಯವು 2025 ರಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಡೆಯಲಿದ್ದು, ಎಲ್ಲಾ ತಂಡಗಳು ಫೈನಲ್ ಮೇಲೆ ಕಣ್ಣು ನೆಟ್ಟಿವೆ.

ಒಂದು ಸ್ಲಾಟ್ ಮೂರು ತಂಡಗಳ ಫೈಟ್
ಇದೀಗ 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮೊದಲ ಸ್ಥಾನ ಭದ್ರ ಪಡಿಸಿಕೊಂಡಿದೆ. ಸೆಂಚೂರಿಯನ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪಾಕಿಸ್ತಾನ ತಂಡವನ್ನು ಮಣಿಸಿ ಈ ಸಾಧನೆ ಮಾಡಿದೆ. ಇನ್ನು ಒಂದು ಸ್ಥಾನ ಖಾಲಿ ಇದ್ದು, ಒಂದು ಸ್ಥಾನಕ್ಕೆ ಮೂರು ತಂಡಗಳ ನಡುವೆ ಬಿರುಸಿನ ಹೋರಾಟ ನಡೆಯುತ್ತಿದೆ. ಭಾರತ, ಆಸ್ಟ್ರೇಲಿಯಾ, ಶ್ರೀಲಂಕಾ ತಂಡಗಳು ಈ ಸ್ಥಾನಗಳ ಮೇಲೆ ಕಣ್ಣು ನೆಟ್ಟಿವೆ.
ಪಾಕಿಸ್ತಾನ ನೀಡಿದ್ದ 148 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ ಇನ್ನು 2 ವಿಕೆಟ್‌ಗಳು ಬಾಕಿ ಇರುವಂತೆ ಮುಟ್ಟಿ ಸಂಬ್ರಮಿಸಿತು. ದಕ್ಷಿಣ ಆಫ್ರಿಕಾ ತಂಡದ ಕಗಿಸೊ ರಬಾಡ ಅವರ ಕಾಣಿಕೆ ಅಪಾರ. ಸಮಾನ್ಯವಾಗಿ ರಬಾಡ ತಮ್ಮ ಶಿಸ್ತು ಬದ್ಧ ದಾಳಿಯಿಂದ ಎದುರಾಳಿಗಳಿಗೆ ಕಾಟ ನೀಡಬಲ್ಲರು. ಆದರೆ ಈ ಟೆಸ್ಟ್ ಪಂದ್ಯದಲ್ಲಿ ಇವರು ತಮ್ಮ ಸ್ಥಿರ ಬ್ಯಾಟಿಂಗ್‌ನಿಂದಲೂ ತಂಡಕ್ಕೆ ನೆರವಾದರು. ಇವರು ಜಸ್ಟ್ 26 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ ಅಜೇಯ 31 ರನ್ ಸಿಡಿಸಿ ತಂಡಕ್ಕೆ ಆಧಾರವಾದರು.

ದಕ್ಷಿಣ ಆಫ್ರಿಕಾ ಪರ ಎರಡೂ ಇನ್ನಿಂಗ್ಸ್‌ಗಳಲ್ಲಿ ಏಡೆನ್ ಮೆಕ್‌ಕ್ರಾಮ್ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅವರು ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್‌ಗಳನ್ನು ಕಲೆ ಹಾಕಿದರೆ, ಎರಡನೇ ಇನಿಂಗ್ಸ್‌ನಲ್ಲಿ 37 ರನ್‌ಗಳ ಅಮುಲ್ಯ ಕಾಣಿಕೆ ನೀಡಿದರು. ಇವರ ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
ಪಂದ್ಯದ ಚಿತ್ರಣ
ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಮೊದಲ ಇನಿಂಗ್ಸ್‌ನಲ್ಲಿ 211 ರನ್ ಕಲೆ ಹಾಕಿತು. ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್‌ನಲ್ಲಿ 301 ರನ್‌ಗಳಿಸಿ ಇನಿಂಗ್ಸ್ ಮುನ್ನಡೆ ಸಾಧಿಸಿತು. ಎರಡನೇ ಇನಿಂಗ್ಸ್‌ನಲ್ಲಿ 237 ರನ್‌ಗಳಿಗೆ ಪಾಕ್ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 150 ರನ್ ಸೇರಿಸಿ ಜಯ ಸಾಧಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications