Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SRH vs DC: ಡೆಲ್ಲಿ ಮಣಿಸಿದ ಸನ್‌ಗೆ 47 ರನ್ ಜಯ: ಹೈದರಾಬದ್‌ಗೆ 3ನೇ ಸ್ಥಾನ

ಹೈದರಾಬಾದ್: ಮುತ್ತಿನ ನಗರಿಯಲ್ಲಿ ಮುತ್ತಿನಂತ ಆಟವನ್ನು ಆಡಿದ ಸನ್‌ ರೈಸರ್ಸ್‌ ಹೈದರಾಬಾದ್ ಸೊಗಸಾದ ಪ್ರದರ್ಶನ ನೀಡಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ. ಸನ್‌ ತಂಡದ ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ ಬಾರಿಸಿದ ಶತಕ ಹಾಗೂ ಇಶಾನ್ ಮಲಿಂಗ್ ಅವರ ಮಾರಕ ದಾಳಿಯ ನೆರವಿನಿಂದ ಹೈದರಾಬಾದ್ ತಂಡ 19ನೇ ಆವೃತ್ತಿ ಐಪಿಎಲ್‌ನ 31ನೇ ಪಂದ್ಯದಲ್ಲಿ 47 ರನ್‌ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು. ಈ ಮೂಲಕ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 97 ರನ್‌ ಗಳ ಕಾಣಿಕೆ ನೀಡಿತು. ಈ ವೇಳೆ ಟ್ರಾವಿಸ್ ಹೆಡ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 37 ರನ್ ಬಾರಿಸಿದರು.

SRH vs DC

ಎರಡನೇ ವಿಕೆಟ್‌ಗೆ ಅಭಿಷೇಕ್ ಹಾಗೂ ಇಶಾನ್ ಜೋಡಿ ಅಬ್ಬರಿಸಿದರು. ಈ ಜೋಡಿ 35 ಎಸೆತಗಳಲ್ಲಿ 79 ರನ್‌ ಸಿಡಿಸಿದರು. ಈ ಹಂತದಲ್ಲಿ ಇಶಾನ್‌ ಕಿಶನ್‌ ಅವರಿಗೆ ಅದೃಷ್ಟ ಕೈ ಹಿಡಿಯಲಿಲ್ಲ. ಇವರು 25 ರನ್‌ ಬಾರಿಸಿದಾಗ ರನೌಟ್ ಆದರು. ಮೂರನೇ ವಿಕೆಟ್‌ಗೆ ಹೆನ್ರಿಕ್‌ ಕ್ಲಾಸೆನ್ ಹಾಗೂ ಅಭಿಷೇಕ್ ಶರ್ಮಾ ಜೋಡಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಈ ಜೋಡಿ 32 ಎಸೆತಗಳಲ್ಲಿ ಅಜೇಯ 68 ರನ್‌ ಸೇರಿಸಿತು. ಈ ಮೂಲಕ ಹೈದರಾಬಾದ್ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 242 ರನ್‌ ಗಳಿಸಿತು.

ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ 10 ಬೌಂಡರಿ, 10 ಸಿಕ್ಸರ್ ಸಹಾಯದಿಂದ 198ರ ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 135 ರನ್‌ ಸಿಡಿಸಿದರು.

ಜವಾಬ್ದಾರಿ ಮರೆತ ಡೆಲ್ಲಿ ಬ್ಯಾಟರ್ಸ್

ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಸ್ಟಾರ್ ಆಟಗಾರ ಪತುಮ್ ನಿಸ್ಸಂಕಾ (8) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಇವರು ಮೊದಲ ವಿಕೆಟ್‌ಗೆ ಕೆಎಲ್ ರಾಹುಲ್ ಜೊತೆಗೂಡಿ 21 ರನ್ ಸೇರಿಸಿತು. ಎರಡನೇ ವಿಕೆಟ್‌ಗೆ ನಿತೀಶ್ ರಾಣಾ ಹಾಗೂ ಕೆಎಲ್ ರಾಹುಲ್ ಜೋಡಿ ಭರ್ಜರಿ ಜೊತೆಯಾಟವನ್ನು ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಸನ್ ತಂಡ ವಿಫಲವಾಯಿತು. ಈ ಜೋಡಿ 45 ಎಸೆತಗಳಲ್ಲಿ 86 ರನ್‌ ಸೇರಿಸಿತು. ಈ ಹಂತದಲ್ಲಿ ಕೆಎಲ್ ರಾಹುಲ್ ದೊಡ್ಡ ಹೊಡೆತಕ್ಕೆ ಮುಂದಾಗಿ ಸ್ಕ್ವೇರ್ ಲೆಗ್‌ನಲ್ಲಿ ಸಾಕಿಬ್‌ ಹುಸೇನ್‌ ಎಸೆತದಲ್ಲಿ ಅಭಿಷೇಕ್‌ ಶರ್ಮಾಗೆ ಕ್ಯಾಚ್ ನೀಡಿದರು.

SRH vs DC

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭರವಸೆಯ ಆಟಗಾರ ನಿತೀಶ್ ರಾಣಾ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 30 ಎಸೆತಗಳಲ್ಲಿ 57 ರನ್‌ ಸಿಡಿಸಿದರು. ಸಮೀರ್ ರಿಜ್ವಿ 41, ಟ್ರಿಸ್ಟನ್ ಸ್ಟಬ್ಸ್ 27 ರನ್ ಬಾರಿಸಿ ಸೋಲಿನ ಅಂತರ ಕಡಿಮೆ ಮಾಡಿದರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 195 ರನ್‌ ಸೇರಿಸಿ ಸೋಲು ಕಂಡಿತು.

Story first published: Tuesday, April 21, 2026, 23:55 [IST]
Other articles published on Apr 21, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+