For Quick Alerts
ALLOW NOTIFICATIONS  
For Daily Alerts
 

BAN vs SA: ಬಾಂಗ್ಲಾದೇಶ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ಟೆಸ್ಟ್ ತಂಡ ಪ್ರಕಟ; ನಾಯಕ ಹೊರಗೆ!

ಪ್ರಸ್ತುತ ಭಾರತ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ಸೇರಿದಂತೆ ಹಲವು ತಂಡಗಳು ಟೆಸ್ಟ್ ಕ್ರಿಕೆಟ್ ಆಡುತ್ತಿವೆ. ಇದೀಗ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವೆ ಕೂಡ ಟೆಸ್ಟ್ ಸರಣಿ ಆರಂಭವಾಗಲಿದೆ.

ದಕ್ಷಿಣ ಆಫ್ರಿಕಾ ತಂಡ ಟೆಸ್ಟ್ ಸರಣಿಯನ್ನು ಆಡಲು ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲಿದೆ. ಇದೇ ತಿಂಗಳು ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಶುಕ್ರವಾರದಂದು ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ. ಆದರೆ, ದಕ್ಷಿಣ ಆಫ್ರಿಕಾ ದೊಡ್ಡ ಹೊಡೆತವನ್ನು ಅನುಭವಿಸಿದೆ. ಟೆಸ್ಟ್ ತಂಡದ ನಾಯಕ ಟೆಂಬಾ ಬವುಮಾ ಅವರು ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

South Africa squad announced for Test series against Bangladesh

ಟೆಂಬಾ ಬವುಮಾ ಹೊರಗುಳಿದ್ದೇಕೆ?

ಇತ್ತೀಚೆಗೆ ಅಬುಧಾಬಿಯಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಮಾಡುವ ವೇಳೆ ಟೆಂಬಾ ಬವುಮಾ ಗಾಯಗೊಂಡಿದ್ದಾರೆ.
12ನೇ ಓವರ್‌ನಲ್ಲಿ ನಾನ್‌ಸ್ಟ್ರೈಕರ್‌ನ ಕೊನೆಯಲ್ಲಿ ರನ್ ಪೂರ್ಣಗೊಳಿಸುವಾಗ ಎಡ ಮೊಣಕೈಗೆ ಗಾಯ ಮಾಡಿಕೊಂಡಿರುವ ಬವುಮಾ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಬಾವುಮಾ ಮಂಗಳವಾರ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಢಾಕಾಗೆ ಪ್ರಯಾಣಿಸಲಿದ್ದಾರೆ. ಅಕ್ಟೋಬರ್ 29 ರಂದು ಚಿತ್ತಗಾಂಗ್‌ನಲ್ಲಿ ಪ್ರಾರಂಭವಾಗುವ ಎರಡನೇ ಟೆಸ್ಟ್‌ ಆಡಲು ಪ್ರೋಟೀಸ್ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಚೇತರಿಸಿಕೊಳ್ಳಲಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಹರಿಣಗಳ ಪಡೆಗೆ ನಾಯಕ ಯಾರು?

ಢಾಕಾದ ಮೀರ್‌ಪುರದಲ್ಲಿರುವ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ನಡುವೆ ಅಕ್ಟೋಬರ್ 21 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಮೊದಲ ಟೆಸ್ಟ್ ಪಂದ್ಯದಲ್ಲಿ ಏಡೆನ್ ಮಾರ್ಕ್ರಾಮ್ ಹರಿಣಗಳ ಪಡೆಯ ನಾಯಕತ್ವ ವಹಿಸಲಿದ್ದಾರೆ. ಮತ್ತೊಂದೆಡೆ, ಯುವ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಕಳೆದ ತಿಂಗಳು ಶ್ರೀಲಂಕಾ ಎ ವಿರುದ್ಧ ದಕ್ಷಿಣ ಆಫ್ರಿಕಾ ಎ ತಂಡವನ್ನು ಪ್ರತಿನಿಧಿಸಿದ ನಂತರ ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಬಾಂಗ್ಲಾದೇಶ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾದ ಟೆಸ್ಟ್ ತಂಡ

ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ಮ್ಯಾಥ್ಯೂ ಬ್ರೆಟ್ಜ್ಕೆ, ಡೆವಾಲ್ಡ್ ಬ್ರೆವಿಸ್, ಟೋನಿ ಡಿ ಜೋರ್ಜಿ, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್ (1ನೇ ಟೆಸ್ಟ್ ನಾಯಕ), ವಿಯಾನ್ ಮುಲ್ಡರ್, ಸೆನುರಾನ್ ಮುತ್ತುಸಾಮಿ, ಲುಂಗಿ ಎನ್ಗಿಡಿ, ಡೇನ್ ಪ್ಯಾಟರ್ಸನ್, ಡೇನ್ ಪೀಟ್, ಟ್ರಿಸ್ಟಾನ್ ಸ್ಟಬ್ಡಾ, ರಿಯಾನ್ ರಿಕೆಲ್ಟನ್ (ವಿಕೆಟ್‌ ಕೀಪರ್) ಮತ್ತು ಕೈಲ್ ವೆರೀನ್ (ವಿಕೆಟ್‌ ಕೀಪರ್).

Story first published: Friday, October 11, 2024, 18:30 [IST]
Other articles published on Oct 11, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+