South Africa vs Netherlands 2nd ODI: ಟಿ20 ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾರಾ ಹರಿಣಗಳು?
ದಕ್ಷಿಣ ಆಫ್ರಿಕಾ ನೆದರ್ಲ್ಯಾಂಡ್ಸ್ ವಿರುದ್ಧ ಮರುನಿಗದಿಪಡಿಸಲಾದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಮಾರ್ಚ್ 31ರಂದು ಶುಕ್ರವಾರ ನಡೆಯಲಿದೆ. ಬೆನೋನಿಯ ವಿಲೋಮೂರ್ ಪಾರ್ಕ್ ಈ ಮಹತ್ವದ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ದಕ್ಷಿಣ ಆಫ್ರಿಕಾ ತಂಡಕ್ಕೆ ಈ ಪಂದ್ಯ ಬಾರಿ ಮಹತ್ವದ್ದಾಗಿದೆ. 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯಲು ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾಗಿದೆ.
ದಕ್ಷಿಣ ಆಫ್ರಿಕಾ ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಸೋಲನುಭವಿಸದ್ದರು. ಆದರೆ, ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಟಿ20 ಸರಣಿಯನ್ನು ಸೋತಿದ್ದರೂ ಕೂಡ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ನೆದರ್ಲ್ಯಾಂಡ್ಸ್ ವಿರುದ್ಧದ ಎರಡೂ ಏಕದಿನ ಪಂದ್ಯಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಕಳೆದ ವರ್ಷ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ನೆದರ್ಲ್ಯಾಂಡ್ಸ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಶಾಕ್ ನೀಡಿದ್ದರು. ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ತಲುಪಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 13 ರನ್‌ಗಳಿಂದ ಸೋಲುವ ಮೂಲಕ ಟೂರ್ನಿಯಿಂದಲೇ ಹೊರಬಿದ್ದಿದ್ದರು. ಆ ಸೋಲಿನ ಅವಮಾನಕ್ಕೆ ಈಗ ಸೇಡು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದೆ.
ಜಿಂಬಾಬ್ವೆ ವಿರುದ್ಧ ಸರಣಿ ಸೋತ ನೆದರ್ಲ್ಯಾಂಡ್ಸ್
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಸ್ಕಾಟ್ ಎಡ್ವರ್ಡ್ಸ್ ಮುನ್ನಡೆಸಲಿದ್ದಾರೆ. ಇತ್ತೀಚೆಗೆ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಮೊದಲನೇ ಪಂದ್ಯವನ್ನು ಗೆದ್ದ ಅವರು, ಉಳಿದ ಎರಡು ಪಂದ್ಯಗಳಲ್ಲಿ ಸೋಲುವ ಮೂಲಕ 1-2 ಅಂತರದಲ್ಲಿ ಸರಣಿಯನ್ನು ಸೋತರು. ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ತೇಜ ನಿಡಮನೂರು ಅತ್ಯುತ್ತಮ ಫಾರ್ಮ್‌ನಲ್ಲಿರುವುದು ತಂಡಕ್ಕೆ ಆತ್ಮವಿಶ್ವಾಸ ನೀಡಿದೆ.
ಮ್ಯಾಕ್ಸ್ ಒ'ಡೌಡ್ ತಂಡದಲ್ಲಿ ಸ್ಥಿರವಾದ ಪ್ರದರ್ಶನ ನೀಡುತ್ತಿದ್ದಾರೆ. ಟಾಮ್ ಕೂಪರ್ ಮತ್ತು ವೆಸ್ಲಿ ಬ್ಯಾರೆಸಿ ಸಾಕಷ್ಟು ಅನುಭವ ಹೊಂದಿದ್ದಾರೆ. ಪಾಲ್ ವ್ಯಾನ್ ಮೀಕೆರೆನ್ ಮತ್ತು ಫ್ರೆಡ್ ಕ್ಲಾಸೆನ್ ನಿರೀಕ್ಷಿತ ಬೌಲಿಂಗ್ ಪ್ರದರ್ಶನ ನೀಡಿದರೆ, ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವು ಕಷ್ಟವಾಗಲಿದೆ. ಮಾರ್ಚ್ 31ರಂದು ಶುಕ್ರವಾರ, ಭಾರತೀಯ ಕಾಲಮಾನ ಸಂಜೆ 4.30ಕ್ಕೆ ಪಂದ್ಯ ಆರಂಭವಾಗಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲ್ಯಾಂಡ್ಸ್ ಪಿಚ್ ವರದಿ
ಬೆನೋನಿ ಪಿಚ್ ಬ್ಯಾಟರ್ ಗಳಿಗೆ ಹೆಚ್ಚಿನ ನೆರವು ನೀಡುವ ತಂಡವಾಗಿದೆ. ಇಲ್ಲಿ ಇದುವರೆಗೂ 20 ಏಕದಿನ ಪಂದ್ಯಗಳು ನಡೆದಿದ್ದು, 13 ಬಾರಿ ಚೇಸಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ 300ಕ್ಕಿಂತ ಹೆಚ್ಚು ರನ್ ಗಳಿಸುವ ಸಾಧ್ಯತೆ ಇದೆ. ಪಂದ್ಯದ ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಳೆಯಾದರೆ, ಪಂದ್ಯ ತಡವಾಗುವ ಸಾಧ್ಯತೆ ಇದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ನೆದರ್ಲ್ಯಾಂಡ್ಸ್: ಮ್ಯಾಕ್ಸ್ ಒ'ಡೌಡ್, ವಿಕ್ರಮಜಿತ್ ಸಿಂಗ್, ಟಾಮ್ ಕೂಪರ್, ವೆಸ್ಲಿ ಬರೆಸ್ಸಿ, ಸ್ಕಾಟ್ ಎಡ್ವರ್ಡ್ಸ್ (ನಾಯಕ/ ವಿಕೆಟ್ ಕೀಪರ್), ತೇಜಾ ನಿಡಮನೂರು, ರೋಲ್‌ಫಾಫ್ ವ್ಯಾನ್ ಡೆರ್ ಮೆರ್ವೆ, ಶರೀಜ್ ಅಹ್ಮದ್, ಪಾಲ್ ವ್ಯಾನ್ ಮೀಕೆರೆನ್, ಫ್ರೆಡ್ ಕ್ಲಾಸೆನ್, ರಯಾನ್ ಕ್ಲೈನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications