ICC Ranking: ಅಶ್ವಿನ್‌ಗೆ ಅಗ್ರಸ್ಥಾನ, ಬುಮ್ರಾಗೆ ನಾಲ್ಕನೇ ಸ್ಥಾನ
ಹೈದರಾಬಾದ್ ಟೆಸ್ಟ್ ನಲ್ಲಿ ಇಂಗ್ಲೆಂಡ್ ತಂಡ ಟೀಂ ಇಂಡಿಯಾವನ್ನು 28 ರನ್ ಗಳಿಂದ ಸೋಲಿಸಿದೆ. ಆದರೆ ಭಾರತ ತಂಡದ ಆಫ್ ಸ್ಪಿನ್ನರ್ ರವಿ ಅಶ್ವಿನ್ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಸೋತರೂ ಬೌಲರ್‌ಗಳ ಪ್ರದರ್ಶನ ಅಭಿಮಾನಿಗಳ ಹಬ್ಬದೂಟವನ್ನು ಉಣಬಡಿಸಿತ್ತು.
ಹೈದರಾಬಾದ್ ಟೆಸ್ಟ್‌ನಲ್ಲಿ ರವಿ ಅಶ್ವಿನ್ 6 ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿ ಅಬ್ಬರಿಸಿದ್ದಾರೆ. ಮತ್ತಿನನಗರಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನಕ್ಕೆ ಈಗ ಪ್ರತಿಫಲ ಸಿಕ್ಕಿದೆ.

ರವಿ ಅಶ್ವಿನ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಬೌಲರ್ ಆಗಿ ಮುಂದುವರಿದಿದ್ದಾರೆ. ಅದೇ ಸಮಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಒಂದು ಸ್ಥಾನ ಜಿಗಿತ ಕಂಡಿದ್ದಾರೆ. ಇದೀಗ ಜಸ್ಪ್ರೀತ್ ಬುಮ್ರಾ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ಜಸ್ಪ್ರಿತ್ ಬುಮ್ರಾ ಸಹ ಮೊದಲ ಟೆಸ್ಟ್‌ನಲ್ಲಿ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದ್ದರು.
ಅಶ್ವಿನ್ 853 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ 851, ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ 828, ಜಸ್ಪ್ರಿತ್ ಬುಮ್ರಾ 825, ಐದನೇ ಸ್ಥಾನದಲ್ಲಿ ಜೋಶ್ ಹ್ಯಾಜಲ್‌ವುಡ್ 818, ಆರನೇ ಸ್ಥಾನದಲ್ಲಿ ರವೀಂದ್ರ ಜಡೇಜಾ 754 ಅಂಕಗಳನ್ನು ಹೊಂದಿದ್ದಾರೆ.
ವಿರಾಟ್‌ಗೆ ಆರನೇ ಸ್ಥಾನ
ಇನ್ನು ಮೊದಲೆರೆಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಕಾಣಿಸಿಕೊಳ್ಳದ ವಿರಾಟ್ ಕೊಹ್ಲಿ ಐಸಿಸಿ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಇವರು 767 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಐಸಿಸಿ ಟೆಸ್ಟ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಕೇನ್ ವಿಲಿಯಮ್ಸನ್ 864 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಇನ್ನು ಇಂಗ್ಲೆಂಡ್‌ನ ಜೋ ರೂಟ್, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್, ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್, ಪಾಕಿಸ್ತಾದ ಬಾಬರ್ ಅಜಮ್ ಕ್ರಮವಾಗಿ ಎರಡರಿಂದ ಐದನೇ ಸ್ಥಾನದಲ್ಲಿದ್ದಾರೆ. ಇದಲ್ಲದೇ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರ-10ರಲ್ಲಿ ಸ್ಥಾನ ಪಡೆದ ಏಕೈಕ ಭಾರತದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ.

ಆಲ್‌ರೌಂಡರ್ ರವೀಂದ್ರಗೆ ಅಗ್ರ ಸ್ಥಾನ
ರವಿ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ, ರವೀಂದ್ರ ಜಡೇಜಾ ಟಾಪ್-10 ರಲ್ಲಿದ್ದಾರೆ. ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ 10ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಟಾಪ್-10 ಬೌಲರ್‌ಗಳಲ್ಲಿ 3 ಭಾರತೀಯ ಬೌಲರ್‌ಗಳು ಸೇರಿದ್ದಾರೆ. ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ, ಮೊದಲ ಮೂರು ಸ್ಥಾನಗಳನ್ನು ರವೀಂದ್ರ ಜಡೇಜಾ, ರವಿ ಅಶ್ವಿನ್ ಮತ್ತು ಶಕೀಬ್ ಅಲ್ ಹಸನ್ ಆಕ್ರಮಿಸಿಕೊಂಡಿದ್ದಾರೆ. ಇದಾದ ಬಳಿಕ ಇಂಗ್ಲೆಂಡ್‌ನ ಜೋ ರೂಟ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹೈದರಾಬಾದ್ ಟೆಸ್ಟ್‌ನಲ್ಲಿ ಜೋ ರೂಟ್ 5 ವಿಕೆಟ್ ಪಡೆದರು. ಅದೇ ಸಮಯದಲ್ಲಿ, ಈ ಪಟ್ಟಿಯಲ್ಲಿ, ಭಾರತದ ಆಲ್ ರೌಂಡರ್ ಅಕ್ಷರ್ ಪಟೇಲ್ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಹೈದರಾಬಾದ್ ಟೆಸ್ಟ್‌ನಲ್ಲಿ ಭಾರತ ತಂಡದಿಂದ ಗೆಲುವನ್ನು ಕಸಿದುಕೊಂಡ ಓಲಿ ಪೋಪ್ 20 ಸ್ಥಾನಗಳ ಬೃಹತ್ ಜಿಗಿತವನ್ನು ಮಾಡಿದ್ದಾರೆ. ಇದೀಗ ಒಲಿ ಪೋಪ್ 15ನೇ ಸ್ಥಾನಕ್ಕೆ ತಲುಪಿದ್ದಾರೆ. ಇದಲ್ಲದೇ ಇಂಗ್ಲೆಂಡ್ ಆರಂಭಿಕ ಆಟಗಾರ ಬೆನ್ ಡಕೆಟ್ ಶ್ರೇಯಾಂಕ ಕೂಡ ಸುಧಾರಿಸಿದೆ. ಬೆನ್ ಡಕೆಟ್ 5 ಸ್ಥಾನ ಗಳಿಸಿದ್ದಾರೆ. ಈಗ ಬೆನ್ ಡಕೆಟ್ 22ನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications