For Quick Alerts
ALLOW NOTIFICATIONS  
For Daily Alerts
 

ದ. ಆಫ್ರಿಕಾ vs ವೆಸ್ಟ್ ಇಂಡೀಸ್: ಮೊದಲ ಟೆಸ್ಟ್ 3ನೇ ದಿನದಾಟ, Live ಸ್ಕೋರ್

South Africa vs West Indies 1st Test day 3 Live score and Highlights, Centurion

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ವೆಸ್ಟ್ ಇಂಡೀಸ್ ತಂಡ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನಾಡುತ್ತಿದೆ. ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಭರ್ಜರಿ ಪೈಪೋಟಿ ನಡೆಸುತ್ತಿದ್ದು ಮೂರನೇ ದಿನದಾಟ ಸಾಕಷ್ಟು ಕುತೂಹಲಕಾರಿಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸಿರುವ ವೆಸ್ಟ್ ಇಂಡೀಸ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ನಲ್ಲಿ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಪಂದ್ಯದ ಕುತೂಹಲ ಹೆಚ್ಚಾಗಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 342 ರನ್‌ಗಳನ್ನು ಗಳಿಸಿದ್ದು ವೆಸ್ಟ್ ಇಂಡೀಸ್ ತಂಡವನ್ನು 212 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಹರಿಣಗಳ ಪಡೆ 130 ರನ್‌ಗಳ ಭರ್ಜರಿ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ವಿಂಡೀಸ್ ಬೌಲರ್‌ಗಳು ಆಫ್ರಿಕಾ ತಂಡಕ್ಕೆ ಭಾರೀ ಆಘಾತ ನೀಡಿದೆ.

Live ಸ್ಕೋರ್ ಹೀಗಿದೆ:

1
55681

ಎರಡನೇ ದಿನದಾಟದ ಅಂತ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 8 ಓವರ್‌ಗಳ ಬ್ಯಾಟಿಂಗ್ ನಡೆಸಿದ್ದು 49 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದೆ. ಇನ್ನು ಮೂರನೇ ದಿನದಾಟದ ಆರಂಭದಲ್ಲಿಯೂ ವೆಸ್ಟ್ ಇಂಡೀಸ್ ಬೌಲರ್‌ಗಳ ಆಕ್ರಮಣ ಮುಂದುವರಿದಿದ್ದು ಮೊದಲ ಸೆಶನ್‌ನಲ್ಲಿಯೇ ಮತ್ತಷ್ಟು ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಮೂರನೇ ದಿನದ ಪಂದ್ಯ ಮತ್ತಷ್ಟು ರೋಚಕತೆ ಹೆಚ್ಚಿಸಿಕೊಂಡಿದೆ.

ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಜೋರ್ಜಿ, ಟೆಂಬಾ ಬವುಮಾ (ನಾಯಕ), ಕೀಗನ್ ಪೀಟರ್ಸನ್, ಹೆನ್ರಿಚ್ ಕ್ಲಾಸೆನ್ (ವಾಕ್), ಸೆನುರಾನ್ ಮುತುಸ್ಯಾಮಿ, ಮಾರ್ಕೊ ಜಾನ್ಸೆನ್, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ಜೆರಾಲ್ಡ್ ಕೋಟ್ಜಿ
ಬೆಂಚ್: ಕೇಶವ್ ಮಹಾರಾಜ್, ಸೈಮನ್ ಹಾರ್ಮರ್, ವಿಯಾನ್ ಮುಲ್ಡರ್, ರಯಾನ್ ರಿಕೆಲ್ಟನ್

ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಾಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನನ್ ಗೇಬ್ರಿಯಲ್
ಬೆಂಚ್: ಗುಡಕೇಶ್ ಮೋಟಿ, ಡೆವೊನ್ ಥಾಮಸ್, ಅಲಿಕ್ ಅಥಾನಾಜೆ, ಅಕೀಮ್ ಜೋರ್ಡಾನ್

Story first published: Thursday, March 2, 2023, 14:36 [IST]
Other articles published on Mar 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+