ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮೊದಲ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಕಣಕ್ಕಿಳಿಯದ ಬಗ್ಗೆ ಕಾರಣ ಹೇಳಿದ ಕೋಚ್

SRH coach Trevor Bayliss reveale the reason for Kane Williamson did not play against KKR

ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಆದರೆ ಈ ಪಂದ್ಯದಲ್ಲಿ ಅನುಭವಿ ಕೇನ್ ವಿಲಿಯಮ್ಸನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣವೇನೆಂದು ಸನ್‌ರೈಸರ್ಸ್ ಹೈದರಾಬಾದ್ ತಂಡದ ಕೋಚ್ ಹೇಳಿದ್ದಾರೆ.

"ಕೇನ್ ವಿಲಿಯಮ್ಸನ್ ಪಂದ್ಯವನ್ನಾಡಲು ಸಮರ್ಥರಾಗಲು ಸ್ವಲ್ಪ ಹೆಚ್ಚಿ ಸಮಯಬೇಕು ಮತ್ತು ಸ್ವಲ್ಪ ಹೆಚ್ಚಿನ ಸಮಯವನ್ನು ನೆಟ್ಸ್‌ನಲ್ಲಿ ಅವರು ಕಳೆಯುವುದು ಸೂಕ್ತ ಎಂದು ನಾವು ಭಾವಿಸಿದ್ದೇವೆ. ಮುಂದಿನ ಪಂದ್ಯದಲ್ಲಿ ಅವರು ಆಡಲು ಸಂಪೂರ್ಣ ಸಮರ್ಥರಾಗಿದ್ದರೆ ಜಾನಿ ಬೈರ್‌ಸ್ಟೋವ್ ಸ್ಥಾನದಲ್ಲಿ ಆಡಲಿದ್ದಾರೆ" ಎಂದಿದ್ದಾರೆ.

ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್

"ಆದರೆ ನಾವು ಈ ಬಗ್ಗೆ ನಿಖರ ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಜಾನಿ ಬೈರ್‌ಸ್ಟೋವ್ ಇತ್ತೀಚೆಗೆ ಭಾರತದ ವಿರುದ್ಧ ನಡೆದ ಸರಣಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದರು. ಟೂರ್ನಿ ಮುಂದುವರಿಯುವಂತೆಯೇ ಕೇನ್ ವಿಲಿಯಮ್ಸನ್ ಖಂಡಿತವಾಗಿಯೂ ಆಡುವ ಬಳಗದಲ್ಲಿ ಕೂಡಿಕೊಳ್ಳಲಿದ್ದಾರೆ" ಎಂದು ಟ್ರೇವರ್ ಬೈಲಿಸ್ ಹೇಳಿದ್ದಾರೆ.

ಎಡ ಮೊಣಕೈ ಗಾಯದ ಕಾರಣದಿಂದಾಗಿ ಕೇನ್ ವಿಲಿಯಮ್ಸನ್ ಬಾಂಗ್ಲಾದೇಶದ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದಲೂ ಹೊರಗುಳಿದಿದ್ದರು. "ಕೇನ್ ವಿಲಿಯಮ್ಸನ್ ಮೊಣಕೈ ಗಾಯದ ಸುಧಾರಣೆಗೆ ಪ್ರಯತ್ನಿಸುತ್ತಿದ್ದಾರೆ. ಆದರೆ ದುರಾದೃಷ್ಟವಶಾತ್ ಹೆಚ್ಚಿನ ಸುಧಾರಣೆಯಾಗಿಲ್ಲ" ಎಂದು ನ್ಯೂಜಿಲೆಂಡ್ ಕ್ರಿಕೆಟ್‌ನ ಮೆಡಿಕಲ್ ಮ್ಯಾನೇಜರ್ ಡೈಲ್ ಶಕಲ್ ವಿವರಿಸಿದ್ದರು.

ಐಪಿಎಲ್ 2021: ಹೈದರಾಬಾದ್ ವಿರುದ್ಧ 10 ರನ್‌ಗಳ ಗೆಲುವು ಸಾಧಿಸಿದ ಕೊಲ್ಕತ್ತಾಐಪಿಎಲ್ 2021: ಹೈದರಾಬಾದ್ ವಿರುದ್ಧ 10 ರನ್‌ಗಳ ಗೆಲುವು ಸಾಧಿಸಿದ ಕೊಲ್ಕತ್ತಾ

ಸನ್‌ರೈಸರ್ಸ್ ಹೈದರಾಬಾದ್ ತಂಡ ತನ್ನ ಮುಂದಿನ ಪಂದ್ಯವನ್ನು ಆರ್‌ಸಿಬಿ ವಿರುದ್ಧ ಬುಧವಾರ ಆಡಲಿದೆ. ಆರ್‌ಸಿಬಿ ಮೊದಲ ಪಂದ್ಯವನ್ನು ಗೆದ್ದುಕೊಂಡಿದ್ದರೆ ಹೈದರಾಬಾದ್ ಸೋಲಿನೊಂದಿಗೆ ಟೂರ್ನಿ ಆರಂಭಿಸಿದೆ.

Story first published: Monday, April 12, 2021, 11:05 [IST]
Other articles published on Apr 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X