Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SA ODI: ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯ ರಾಂಚಿಯಲ್ಲಿ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾದ ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಟೆಸ್ಟ್‌ ಸರಣಿಯಲ್ಲಿ ಸೋಲು ಅನುಭವಿಸಿದ್ದು, ಈ ಸರಣಿ ಸೋಲಿನ ಕಹಿಯನ್ನು ಮೆಟ್ಟಿನಿಲ್ಲುವ ಪ್ಲ್ಯಾನ್ ಮಾಡಿಕೊಂಡಿದೆ. ಈ ವೇಳೆ ಟೀಮ್ ಇಂಡಿಯಾವನ್ನು ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್‌ ಮುನ್ನಡೆಸಲಿದ್ದಾರೆ. ಮಹತ್ವದ ಟಾಸ್‌ ದಕ್ಷಿಣ ಆಫ್ರಿಕಾ ಪಾಲಗಿದ್ದು, ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ.

ಕೋಲ್ಕತ್ತದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆಯ ಗಾಯಕ್ಕೆ ತುತ್ತಾಗಿದ್ದ ಶುಭಮನ್‌ ಗಿಲ್‌, ಎರಡನೇ ಟೆಸ್ಟ್‌ ಪಂದ್ಯ ಹಾಗೂ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ಏಕದಿನ ಸರಣಿಯಲ್ಲಿ ತಂಡವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಈ ವೇಳೆ ತಂಡಕ್ಕೆ ಅನುಭವಿ ಆಟಗಾರರಾದ ವಿರಾಟ್‌ ಕೊಹ್ಲಿ, ರೋಹಿತ್ ಶರ್ಮಾ ಅಂಗಳಕ್ಕೆ ಮರಳಿದ್ದಾರೆ.

South Africa wins toss and elects to bowl first against india in a crucial contest

ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ರುತುರಾಜ್‌ ಗಾಯಕ್ವಾಡ್ ಅವರಿಗೆ ಅವಕಾಶ ನೀಡಲಾಗಿದೆ. ಇವರು ಬಹುದಿನಗಳ ಬಳಿಕ ಟೀಮ್ ಇಂಡಿಯಾದ ಜೆರ್ಸಿಯನ್ನು ತೊಡಲಿದ್ದಾರೆ. ಇನ್ನು ಆರಂಭಿಕರಾಗಿ ರೋಹಿತ್‌ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್‌ ಕಣಕ್ಕೆ ಇಳಿಯಲಿದ್ದಾರೆ. ಈ ಮೂಲಕ ಏಕದಿನ ಫಾರ್ಮೆಟ್‌ನಲ್ಲೂ ಮಿಂಚಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

3 ವೇಗಿಗಳಿಗೆ ಅವಕಾಶ

ಆಲ್‌ರೌಂಡರ್ ರೂಪದಲ್ಲಿ ವಾಷಿಂಗ್ಟನ್‌ ಸುಂದರ್ ಹಾಗೂ ರವೀಂದ್ರ ಜಡೇಜಾ ಅವರು ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ಇನ್ನು ಮೂವರು ವೇಗದ ಬೌಲರ್‌ಗಳಾದ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣಾ ಅಂಗಳ ಪ್ರವೇಶಿಲಿದ್ದಾರೆ. ಇನ್ನು ನುರಿತ ಸ್ಪಿನ್ ಬೌಲರ್ ಆಗಿ ಕುಲ್‌ದೀಪ್ ಯಾದವ್ ಮೈದಾನ ಪ್ರವೇಶಿಸಲಿದ್ದಾರೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ.

ದಕ್ಷಿಣ ಆಫ್ರಿಕಾ ತಂಡ: ಐಡನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮ್ಯಾಥ್ಯೂ ಬ್ರೀಟ್ಜ್ಕೆ, ಟೋನಿ ಡಿ ಜೋರ್ಜಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಪ್ರೆನೆಲನ್ ಸುಬ್ರಾಯೆನ್, ನಾಂಡ್ರೆ ಬರ್ಗರ್, ಒಟ್ನೆಲ್ ಬಾರ್ಟ್‌ಮನ್.

Story first published: Sunday, November 30, 2025, 13:05 [IST]
Other articles published on Nov 30, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+