IND vs SA Test: ಭಾರತ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಕೋಲ್ಕತ್ತಾ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿದೆ. ಈ ಸರಣಿ ಉಭಯ ತಂಡಗಳಿಗೆ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜುಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಪಡೆಯುವ ಕನಸು ಎರಡೂ ತಂಡಗಳದ್ದಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಸಾಯಿ ಸುದರ್ಶನ್ ಅವರಿಗೆ ಬೆಂಚ್ ಮೇಲೆ ಕೂರಿಸಿದೆ. ಇವರ ಬದಲಿಗೆ ಟೀಮ್ ಇಂಡಿಯಾ ನಾಲ್ಕು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ. ಮೊದಲ ಟೆಸ್ಟ್‌ನಲ್ಲಿ ಧ್ರುವ್ ಜುರೇಲ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಈಗ ಬರುತ್ತಿರುವ ಮಾಹಿತಿಯ ಪ್ರಕಾರ ವಾಶಿಂಗ್ಟನ್ ಸುಂದರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ.

ರಬಾಡಾಗೆ ಗಾಯ
ದಕ್ಷಿಣ ಆಫ್ರಿಕಾ ತಂಡದ ಕಗಿಸೊ ರಬಾಡಾ ಪಕ್ಕೆಲುಬಿನ ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಇವರು ಗಾಯಕ್ಕೆ ತುತ್ತಾಗಿರುವುದು ನಿಶ್ಚಿತವಾಗಿ ದಕ್ಷಿಣ ಆಫ್ರಿಕಾ ತಂಡಕ್ಕೆ ಪೆಟ್ಟು ಬೀಳಲಿದೆ. ಉಳಿದಂತೆ ಸೆನುರಾನ್ ಮುತ್ತುಸಾಮಿ ಅವರ ಬದಲಿಗೆ ಕಾರ್ಬಿನ್ ಬಾಷ್ ತಂಡ ಸೇರಿಕೊಂಡಿದ್ದಾರೆ. ಉಳಿದಂತೆ ಬಾಷ್ ಮತ್ತು ಮಾರ್ಕೊ ಜಾನ್ಸೆನ್ ಪ್ರಮುಖ ವೇಗಿಗಳಾಗಿದ್ದಾರೆ, ಮತ್ತು ಮುಲ್ಡರ್ ಐದನೇ ಬೌಲಿಂಗ್ ಆಯ್ಕೆಯಾಗಿ ಕಾಣುತ್ತಾರೆ. ದಕ್ಷಿಣ ಆಫ್ರಿಕಾ ಕೇಶವ್ ಮಹಾರಾಜ್ ಮತ್ತು ಸೈಮನ್ ಹಾರ್ಮರ್ ಇಬ್ಬರ ಸ್ಪಿನ್ ಬೌಲರ್‌ಗಳ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
3 ವಿಕೆಟ್ ಕೀಪರ್
ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದಾಗ ಒಟ್ಟು ಮೂವರು ವಿಕೆಟ್ ಕೀಪರ್‌ಗಳು ಸ್ಥಾನ ಪಡೆದಿದ್ದಾರೆ. ರಿಷಭ್ ಪಂತ್ ನುರಿತ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆದಿದ್ದಾರೆ. ಇನ್ನು ಈ ಹಿಂದೆ ಟೆಸ್ಟ್‌ನಲ್ಲಿ ವಿಕೆಟ್ ಕೀಪರ್ ಆಗಿದ್ದ ಕೆಎಲ್ ರಾಹುಲ್, ಎರಡನೇ ವಿಕೆಟ್ ಕೀಪರ್ ಆಗಿ ತಂಡದಲ್ಲಿದ್ದ ಧ್ರುವ್ ಜುರೇಲ್ ಇದ್ದರು. ಆದರೆ ಇವರು ದಕ್ಷಿಣ ಆಫ್ರಿಕಾ ಎ ವಿರುದ್ಧ ನೀಡಿದ ಅಮೋಘ ಪ್ರದರ್ಶನದ ಫಲವಾಗಿ ಇವರಿಗೆ ಆಡುವ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ ತಂಡ: ಏಡನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಜೋರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆಯಿನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications