Ind vs SA: ಭಾರತಕ್ಕೆ ಬಂದಿಳಿದ ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ದಿನಗಣನೆ ಆರಂಭವಾಗಿದ್ದು ಈ ಸರಣಿಯನ್ನಾಡಲು ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬಂದಿಳಿದಿದೆ. ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಪೂರ್ಣ ಸಾಮರ್ಥ್ಯದೊಂದಿಗೆ ಗುರುವಾರ ಬೆಳಿಗ್ಗೆ ದೆಹಲಿಯನ್ನು ತಲುಪಿದೆ. ಇನ್ನು ಐಪಿಎಲ್‌ನಲ್ಲಿ ಭಾಗವಹಿಸಿದ್ದ ಕ್ವಿಂಟನ್ ಡಿಕಾಕ್, ಡೇವಿಡ್ ಮಿಲ್ಲರ್ ಮತ್ತು ಕಗಿಸೋ ರಬಾಡ ಹಾಗೂ ಇತರ ಆಟಗಾರರು ಈಗಾಗಲೇ ಭಾರತದಲ್ಲಿದ್ದಾರೆ.
ಈ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಹೊಸ ಸದಸ್ಯನೆಂದರೆ ಟ್ರಿಸ್ಟನ್ ಸ್ಟಬ್ಸ್. ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸ್ಟಬ್ಸ್ ರಾಷ್ಟ್ರೀಯ ತಂಡದಲ್ಲಿ ಇದೇ ಮೊದಲ ಬಾರಿಗೆ ಅವಕಾಶ ಪಡೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿಯೂ ಸ್ಟಬ್ಸ್ ಆಡುವ ಅವಕಾಶವನ್ನು ಪಡೆದುಕೊಂಡಿದ್ದರು ಎಂಬುದು ಗಮನಾರ್ಹ ಅಂಶ. ಆದರೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡಿರುವ ಎರಡು ಇನ್ನಿಂಗ್ಸ್‌ನಲ್ಲಿ ನಿರಾಸೆ ಅನುಭವಿಸಿದ್ದು ಭಾರತದ ವಿರುದ್ಧದ ಸರಣಿಯಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ.
ದಾಖಲೆ ಬರೆಯಲು ಸಜ್ಜಾದ ಭಾರತ
ಭಾರತ ಸತತ 12 ಟಿ20 ಪಂದ್ಯಗಳ್ನು ಗೆದ್ದುಕೊಂಡಿದ್ದು ವಿಶ್ವದಾಖಲೆ ಬರೆಯಲು ಸಜ್ಜಾಗಿದೆ. ಆದರೆ ಈ ದಾಖಲೆಗೆ ಅಡ್ಡಿಯಾಗಲು ಟೆಂಬಾ ಬವುಮಾ ಪಡೆ ಸಿದ್ಧವಾಗಿದೆ. ಭಾರತ ಈ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ವಿಶ್ವದಾಖಲೆಯನ್ನು ಬರೆಯಲಿದೆ.
ಸರಣಿಯ ಮಾಹಿತಿ: ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಸರಣಿ ಜೂನ್ 9ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಐದು ಭಿನ್ನ ತಾಣಗಳಲ್ಲಿ ಈ ಸರಣಿ ಆಯೋಜನೆಯಾಗಲಿದೆ. ಮೊದಲ ಪಂದ್ಯ ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದರೆ ಎರಡನೇ ಪಂದ್ಯ ಜೂನ್ 12ರಂದು ಕಟಕ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಜೂನ್ 14ರಂದು ವಿಶಾಖಪಟ್ಟಣಂನಲ್ಲಿ ಆಯೋಜನೆಯಾಗಲಿದೆ. ನಾಲ್ಕನೇ ಪಂದ್ಯ ಜೂನ್ 17ರಂದು ರಾಜ್‌ಕೋಟ್‌ನಲ್ಲಿ ಆಯೋಜನೆಯಾದರೆ ಅಂತಿಮ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಈ ಪಂದ್ಯ ಜೂನ್ 19ರಂದು ನಡೆಯಲಿದೆ.
ಟಿ20 ಸರಣಿಗೆ ಭಾರತ ಸ್ಕ್ವಾಡ್: ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ ಟಿ20 ಬಳಗ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನಾರ್ಕಿಯಾ, ವಾಯ್ನೆ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ಟಬ್ರೈಜ್ ಶಮ್ಸಿ, ಸ್ಟೀಸ್ಟನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications