ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾದ ನಾಯಕತ್ವ ವಿಭಜನೆ ಬಗ್ಗೆ ಅಭಿಪ್ರಾಯ ಮಂಡಿಸಿದ ಶೋಯೆಬ್ ಅಖ್ತರ್

Split captaincy debate hard to ignore if Rohit performs well in Australia: Akhtar

ಈ ಬಾರಿಯ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗುವ ಮೂಲಕ ಚುಟುಕು ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕತ್ವ ರೊಹಿತ್ ಹೆಗಲಿಗೇರುವುದು ಉತ್ತಮ ಎಂಬ ಅಭಿಪ್ರಾಯ ದೊಡ್ಡ ಪ್ರಮಾಣದಲ್ಲಿ ಕೇಳಿಬಂದಿದೆ. ಈಗ ಆ ಅಭಿಪ್ರಾಯಕ್ಕೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಕೂಡ ಪ್ರತಿಕ್ರಿಯಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಾರತ ಸರಣಿಯನ್ನಾಡಲು ತೆರಳಿದ್ದು ಅಲ್ಲಿ ರೋಹಿತ್ ಶರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದರೆ ನಾಯಕತ್ವ ವಿಭಜನೆ ಕೂಗನ್ನು ತಳ್ಳಿ ಹಾಕುವುದು ಸುಲಭವಲ್ಲ ಎಂದು ಶೋಯೆಬ್ ಅಖ್ತರ್ ಹೇಳಿದ್ದಾರೆ. ಗಮನಿಸಬೇಕಾದ ವಿಚಾರವೆಂದರೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ಪಾಲ್ಗೊಳ್ಲುತ್ತಿಲ್ಲ. ಆದರೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್: ಖಚಿತಪಡಿಸಿದ ಐಸಿಸಿ2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್: ಖಚಿತಪಡಿಸಿದ ಐಸಿಸಿ

ಇದೇ ಸಂದರ್ಭದಲ್ಲಿ ಶೋಯೆಬ್ ಅಖ್ತರ್ ವಿರಾಟ್ ಕೊಹ್ಲಿಗೆ ಸಲಹೆಯೊಂದನ್ನೂ ನೀಡಿದ್ದಾರೆ. ಹೆಚ್ಚಿನ ಹೊರೆಯಿಂದಾಗಿ ವಿರಾಟ್ ಕೊಹ್ಲಿ ಆಯಾಸಗೊಂಡಿದ್ದರೆ ಕನಿಷ್ಟ ಪಕ್ಷ ಚುಟುಕು ಕ್ರಿಕೆಟ್‌ನಲ್ಲಿ ರೊಹಿತ್ ಶರ್ಮಾಗೆ ನಾಯಕತ್ವ ವಹಿಸುವುದು ಉತ್ತಮ ನಿರ್ಧಾರವಾಗಿರಲಿದೆ ಎಂದು ಅಖ್ತರ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರನ್ನು ಶೋಯೆಬ್ ಅಖ್ತರ್ ಶ್ರೇಷ್ಠ ಆಟಗಾರ ಎಂದು ಬಣ್ಣಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಡೀ ಕ್ರಿಕೆಟ್ ಲೋಕದ ಕಣ್ಣು ರೊಹಿತ್ ಶರ್ಮಾ ಅವರ ಪ್ರದರ್ಶನದ ಮೇಲೆ ಇರಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಬಿಗ್ ಬ್ಯಾಷ್ ಲೀಗ್ ನಿಯಮ ಬದಲಾವಣೆ ವಿರುದ್ಧ ಶೇನ್ ವಾಟ್ಸನ್ ಕಿಡಿಬಿಗ್ ಬ್ಯಾಷ್ ಲೀಗ್ ನಿಯಮ ಬದಲಾವಣೆ ವಿರುದ್ಧ ಶೇನ್ ವಾಟ್ಸನ್ ಕಿಡಿ

"ನನಗೆ ತಿಳಿದಂತೆ ವಿರಾಟ್ ತಂಡವನ್ನು ಮುನ್ನಡೆಸಲು ಬಹಳ ಉತ್ಸುಕನಾಗಿದ್ದಾರೆ. ಆತ ಎಷ್ಟು ಆಯಾಸಗೊಂಡಿದ್ದಾನೆ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತದೆ. ಅವರು 2010 ರಿಂದ ನಿರಂತರವಾಗಿ ಆಡುತ್ತಿದ್ದಾರೆ. 70 ಶತಕ ಹಾಗೂ ರನ್‌ಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಇಂತಾ ಸಂದರ್ಭದಲ್ಲಿ ಆತ ಆಯಾಸಗೊಂಡಿದ್ದರೆ ನಾಯಕತ್ವ ರೋಹಿತ್ ಶರ್ಮಾಗೆ ವಹಿಸುವುದು ಸೂಕ್ತ" ಎಂದು ಶೋಯೆಬ್ ಅಖ್ತರ್ ತಿಳಿಸಿದ್ದಾರೆ.

Story first published: Wednesday, November 18, 2020, 20:05 [IST]
Other articles published on Nov 18, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X