South Africa vs West Indies: 3ನೇ ಏಕದಿನ ಪಂದ್ಯ, ಟಾಸ್ ರಿಪೋರ್ಟ್, ಆಡುವ ಬಳಗ, Live score

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ವೆಸ್ಟ್ ಇಂಡೀಸ್ ತಂಡ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಆತಿಥೆಯ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಪೋಚೆಸ್ಟ್ರೋಮ್‌ನ ಸೆನ್ವೆಸ್ ಪಾರ್ಕ್‌ನಲ್ಲಿ ಈ ಪಂದ್ಯ ಆಯೋಜನೆಯಾಗಿದೆ.
ಇನ್ನು ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನಾಲ್ಕು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಸ್ವತಃ ನಾಯಕ ಟೆಂಬಾ ಬವುಮಾ ಈ ಪಂದ್ಯದಿಂದ ಹೊರಗುಳಿದಿದ್ದು ಹ್ಯಾಮ್‌ಸ್ಟೀಂಜ್ ಸಮಸ್ಯೆಯಿಂದಾಗಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹೀಗಾಗಿ ಐಡೆನ್ ಮಾರ್ಕ್ರಮ್ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮತ್ತೊಂದೆಡೆ ವೆಸ್ಟ್ ಇಂಡೀಸ್ ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿದಿದೆ.
Live score ಹೀಗಿದೆ
ಇನ್ನು ಈ ಸರಣಿಯ ಮೊದಲ ಪಂದ್ಯ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ವೆಸ್ಟ್ ಇಂಡೀಸ್ ಅಕ್ಷರಶಃ ಅಬ್ಬರಿಸಿತು. ನಾಯಕ ಶಾಯ್ ಹೋಪ್ ಅಮೋಘ ಶತಕ ಸಿಡಿಸಿದ್ದು ಬೃಹತ್ ಮೊತ್ತಕ್ಕೆ ಕಾರಣಾದರು. ನಿಗದಿತ 50 ಓವರ್‌ಗಳಲ್ಲಿ ವೆಸ್ಟ್ ಇಂಡೀಸ್ 335/8 ರನ್‌ಗಳಿಸಿದ್ದು ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 287 ರನ್‌ಗಳಿಗೆ ಆಲೌಟ್ ಆಯಿತು.
ದಕ್ಷಿಣ ಆಫ್ರಿಕಾ ಆಡುವ ಬಳಗ: ರಿಯಾನ್ ರಿಕೆಲ್ಟನ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಜಾರ್ನ್ ಫಾರ್ಟುಯಿನ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಲುಂಗಿ ಎನ್ಗಿಡಿ
ಬೆಂಚ್: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ, ಟ್ರಿಸ್ಟಾನ್ ಸ್ಟಬ್ಸ್, ತಬ್ರೈಜ್ ಶಮ್ಸಿ, ಲಿಜಾದ್ ವಿಲಿಯಮ್ಸ್, ರೀಜಾ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ಸಿಸಂದಾ ಮಗಲಾ, ಕೇಶವ್ ಮಹಾರಾಜ್, ವಿಯಾನ್ ಮುಲ್ಡರ್
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಮರ್ ಬ್ರೂಕ್ಸ್, ಶಾಯ್ ಹೋಪ್ (ನಾಯಜ & ವಿಕೆಟ್ ಕೀಪರ್), ನಿಕೋಲಸ್ ಪೂರನ್, ರೋವ್ಮನ್ ಪೊವೆಲ್, ಜೇಸನ್ ಹೋಲ್ಡರ್, ಅಕೀಲ್ ಹುಸೈನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಯಾನಿಕ್ ಕ್ಯಾರಿಯಾ
ಬೆಂಚ್: ಶಾನನ್ ಗೇಬ್ರಿಯಲ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications