ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ: ಕೊರೊನಾ ವೈರಸ್‌ಗೆ ಮೊದಲ ಏಕದಿನ ಪಂದ್ಯ ರದ್ದು

South Africa vs England 1st ODI suspended

ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಎರಡು ತಂಡಗಳ ಆಟಗಾರರು ಉಳಿದುಕೊಂಡಿದ್ದ ಹೋಟೆಲ್‌ನ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಪತ್ತೆಯಾದ ಕಾರಣ ಭಾನುವಾರ ನಡೆಯಬೇಕಿದ್ದ ಪಂದ್ಯ ಮುಂದೂಡಿಕೆಯಾಗಿದೆ.

ಪಂದ್ಯದ ಆರಂಭಕ್ಕೂ ಮುನ್ನ ಹೊಸ ಸುತ್ತಿನ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರ ವರದಿಗಾಗಿ ಪಂದ್ಯದ ಆರಂಭಕ್ಕೂ ಮುನ್ನ ಕೆಲ ಕಾಲ ಇಂಗ್ಲೆಂಡ್ ಆಟಗಾರರ ವರದಿ ತಡವಾಗಿ ಬಂದಿತ್ತು. ಆದರೆ ಇದಕ್ಕೂ ಮುನ್ನ ಹೊಟೆಲ್ ಸಿಬ್ಬಂದಿಗಳ ವರದಿ ನೆಗೆಟಿವ್ ಬಂದ ಕಾರಣ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಟಾರ್‌ಸ್ಪೋರ್ಟ್ಸ್ ವರದಿ ಮಾಡಿದೆ.

'ಕನ್ಕಶನ್ ಸಬ್‌ಸ್ಟಿಟ್ಯೂಟ್' ದುರ್ಬಳಕೆ ಮಾಡದಂತೆ ಟೇಲರ್ ಎಚ್ಚರಿಕೆ!'ಕನ್ಕಶನ್ ಸಬ್‌ಸ್ಟಿಟ್ಯೂಟ್' ದುರ್ಬಳಕೆ ಮಾಡದಂತೆ ಟೇಲರ್ ಎಚ್ಚರಿಕೆ!

ಈ ಪಂದ್ಯ ಡಿಸೆಂಬರ್ 4ರಂದು ನಡೆಯಬೇಕಾಗಿತ್ತು. ಆದರೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದಲ್ಲಿ ಇಬ್ಬರು ಆಟಗಾರರು ಕೋರೊನಾ ವೈರಸ್‌ಗೆ ತುತ್ತಾಗಿದ್ದ ಕಾರಣ ಮೊದಲ ಬಾರಿಗೆ ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇದೀಗ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಹೋಟೆಲ್‌ನ ಇಬ್ಬರು ಸಿಬ್ಬಂದಿಗಳಿಗೆ ಕೊವಿಡ್ 19 ಧೃಡಪಟ್ಟಕಾರಣ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್‌ನ ಎಲ್ಲಾ ಆಟಗಾರರಿಗೂ ಶನಿವಾರ ಮತ್ತೊಂದು ಸುತ್ತಿನ ಪರೀಕ್ಷೆಯನ್ನು ನಡೆಸಲಾಗಿತ್ತು. ಆ ಪರೀಕ್ಷಾ ಫಲಿತಾಂಶಗಳ ಅಂಗೀಕಾರಕ್ಕಾಗಿ ಇಸಿಬಿ ಕಾಯುತ್ತಿರುವಾಗ, ಇಂದಿನ ಏಕದಿನ ಪಂದ್ಯದ ಪ್ರಾರಂಭವನ್ನು ವಿಳಂಬಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ "ಎಂದು ಎರಡೂ ಮಂಡಳಿಗಳು ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅದಾದ ಬಳಿಕ ಪಂದ್ಯವನ್ನು ರದ್ದುಗೊಳಿಸಲಾಯಿತು.

Story first published: Sunday, December 6, 2020, 15:25 [IST]
Other articles published on Dec 6, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X