SA20 ಲೀಗ್ನಲ್ಲಿ ಸಿಕ್ಸರ್‌ಗಳ ಸುರಿಮಳೆ; ಹೆನ್ರಿಚ್ ಕ್ಲಾಸೆನ್ ಸಿಡಿಲಬ್ಬರದ ಅರ್ಧಶತಕ!
ಸೌತ್ ಆಫ್ರಿಕಾ ಟಿ20 (SA20) ಲೀಗ್ನಲ್ಲಿ ಅಬ್ಬರದ ಬ್ಯಾಟಿಂಗ್ ಮೂಲಕ ಹೆನ್ರಿಚ್ ಕ್ಲಾಸೆನ್ ನೂತನ ದಾಖಲೆ ಬರೆದಿದ್ದಾರೆ. ಟೂರ್ನಿಯ 22ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಡರ್ಬನ್ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ತಂಡಕ್ಕೆ ಮ್ಯಾಥ್ಯೂ ಬ್ರೀಟ್ಝ್ಕ್ ಸ್ಫೋಟಕ ಆರಂಭ ಒದಗಿಸಿದ್ದರು. ಮ್ಯಾಥ್ಯೂ ಬ್ರೀಟ್ಝ್ಕ್ 43 ಎಸೆತಗಳನ್ನು ಎದುರಿಸಿ 6 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 78 ರನ್ ಬಾರಿಸಿದರು.

ಇನ್ನು 6ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಹೆನ್ರಿಚ್ ಕ್ಲಾಸೆನ್ ಸುಂಟರಗಾಳಿ ರೀತಿ ಬ್ಯಾಟ್ ಬೀಸಿದರು. ಡೆತ್ ಓವರ್ಗಳಲ್ಲಿ ಪಾರ್ಲ್ ರಾಯಲ್ಸ್ ತಂಡದ ಬೌಲರ್ಗಳ ಬೆವರಿಳಿಸಿದ ಹೆನ್ರಿಚ್ ಕ್ಲಾಸೆನ್ ಸಿಕ್ಸರ್‌ಗಳ ಸುರಿಮಳೆ ಸುರಿಸಿದರು. ಮೈದಾನದ ಎಲ್ಲ ದಿಕ್ಕಿಗೂ ಚೆಂಡು ಕಳಿಸಿದರು. ಒಟ್ಟು 6 ಸಿಕ್ಸರ್ ಬಾರಿಸಿದ ಹೆನ್ರಿಚ್ ಕ್ಲಾಸೆನ್ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಈ ಅರ್ಧಶತಕದೊಂದಿಗೆ ಸೌತ್ ಆಫ್ರಿಕಾ ಟಿ20 ಲೀಗ್ ಇತಿಹಾಸದಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಹೆನ್ರಿಚ್ ಕ್ಲಾಸೆನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಡೊನೊವನ್ ಫೆರೆರಾ ಹೆಸರಿನಲ್ಲಿತ್ತು.
ಜೋಹಾನ್ಸ್‌ಬರ್ಗ್ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಡೊನೊವನ್ ಫೆರೆರಾ ಪಾರ್ಲ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 3 ಸಿಕ್ಸರ್ ಹಾಗೂ 7 ಬೌಂಡರಿಗಳೊಂದಿಗೆ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು.
ಇದೀಗ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಹೆನ್ರಿಚ್ ಕ್ಲಾಸೆನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ ಒಟ್ಟು 17 ಎಸೆತಗಳನ್ನು ಎದುರಿಸಿದ ಹೆನ್ರಿಚ್ ಕ್ಲಾಸೆನ್ 2 ಬೌಂಡರಿ ಹಾಗೂ 6 ಸಿಕ್ಸರ್ಗಳೊಂದಿಗೆ 50 ರನ್ ಬಾರಿಸಿದ್ದರು.
ಈ ಅರ್ಧಶತಕದ ಸಹಾಯದಿಂದ ಡರ್ಬನ್ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಪಾರ್ಲ್ ರಾಯಲ್ಸ್ ತಂಡವು ಯುವ ಸ್ಪಿನ್ನರ್ ನೂರ್ ಅಹ್ಮದ್ (11 ರನ್‌ಗೆ 5 ವಿಕೆಟ್) ಅವರ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ 13.2 ಓವರ್ಗಳಲ್ಲಿ ಕೇವಲ 83 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ ತಂಡ 125 ರನ್ಗಳ ಅದ್ಭುತ ಗೆಲುವು ಸಾಧಿಸಿದೆ.
ಡರ್ಬನ್‌ನ ಸೂಪರ್ ಜೈಂಟ್ಸ್ ತಂಡವು ಭಾನುವಾರ, ಜನವರಿ 28ರಂದು 125 ರನ್‌ಗಳಿಂದ ಪಾರ್ಲ್ ರಾಯಲ್ಸ್ ತಂಡವನ್ನು ಸೋಲಿಸಿದ ನಂತರ 2024ರ SA20 ಪಾಯಿಂಟ್‌ಗಳ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದಾರೆ.
ವೆಸ್ಟ್ ಇಂಡೀಸ್‌ನ ಓಬೇಡ್ ಮೆಕಾಯ್ ಬೌಲಿಂಗ್‌ನಲ್ಲಿ ಹೆನ್ರಿಚ್ ಕ್ಲಾಸೆನ್ ಸತತ ಮೂರು ಸಿಕ್ಸರ್ ಬಾರಿಸಿದರು. ಅದು ಅವರು ಆರನೇ ಗೇರ್‌ನಲ್ಲಿ ಬ್ಯಾಟಿಂಗ್ ಮಾಡಲು ನೆರವಾಯಿತು. ಓಬೇಡ್ ಮೆಕಾಯ್ ಬೌಲ್ ಮಾಡಿದ ಕೊನೆಯ ಓವರ್‌ನಲ್ಲಿ ಬ್ಯಾಟ್‌ನೊಂದಿಗೆ 24 ಹೆಚ್ಚು ರನ್ ಚಚ್ಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications