ಸತತ ಎರಡನೇ ಬಾರಿಗೆ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ, ಆಸೀಸ್‌ಗೆ ಆಘಾತ
ಮಹಿಳಾ ವಿಶ್ವಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ 8 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಟೂರ್ನಿಯ ಫೈನಲ್ ಪ್ರವೇಶಿಸಿದೆ. ಈ ಮೂಲಕ ಏಳನೇ ಬಾರಿ ಚಾಂಪಿಯನ್ ಪಟ್ಟಕ್ಕೆ ಏರುವ ಆಸೀಸ್ ಕನಸಿಗೆ ಪೆಟ್ಟು ಬಿದ್ದಿದೆ. ಹಾಲಿ ಚಾಂಪಿಯನ್ ಆಸೀಸ್ ತಂಡವನ್ನು ಮಣಿಸಿ ದಕ್ಷಿಣ ಆಫ್ರಿಕಾ ವನಿತೆಯರು ಸಾಧನೆ ಮಾಡಿದ್ದಾರೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ವನಿತೆಯರು 20 ಓವರ್‌ಗಳಲ್ಲಿ 5 ವಿಕೆಟ್‌ಗೆ 134 ರನ್ ಕಲೆ ಹಾಕಿದರು. ಸಾಧಾರಣ ಗುರಿಯನ್ನು ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ವನಿತೆಯರು 17.2 ಓವರ್‌ಗಳಲ್ಲಿ 2 ವಿಕೆಟ್‌ಗೆ 135 ರನ್ ಕಲೆ ಹಾಕಿ ಗೆಲುವಿನ ನಗೆ ಬೀರಿತು. ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯವನ್ನು ಸೋಲಿಸುವಲ್ಲಿ ದಕ್ಷಿಣ ಆಫ್ರಿಕಾ ಯಶಸ್ವಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಇದು ಮೂರನೇ ಗೆಲುವಾಗಿದೆ.

ಈಗಾಗಲೇ ಆರು ಬಾರಿ ಮಹಿಳಾ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದಿರುವ ಆಸ್ಟ್ರೇಲಿಯಾ ಇದೇ ಎರಡನೇ ಬಾರಿಗೆ ಫೈನಲ್‌ಗೂ ಮುನ್ನ ಟೂರ್ನಿಯಿಂದ ಹೊರ ಬಿದ್ದಿದೆ. ಆಸೀಸ್ 2009ರಿಂದ ಇಲ್ಲಿಯ ವರೆಗೆಗೂ ಫೈನಲ್‌ಗೆ ಸತತವಾಗಿ ಪ್ರವೇಶ ಪಡೆದಿತ್ತು. ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವಲ್ಲಿ ಆಸೀಸ್ ವಿಫಲವಾಗಿದೆ. ದಕ್ಷಿಣ ಆಫ್ರಿಕಾ ಮಹಿಳಾ ತಂಡ ತನ್ನ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿದೆ. ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಸತತ 15 ಗೆಲುವು ದಾಖಲಿಸಿದ್ದ ಆಸ್ಟ್ರೇಲಿಯಾ ಓಟಕ್ಕೆ ಬ್ರೇಕ್ ಬಿದ್ದಿದೆ.
ಮೊದಲು ಬ್ಯಾಟ್ ಮಾಡಿದ ಆಸೀಸ್ ತಂಡದ ಪರ ಗ್ರೇಸ್ ಹ್ಯಾರಿಸ್ (3), ಜಾರ್ಜಿಯಾ ವೇರ್ಹ್ಯಾಮ್ (5) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬೆತ್ ಮೂನಿ 2 ಬೌಂಡರಿ ಸೇರಿದಂತೆ 44 ರನ್ ಬಾರಿಸಿದರು. ನಾಯಕಿ ತಾಲಿಯಾ ಮೆಕ್‌ಗ್ರಾತ್ 27 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಮಧ್ಯಮ ಕ್ರಮಂಕಾದ ಆಟಗಾರ ಎಲ್ಲಿಸ್ ಪೆರ್ರಿ 31 ರನ್ ಬಾರಿಸಿ ಅಬ್ಬರಿಸಿದರು.
ದಕ್ಷಿಣ ಆಫ್ರಿಕಾ ಪರ ಆಯಬೊಂಗ ಖಾಕಾ 2, ಮರಿಜಾನ್ನೆ ಕಪ್ ಹಾಗೂ ನಾನ್ಕುಲುಲೇಕೋ ಮ್ಲಾಬಾ ತಲಾ ಒಂದು ವಿಕೆಟ್ ಕಬಳಿಸಿದರು.
ಕಳಪೆ ಆರಂಭ
ಲಾರಾ ವೊಲ್ವಾರ್ಡ್ಟ್ ಹಾಗೂ ತಜ್ಮಿನ್ ಬ್ರಿಟ್ಸ್ (15) ದಕ್ಷಿಣ ಆಫ್ರಿಕಾ ತಂಡಕ್ಕೆ ಕಳಪೆ ಆರಂಭವನ್ನು ನೀಡಿದರು. ಈ ಜೊಡಿ 25 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಎರಡನೇ ವಿಕೆಟ್‌ಗೆ ಅನ್ನೆಕೆ ಬಾಷ್ ಹಾಗೂ ಲಾರಾ ವೊಲ್ವಾರ್ಡ್ಟ್ ಜೊತೆಗೂಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 65 ಎಸೆತಗಳಲ್ಲಿ 96 ರನ್ ಸಿಡಿಸಿ ತಂಡವನ್ನು ಗೆಲುವಿನ ದಡಕ್ಕೆ ತಂದು ನಿಲ್ಲಿಸಿದರು. ಲಾರಾ 42 ರನ್ ಬಾರಿಸಿ ಔಟ್ ಆದರು. ಅನ್ನೆಕೆ ಬಾಷ್ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 74 ರನ್ ಸಿಡಿಸಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications