Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ v ದಕ್ಷಿಣ ಆಫ್ರಿಕಾ ಮುಖಾಮುಖಿ: ಟಾಸ್ ವರದಿ Live ಸ್ಕೋರ್

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ತಂಡ ಟಿ20 ಸರಣಿಯ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಐದು ದಿನಗಳ ಏಕದಿನ ಸರಣಿ ಇದಾಗಿದ್ದು ಆಸ್ಟ್ರೇಲಿಯಾ ತಂಡ ಕೆಲ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಮಿಚೆಲ್ ಮಾರ್ಶ್ ತಂಡವನ್ನು ಮುನ್ನಡೆಸುತ್ತಿದ್ದು ಸ್ಟೀವ್ ಸ್ಮಿತ್, ನಾಯಕ ಪ್ಯಾಟ್ ಕಮ್ಮಿನ್ಸ್ ಸೇರಿದಂತೆ ಕೆಲ ಆಟಗಾರರು ತಂಡದಿಂದ ಹೊರಗುಳಿದಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ತಂಡ ಬಹುತೇಕ ಪೂರ್ಣ ಸಾಮರ್ಥ್ಯದೊಂದಿಗೆ ಕಣಕ್ಕಿಳಿದಿದೆ.

South Africa vs Australia 1st ODI match toss report, playing XI and Live score

Live ಸ್ಕೋರ್ ಹೀಗಿದೆ

1
57475

ಇನ್ನು ಈ ಸರಣಿಗೂ ಮುನ್ನ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಮಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಮೂರು ಪಂದ್ಯಗಳ ಈ ಸರಣಿಯಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಕೂಡ ಆಸ್ಟ್ರೇಲಿಯಾ ಗೆದ್ದುಕೊಮಡಿದ್ದು ಆತ್ಮವಿಶ್ವಾಸದಲ್ಲಿದೆ. ಆತಿಥೇಯ ದಕ್ಷಿಣ ಆಫ್ರಿಕಾ ತಂಡ ತರಿನಲ್ಲಿಯೇ ವೈಟ್‌ವಾಶ್ ಅವಮಾನಕ್ಕೆ ತುತ್ತಾಗಿದ್ದು ಭಾರೀ ಹಿನ್ನಡೆ ಅನುಭವಿಸಿದೆ. ಈ ಸೋಲಿಗೆ ಏಕದಿನ ಮಾದರಿಯಲ್ಲಿ ಸೇಡು ತೀರಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ ದಕ್ಷಿಣ ಆಫ್ರಿಕಾ ತಂಡ.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ
ಬೆಂಚ್: ಡೆವಾಲ್ಡ್ ಬ್ರೆವಿಸ್, ಜಾರ್ನ್ ಫಾರ್ಚುಯಿನ್, ರೀಜಾ ಹೆಂಡ್ರಿಕ್ಸ್, ಸಿಸಂಡಾ ಮಗಾಲಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ, ವೇಯ್ನ್ ಪಾರ್ನೆಲ್, ಟ್ರಿಸ್ಟಾನ್ ಸ್ಟಬ್ಸ್

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಸೀನ್ ಅಬಾಟ್, ಆಶ್ಟನ್ ಅಗರ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ
ಬೆಂಚ್: ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಪೆನ್ಸರ್ ಜಾನ್ಸನ್, ಟಿಮ್ ಡೇವಿಡ್, ಆರನ್ ಹಾರ್ಡಿ, ತನ್ವೀರ್ ಸಂಘ, ನಾಥನ್ ಎಲ್ಲಿಸ್

Story first published: Thursday, September 7, 2023, 16:54 [IST]
Other articles published on Sep 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+