Women’s T20 Rankings: 21 ವರ್ಷದ ಸ್ಪಿನ್ ಬೌಲರ್ ಶ್ರೀ ಚರಣಿ ಇತಿಹಾಸ
ಭಾರತ ಮಹಿಳಾ ತಂಡ ಸದ್ಯ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದೆ. ತಾನಾಡಿದ ಮೊದಲ ಗುಂಪಿನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ 2 ಜಯ, 1 ಸೋಲು ಕಂಡಿದೆ. ಈ ಮೂಲಕ 4 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ವೇಳೆ ಟೀಮ್ ಇಂಡಿಯಾದ ಯುವ ಬೌಲರ್ ಶ್ರೀ ಚರಣಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಎಲ್ಲರ ಗಮನ ಸೆಳೆದಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೇವಲ ಒಂದು ವರ್ಷದೊಳಗೆ, ಅವರು ವಿಶ್ವದ ನಂಬರ್ 1 ಟಿ 20 ಬೌಲರ್ ಆಗಿದ್ದಾರೆ. ಅವರು ಪ್ರಸ್ತುತ 753 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಟಿ20 ಬೌಲರ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಅವರು ಕಳೆದ ವರ್ಷ ಜೂನ್ 28 ರಂದು ತಮ್ಮ ಮೊದಲ ಟಿ 20 ಪಂದ್ಯವನ್ನು ಆಡಿದ್ದರು.

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ 20 ವಿಶ್ವಕಪ್‌ನಲ್ಲಿ ಶ್ರೀ ಚರಣಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕೇವಲ ಮೂರು ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ಕಬಳಿಸಿದ್ದು, ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇವರು ಒಂದು ಸ್ಥಾನ ಬಡ್ತಿ ಪಡೆದಿದ್ದು, ಈ ಸಾಧನೆ ಮಾಡಿದ್ದಾರೆ.
ಶ್ರೀ ಚರಣಿಗೆ ಅಗ್ರಸ್ಥಾನ
ಭಾರತದ ಶ್ರೀ ಚರಣಿ ಇಂಗ್ಲೆಂಡ್‌ನ ಲಿನ್ಸೆ ಸ್ಮಿತ್‌ರನ್ನು ಹಿಂದಿಕ್ಕಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ಇಂಗ್ಲೆಂಡ್‌ನ ಚಾರ್ಲಿ ಡೀನ್ ಮೂರು ಪಂದ್ಯಗಳಲ್ಲಿ ಐದು ವಿಕೆಟ್‌ಗಳನ್ನು ಪಡೆದ ನಂತರ 733 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಲಿನ್ಸೆ ಸ್ಮಿತ್ ಈಗ 726 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇಂಗ್ಲೆಂಡ್ ತಂಡದ ಸೋಫಿ ಎಕ್ಲೆಸ್ಟೋನ್ ನಾಲ್ಕು ಸ್ಥಾನಗಳನ್ನು ಜಿಗಿದು ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ವೆಸ್ಟ್ ಇಂಡೀಸ್ ನಾಯಕಿ ಹೇಲಿ ಮ್ಯಾಥ್ಯೂಸ್ 11 ನೇ ಸ್ಥಾನ, ಆಸ್ಟ್ರೇಲಿಯಾದ ಕಿಮ್ ಗಾರ್ತ್ 20 ನೇ ಸ್ಥಾನ, ಪಾಕಿಸ್ತಾನದ ನಾಯಕಿ ಫಾತಿಮಾ ಸನಾ 25 ನೇ ಸ್ಥಾನ ಮತ್ತು ಐರ್ಲೆಂಡ್‌ನ ಓರ್ಲಾ ಪ್ರೆಂಡರ್‌ಗ್ಯಾಸ್ಟ್ 26 ನೇ ಸ್ಥಾನ ಪಡೆದಿದ್ದಾರೆ.
ಶಫಾಲಿ ಶ್ರೇಯಾಂಕದಲ್ಲಿ ಏರಿಕೆ
ಹೊಸ ಐಸಿಸಿ ಶ್ರೇಯಾಂಕದ ಪ್ರಕಾರ, ಮಹಿಳಾ ಟಿ 20 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಬದಲಾಗದೆ ಉಳಿದಿದೆ. ಆಸ್ಟ್ರೇಲಿಯಾದ ಆರಂಭಿಕ ಆಟಗಾರ್ತಿ ಜಾರ್ಜಿಯಾ ವೋಲ್ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಒಂದು ಸ್ಥಾನ ಬಡ್ತಿ ಪಡೆದಿದ್ದು, ಆರನೇ ಸ್ಥಾನ ತಲುಪಿದ್ದಾರೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಒಂದು ಸ್ಥಾನ ಬಡ್ತಿ ಪಡೆದು 10 ನೇ ಸ್ಥಾನದಲ್ಲಿದ್ದಾರೆ.

ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಜನವರಿ 25 ರಂದು ಬಾಂಗ್ಲಾದೇಶ ವಿರುದ್ಧ, ಜನವರಿ 28 ರಂದು ಆಸ್ಟ್ರೇಲಿಯಾ ವಿರುದ್ಧ ಲೀಗ್ ಹಂತದಲ್ಲಿ ಕಾದಾಟ ನಡೆಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications