Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SRH vs CSK: ಟಾಸ್ ಗೆದ್ದ ಸನ್‌ರೈಸರ್ಸ್ ಹೈದ್ರಾಬಾದ್ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

CSK VS SRH

ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸನ್‌ರೈಸರ್ಸ್ ಹೈದ್ರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್‌ ಗೆದ್ದ ಎಸ್‌ಆರ್‌ಎಚ್‌ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಸಿಎಸ್‌ಕೆ ಮೊದಲು ಬ್ಯಾಟಿಂಗ್ ಮಾಡಲಿದೆ.

ಸನ್‌ರೈಸರ್ಸ್ ಹೈದ್ರಾಬಾದ್ ತಂಡದಲ್ಲಿ ಎರಡು ಬದಲಾವಣೆಯಾಗಿದ್ದು, ಶಶಾಂಕ್ ಸಿಂಗ್ ಮತ್ತು ದಕ್ಷಿಣ ಆಫ್ರಿಕಾದ ವೇಗಿ ಮಾರ್ಕೊ ಜಾನ್ಸನ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದು, ಕೇನ್ ವಿಲಿಯಮ್ಸನ್ ಪಡೆ ಮತ್ತಷ್ಟು ಬಲಿಷ್ಠವಾಗಿದೆ.

ಇನ್ನು ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೇವಲ ಓರ್ವ ಆಟಗಾರನ ಬದಲಾವಣೆಯಾಗಿದ್ದು, ಪ್ರಿಟೋರಿಯಸ್ ಬದಲು ಶ್ರೀಲಂಕಾದ ತೀಕ್ಷಣ ಅವಕಾಶ ಪಡೆದಿದ್ದಾರೆ.

ಈಗಾಗಲೇ ಮೂರು ಪಂದ್ಯಗಳಲ್ಲಿ ಸೋಲನ್ನ ಕಂಡಿರುವ ಸಿಎಸ್‌ಕೆ ಈ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದು, ಸನ್‌ರೈಸರ್ಸ್ ಹೈದ್ರಾಬಾದ್ ಕೂಡ ಗೆಲುವಿನ ಅಕೌಂಟ್ ತೆರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಸಿಎಸ್‌ಕೆ ಮತ್ತು ಸನ್‌ರೈಸರ್ಸ್ ಹೈದ್ರಾಬಾದ್ ತಂಡದ ಪ್ಲೇಯಿಂಗ್ ಇಲೆವೆನ್ ಮಾಹಿತಿ ಈ ಕೆಳಗಿದೆ.

ಸನ್‌ರೈಸರ್ಸ್ ಹೈದ್ರಾಬಾದ್ ಪ್ಲೇಯಿಂಗ್ 11
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ನಾಯಕ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್(ವಿಕೆಟ್ ಕೀಪರ್), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್

ಚೆನ್ನೈ ಸೂಪರ್ ಕಿಂಗ್ಸ್‌ ಪ್ಲೇಯಿಂಗ್ 11
ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ(ನಾಯಕ), ಶಿವಂ ದುಬೆ, ಎಂಎಸ್ ಧೋನಿ(ವಿಕೆಟ್ ಕೀಪರ್), ಡ್ವೇನ್ ಬ್ರಾವೊ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

T20 ಕ್ರಿಕೆಟ್ ನಲ್ಲಿ ಎಲ್ಲರನ್ನೂ ಮೀರಿಸಿ ಶಿಖರ್ ಧವನ್ ಮಾಡಿದ ದಾಖಲೆ ಏನು? | Oneindia Kannada

Story first published: Saturday, April 9, 2022, 15:16 [IST]
Other articles published on Apr 9, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+