IND vs SA 2nd ODI: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ
ರಾಯ್ಪುರದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಮಹತ್ವದ ಟಾಸ್ ದಕ್ಷಿಣ ಆಫ್ರಿಕಾ ಪಾಲಾಗಿದೆ. ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ಮುಂದಾಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ತೆಂಬು ಬವುಮಾ ಮತ್ತೆ ತಂಡಕ್ಕೆ ಬಂದಿದ್ದಾರೆ. ದಕ್ಷಿಣ ಆಫ್ರಿಕಾ ಎರಡನೇ ಏಕದಿನ ಪಂದ್ಯಕ್ಕೆ 3 ಬದಲಾವಣೆಗಳನ್ನು ಮಾಡಿಕೊಂದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಪುಟಿದೇಳುವ ಕನಸನ್ನು ದಕ್ಷಿಣ ಆಫ್ರಿಕಾ ಹೊಂದಿದೆ.
ರಾಯ್ಪುರದಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕಾಗಿ ಭಾರತ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಮೊದಲ ಏಕದಿನ ಪಂದ್ಯದಲ್ಲಿ ಇದ್ದ ತಂಡವನ್ನೇ ಮುನ್ನಡೆಸಲು ಕೆಎಲ್ ರಾಹುಲ್ ತೀರ್ಮಾನಿಸಿದ್ದಾರೆ. ರಾಯ್ಪುರ್ ಅಂಗಳದಲ್ಲಿ ಅಭಿಮಾನಿಗಳು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಧಮಾಕೆದಾರ್ ಬ್ಯಾಟಿಂಗ್ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಈ ಮೈದನಾನದಲ್ಲಿ ಈ ಮೊದಲು ಭಾರತ ಒಂದು ಏಕದಿನ ಪಂದ್ಯವನ್ನು ಆಡಿದ್ದು, ಆ ಪಂದ್ಯದಲ್ಲಿ ಜಯ ಸಾಧಿಸಿದೆ.

ದಕ್ಷಿಣ ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಅಲಭ್ಯರಾಗಿದ್ದ ತೆಂಬು ಬವುಮಾ ಎರಡನೇ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇನ್ನು ಕೇಶವ್ ಮಹಾರಾಜ್ ಹಾಗೂ ಲುಂಗಿ ಎನ್‌ಗಿಡಿ ತಂಡಕ್ಕೆ ಕಂ ಬ್ಯಾಕ್ ಮಾಡಿದ್ದಾರೆ. ಈ ಪಂದ್ಯದಲ್ಲಿ ಶತಾಯ ಗತಾಯ ಗೆಲ್ಲಲೇ ಬೇಕು ಎಂಬ ಹಠಕ್ಕೆ ಬಿದ್ದಿರುವ ದಕ್ಷಿಣ ಆಫ್ರಿಕಾ ತಂಡದಲ್ಲಿ ಬದಲಾವಣೆ ಮಾಡಿದೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆ.ಎಲ್. ರಾಹುಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ.
ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್, ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ, ಮ್ಯಾಥ್ಯೂ ಬ್ರೀಟ್ಜ್ಕೆ, ಟೋನಿ ಡಿ ಜೋರ್ಜಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲುಂಗಿ ಎನ್‌ಗಿಡಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications