South Africa vs West Indies: 2ನೇ ಏಕದಿನ, ಟಾಸ್ ರಿಪೋರ್ಟ್, ಆಡುವ ಬಳಗ, Live score

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ವೆಸ್ಟ್ ಇಂಡೀಸ್ ತಂಡ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಟಾಸ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೆಯ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಈಸ್ಟ್ ಲಂಡನ್‌ನ ಬಫೆಲ್ಲೋ ಪಾರ್ಕ್‌ನಲ್ಲಿ ಈ ಪಂದ್ಯ ಆಯೋಜನೆಯಾಗಿದೆ.
ಇನ್ನು ಈ ಪಂದ್ಯದ ಮೂಲಕ ದಕ್ಷಿಣ ಆಫ್ರಿಕಾ ಏಕದಿನ ತಂಡಕ್ಕೆ ನಾಲ್ವರು ಆಟಗಾರರು ಪದಾರ್ಪಣೆ ಮಾಡಿದ್ದಾರೆ. ರಿಯಾನ್ ರಿಕೆಲ್ಟನ್, ಟೋನಿ ಡಿ ಜೊರ್ಜಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಜೆರಾಲ್ಡ್ ಕೋಟ್ಜಿ ಇದೇ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ದಕ್ಷೀಣ ಆಫ್ರಿಕಾ ತಂಡವನ್ನು ಪ್ರತಿನಿಧಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
Live ಸ್ಕೋರ್ ಹೀಗಿದೆ
ಇನ್ನು ಈ ಸರಣಿಯ ಮೊದಲ ಪಂದ್ಯದ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದೆ. ಒಂದೂ ಎಸೆತ ಕಾಣದೆ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಈಸ್ಟ್ ಲಂಡನ್‌ನ ಬಫೆಲ್ಲೋ ಕ್ರೀಡಾಂಗಣದಲ್ಲಿಯೇ ಆ ಪಂದ್ಯ ಕೂಡ ಆಯೋಜನೆಯಾಗಿತ್ತು.
ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಯಾನ್ ರಿಕೆಲ್ಟನ್, ಟೋನಿ ಡಿ ಝೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಜಾರ್ನ್ ಫಾರ್ಟುಯಿನ್, ಜೆರಾಲ್ಡ್ ಕೋಟ್ಜಿ, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ
ಬೆಂಚ್: ಆಂಡಿಲೆ ಫೆಹ್ಲುಕ್ವಾಯೊ, ಸಿಸಂಡಾ ಮಗಾಲಾ, ಲಿಜಾಡ್ ವಿಲಿಯಮ್ಸ್, ವೇಯ್ನ್ ಪಾರ್ನೆಲ್
ವೆಸ್ಟ್ ಇಂಡೀಸ್ ಆಡುವ ಬಳಗ: ಕೈಲ್ ಮೇಯರ್ಸ್, ಬ್ರೆಂಡನ್ ಕಿಂಗ್, ಶಮರ್ ಬ್ರೂಕ್ಸ್, ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ನಿಕೋಲಸ್ ಪೂರನ್, ರೋವ್ಮನ್ ಪೊವೆಲ್, ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಯಾನಿಕ್ ಕ್ಯಾರಿಯಾ, ಅಕೀಲ್ ಹೋಸೇನ್, ಅಲ್ಜಾರಿ ಜೋಸೆಫ್
ಬೆಂಚ್: ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಶಾನನ್ ಗೇಬ್ರಿಯಲ್, ರೋಸ್ಟನ್ ಚೇಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications