SRH ತಂಡಕ್ಕೆ ಎಂಟ್ರಿ ನೀಡಿದ ಸ್ಟಾರ್ ವೇಗದ ಬೌಲರ್
ಚಾಂಪಿಯನ್ಸ್ ಟ್ರೊಫಿಯ ಫೈನಲ್ ಮಾರ್ಚ್ 9 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಈ ಟೂರ್ನಿ ಮುಗಿದ ಬಳಿಕ ವಿಶ್ವ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಆರಂಭವಾಗಲಿದೆ. ಮಾರ್ಚ್ 22 ರಿಂದ ಐಪಿಎಲ್ ಟೂರ್ನಿಗಳು ಆರಂಭವಾಗಲಿವೆ. ಈ ಟೂರ್ನಿಯ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಎಲ್ಲ ತಂಡಗಳು ಈ ನಿಟ್ಟಿನಲ್ಲಿ ಪ್ರ್ಯಾಕ್ಟಿಸ್ ಆರಂಭಿಸಿವೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಮುಂಬರುವ ಋತುವಿನ ಆರಂಭಕ್ಕೂ ಮುನ್ನ ಒಂದು ದೊಡ್ಡ ಘೋಷಣೆ ಮಾಡಿದೆ.
ಐಪಿಎಲ್ ಮೆಗಾ ಹರಾಜಿನಲ್ಲಿ ತಂಡಕ್ಕೆ ಸೇರಿಸಿಕೊಂಡಿದ್ದ ಇಂಗ್ಲೆಂಡ್‌ನ ವೇಗದ ಬೌಲರ್ ಬ್ರೈಡನ್ ಕಾರ್ಸ್ ಗಾಯದಿಂದಾಗಿ ಆಡಲು ಸಾಧ್ಯವಾಗುವುದಿಲ್ಲ ಎಂದು ತಿಳಿದು ಬಂದಿದೆ. ಇವರ ಬದಲಿಗೆ ತಂಡ ಬೇರೆ ಆಟಗಾರನಿಗೆ ರೆಡ್ ಕಾರ್ಪೆಟ್ ಹಾಕಿದೆ. ಹಾಗಿದ್ದರೆ ಆ ಪ್ಲೇಯರ್ ಯಾರು ಎಂಬ ಬಗ್ಗೆ ವರದಿ ಇಲ್ಲಿದೆ.

ಸೌದಿಯಲ್ಲಿ ನಡೆದಿದ್ದ ಮೆಗಾ ಹರಾಜಿನಲ್ಲಿ ಅನ್ ಸೋಲ್ಡ್ ಆಗಿದ್ದ ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ಗೆ ಸನ್ ರೈಸರ್ಸ್ ತಂಡ ಮಣೆ ಹಾಕಿದೆ. ಸನ್ ತಂಡವನ್ನು ಸೇರಿರುವ ಆಟಗಾರ ದಕ್ಷಿಣ ಆಫ್ರಿಕಾದ ಭರವಸೆಯ ವೇಗದ ಬೌಲರ್ ವಿಯಾನ್ ಮುಲ್ಡರ್. ಸನ್ ರೈಸರ್ಸ್ ಹೈದರಾಬಾದ್ ತಂಡ ಅವರನ್ನು 75 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ. ಚಾಂಪಿಯನ್ಸ್ ಟ್ರೋಫಿಯ ಭಾಗವಾಗಿದ್ದ ಮುಲ್ಡರ್, ಸ್ಥಿರ ಪ್ರದರ್ಶನ ನೀಡಿದ್ದರು. ದಕ್ಷಿಣ ಆಫ್ರಿಕಾ ಬುಧವಾರ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 50 ರನ್‌ಗಳಿಂದ ಸೋಲು ಕಂಡಿತ್ತು.
ಮುಲ್ಡರ್ ಸಾಧನೆ
ವಿಯಾನ್ ಮುಲ್ಡರ್ ಮೂರು ಸ್ವರೂಪಗಳಲ್ಲಿ ದಕ್ಷಿಣ ಆಫ್ರಿಕಾ ಪರ ಆಡಿದ ಅನುಭವಿ ವೇಗಿ. ಇವರು ಆಡಿದ 18 ಟೆಸ್ಟ್ ಪಂದ್ಯಗಳಲ್ಲಿ 30 ವಿಕೆಟ್ ಕಬಳಿಸಿದ್ದಾರೆ. ಇಷ್ಟೇ ಅಲ್ಲದೆ ಬ್ಯಾಟಿಂಗ್‌ನಲ್ಲೂ ಇವರು ಕಮಾಲ್ ಪ್ರದರ್ಶನ ನೀಡಿದ್ದಾರೆ. ಇವರ ಬುಟ್ಟಿಯಲ್ಲಿ 1 ಶತಕ ಹಾಗೂ 1 ಅರ್ಧಶತಕ ಇದ್ದು, 589 ರನ್ ಕಲೆ ಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲೂ ಇವರು ಬಿಗುವಿನ ದಾಳಿಯಿಂದ ಹೆಸರುವಾಸಿ. ಇವರು ಆಡಿರುವ 25 ಪಂದ್ಯಗಳಲ್ಲಿ 276 ರನ್ ಸಿಡಿಸಿದ್ದು, 22 ವಿಕೆಟ್ ಕಿತ್ತಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 23 ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಸಕ್ತ ಐಪಿಎಲ್‌ನ ಮೊದಲ ಪಂದ್ಯವನ್ನು ಆಡಲಿದೆ. ಈ ವೇಳೆ ಎಸ್‌ಆರ್‌ಎಚ್ ರಾಜಸ್ಥಾನ ರಾಯಲ್ಸ್ ವಿರುದ್ಧ ಕಾದಾಟವನ್ನು ನಡೆಸಲಿದೆ. ಪಾಕಿಸ್ತಾನ ಆಯೋಜಿತ ಚಾಂಪಿಯನ್ಸ್ ಟ್ರೋಫಿಯಲ್ಲಿ ಇವರು ಆಡಿರುವ ಮೂರು ಪಂದ್ಯಗಳಲ್ಲಿ ಆರು ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ವಿಕೆಟ್ ಪಡೆದಿದ್ದು ದೊಡ್ಡ ಸಾಧನೆ ಆಗಿದೆ. ನಿಶ್ಚಿತವಾಗಿ ಇವರು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಎಂಟ್ರಿ ನೀಡಿದ್ದು ತಂಡಕ್ಕೆ ಆನೆ ಬಲ ಬಂದಂತೆ ಆಗಿರುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications