For Quick Alerts
ALLOW NOTIFICATIONS  
For Daily Alerts
 

SA vs NZ Semi-Final : ದಕ್ಷಿಣ ಆಫ್ರಿಕಾ-ನ್ಯೂಜಿಲೆಂಡ್ ಕಾದಾಟ; ಯಾರಿಗೆ ಫೈನಲ್ ಟಿಕೆಟ್?

ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯವು ಇಂದು ಮಾರ್ಚ್ 5 ರಂದು ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳು ಬಲಿಷ್ಠವಾಗಿದ್ದು, ಫೈನಲ್ ತಲುಪಲು ಹೋರಾಟ ನಡೆಸಲಿವೆ. ಎರಡನೇ ಸೆಮಿಫೈನಲ್ ಗೆದ್ದ ತಂಡ ಮಾರ್ಚ್ 9 ರಂದು ಟೀಮ್ ಇಂಡಿಯಾ ಜೊತೆ ಫೈನಲ್ ಆಡಲಿದೆ. ಈಗಾಗಲೇ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಫೈನಲ್ ತಲುಪಿದೆ.

ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿಗಳನ್ನು ಗೆಲ್ಲಲು ಹೆಣಗಾಡುತ್ತಿವೆ. ದಕ್ಷಿಣ ಆಫ್ರಿಕಾ ತಂಡ 'ಚೋಕರ್ಸ್' ಹಣೆಪಟ್ಟಿ ಕಳಚಲು ಮತ್ತೊಂದು ಅವಕಾಶವನ್ನು ಹೊಂದಿದೆ. ನ್ಯೂಜಿಲೆಂಡ್ ತಂಡ ಕೂಡ ಐಸಿಸಿ ಟ್ರೋಫಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಉಭಯ ತಂಡಗಳ ಕಾಳಗ ರೋಚಕವಾಗಿದೆ.

South Africa vs New Zealand second Champions Trophy 2025 semi-final Preview Report

ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಜಿಲೆಂಡ್ ಪರ ಇದುವರೆಗೆ ಟಾಮ್ ಲ್ಯಾಥಮ್, ಕೇನ್ ವಿಲಿಯಮ್ಸನ್ ಫಾರ್ಮ್‌ಗೆ ಮರಳುವುದರೊಂದಿಗೆ ಟಾಪ್ ಸ್ಕೋರರ್ ಆಗಿದ್ದಾರೆ. ಇದು ಕಿವೀಸ್ ಪಡೆಯ ಬ್ಯಾಟಿಂಗ್ ಬಲವನ್ನು ಹೆಚ್ಚಿಸಿದೆ. ಜೊತೆಗೆ ರಚಿನ್ ರವೀಂದ್ರ, ಡೇರಿಲ್ ಮಿಚೆಲ್ ಅವರ ಬ್ಯಾಟಿಂಗ್ ಬಲವೂ ತಂಡಗಿದೆ. ದಕ್ಷಿಣ ಆಫ್ರಿಕಾ ತಂಡವು ಅದ್ಭುತ ಸ್ಥಿರ ಪ್ರದರ್ಶನ ನೀಡುತ್ತಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಹರಿಣಗಳ ಪಡೆ ಅದ್ಭುತ ಫಾರ್ಮ್‌ನಲ್ಲಿದೆ. ಕಗಿಸೊ ರಬಾಡ, ಹೆನ್ರಿಕ್ ಕ್ಲಾಸೆನ್ ಮತ್ತು ಐಡೆನ್ ಮಾರ್ಕ್ರಾಮ್ ಅವರಂತಹ ಸ್ಟಾರ್ ಆಟಗಾರರು ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 73 ಬಾರಿ ಮುಖಾಮುಖಿಯಾಗಿವೆ. ಕಿವೀಸ್ ಪಡೆ ವಿರುದ್ಧ ಆಫ್ರಿಕಾ ಪ್ರಾಬಲ್ಯ ಸಾಧಿಸಿದೆ. ನ್ಯೂಜಿಲೆಂಡ್ 26 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆಫ್ರಿಕಾ 42 ಪಂದ್ಯಗಳಲ್ಲಿ ಗೆದ್ದಿದೆ. 5 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಚಾಂಪಿಯನ್ಸ್ ಟ್ರೋಫಿ 2017ರ ನಂತರ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ ಕೇವಲ ಮೂರು ಬಾರಿ ಮಾತ್ರ ಮುಖಾಮುಖಿಯಾಗಿವೆ.

ಉಭಯ ತಂಡಗಳು

ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್(ವಿಕೆಟ್‌ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒ'ರೂರ್ಕ್, ಜಾಕೋಬ್ ಡಫಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್‌ಮನ್, ನಾಥನ್ ಸ್ಮಿತ್.

ದಕ್ಷಿಣ ಆಫ್ರಿಕಾ ತಂಡ: ರಯಾನ್ ರಿಕಲ್ಟನ್, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್ (ವಿಕೆಟ್‌ಕೀಪರ್), ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್ (ನಾಯಕ), ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಟೆಂಬಾ ಬವುಮಾ, ಕಾರ್ಬಿನ್ ಬಾಷ್, ತಬ್ರೈಜ್ ಶಮ್ಸಿ, ಜಾರ್ಜ್ ಲಿಂಡೆ, ಟೋನಿ ಡಿ ಜೋರ್ಜಿ.

Story first published: Wednesday, March 5, 2025, 7:01 [IST]
Other articles published on Mar 5, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+