IPL 2023 SRH vs PBKS: ತವರಿನಲ್ಲಿ ಭರ್ಜರಿ ಜಯ ಸಾಧಿಸಿದ ಸನ್‌ರೈಸರ್ಸ್ ಹೈದರಾಬಾದ್
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿದ ಸನ್‌ರೈಸರ್ಸ್ ಹೈದರಾಬಾದ್ ಈ ಆವೃತ್ತಿಯ ಮೊದಲ ಗೆಲುವು ಕಂಡಿದೆ. ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗೆಲುವಿನ ನಗೆ ಬೀರಿತು.
ಮೊದಲ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಪಂಜಾಬ್ ಕಿಂಗ್ಸ್ ಮೂರನೇ ಪಂದ್ಯದಲ್ಲಿ ಮುಗ್ಗರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಬೌಲರ್ ಗಳು ಭಾರಿ ಆಘಾತ ನೀಡಿದರು. ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಪ್ರಭ್‌ಸಿಮ್ರಾನ್ ಅವರ ವಿಕೆಟ್ ಪಡೆಯುವ ಮೂಲಕ ಭುವನೇಶ್ವರ್ ಕುಮಾರ್ ಮಿಂಚಿದರು.

ಮಾರ್‍ಕೊ ಜಾನ್ಸನ್ ಕೂಡ ಮ್ಯಾಥ್ಯೂ ಶಾರ್ಟ್ ಮತ್ತು ಜಿತೇಶ್ ಶರ್ಮಾ ಅವರ ವಿಕೆಟ್ ಪಡೆದರು. 22 ರನ್‌ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಾಯಕ ಶಿಖರ್ ಧವನ್ ಮತ್ತು ಸ್ಯಾಮ್ ಕರನ್ 4ನೇ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ಆಡಿದರು. ಸ್ಯಾಮ್ ಕರನ್ 22 ರನ್ ಗಳಿಸಿ ಔಟಾಗುತ್ತಿದ್ದಂತೆ ಪಂಜಾಬ್ ಕಿಂಗ್ಸ್ ಕುಸಿತ ಕಂಡಿತು. 88 ರನ್ ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡು 100 ರನ್‌ಗಳ ಗಡಿ ದಾಟುವುದೇ ಅನುಮಾನ ಎನ್ನುವಂತಾಗಿತ್ತು.

ಶಿಖರ್ ಧವನ್ ಏಕಾಂಗಿ ಹೋರಾಟ
ಕೊನೆಯ ಎಸೆತದವರೆಗೂ ಶಿಖರ್ ಧವನ್ ಏಕಾಂಗಿ ಹೋರಾಟ ಮಾಡಿದರು. 9 ವಿಕೆಟ್ ಬಿದ್ದ ನಂತರ ಮೊಹಿತ್ ರಾಠಿ ಅವರಿಗೆ ಸ್ಟ್ರೈಕ್ ನೀಡದೇ ಪ್ರತಿ ಓವರ್ ನಲ್ಲೇ ಒಬ್ಬರೇ ಆಡಿದರು. 66 ಎಸೆತಗಳನ್ನು ಎದುರಿಸಿದ ಅವರು 12 ಬೌಂಡರಿ 5 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 99 ರನ್ ಗಳಿಸುವ ಮೂಲಕ ಕೂದಲೆಳೆ ಅಂತರದಲ್ಲಿ ಶತಕ ತಪ್ಪಿಸಿಕೊಂಡರು. ಶಿಖರ್ ಧವನ್ ಏಕಾಂಗಿ ಹೋರಾಟದ ನೆರವಿನಿಂದ ಪಂಜಾಬ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 143 ರನ್ ಗಳಿಸಿತು.
ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಮಯಾಂಕ್ ಮಾಕಂಡೆ ಮಾರಕ ಬೌಲಿಂಗ್ ಪ್ರದರ್ಶನ ನೀಡಿದರು. 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿದ ಅವರು 4 ವಿಕೆಟ್ ಪಡೆದು ಮಿಂಚಿದರು. ವೇಗದ ಬೌಲರ್ ಉಮ್ರಾನ್ ಮಲಿಕ್ ಮತ್ತು ಮಾರ್ಕೊ ಜಾನ್ಸನ್ ತಲಾ ಎರಡು ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು.

ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ ಆಸರೆ
ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಆರಂಭ ಪಡೆಯಲಿಲ್ಲ. ಮೊದಲ ಎರಡು ಪಂದ್ಯಗಳಲ್ಲಿ ವಿಫಲವಾಗಿದ್ದ ಹ್ಯಾರಿಬ್ರೂಕ್ ಇನ್ನಿಂಗ್ಸ್ ಆರಂಭಿಸಿದರು. 14 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಮಯಾಂಕ್ ಅಗರ್ವಾಲ್ ಕೂಡ 20 ಎಸೆತಗಳಲ್ಲಿ 21 ರನ್ ಗಳಿಸಿದರು. ಆದರೆ ರಾಹುಲ್ ತ್ರಿಪಾಠಿ ಮತ್ತು ನಾಯಕ ಐಡೆನ್ ಮಾರ್ಕ್ರಾಮ್ ಮೂರನೇ ವಿಕೆಟ್‌ಗೆ 100 ರನ್‌ಗಳ ಜೊತೆಯಾಟ ಆಡುವ ಮೂಲಕ ಸುಲಭವಾದ ಗೆಲುವು ತಂದುಕೊಟ್ಟರು.
ರಾಹುಲ್ ತ್ರಿಪಾಠಿ 48 ಎಸೆತಗಳಲ್ಲಿ 10 ಬೌಂಡರಿ 3 ಸಿಕ್ಸರ್ ನೆರವಿನಿಂದ ಅಜೇಯ 74 ರನ್ ಗಳಿಸಿ ಮಿಂಚಿದರೆ, ನಾಯಕ ಐಡೆನ್ ಮಾರ್ಕ್ರಾಮ್ 21 ಎಸೆತಗಳಲ್ಲಿ 6 ಬೌಂಡರಿ ಸಹಿತ 37 ರನ್ ಗಳಿಸಿದರು. ಸತತ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲನೇ ಗೆಲುವು ಕಂಡು ನಿಟ್ಟುಸಿರು ಬಿಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications