ಮೇ 25 ಶನಿವಾರ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಫೈನಲ್ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ನಡುವೆ ಭಾನುವಾರ ಮೇ 26 ರಂದು ನಡೆಯಲಿದೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರಾತ್ರಿ 7:30 ಕ್ಕೆ ಆರಂಭವಾಗಲಿದೆ.

ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಕೋಲ್ಕತ್ತಾ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಐಪಿಎಲ್ 2024ರ ಟ್ರೋಫಿಯೊಂದಿಗೆ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಚಿತ್ರೀಕರಣದ ನಂತರ ಸನ್‌ರೈಸರ್ಸ್ ಹೈದರಾಬಾದ್ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿಯಲಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಫೋಟೋಶೂಟ್‌ನಲ್ಲಿ ಪ್ಯಾಟ್ ಕಮಿನ್ಸ್ ಟ್ರೋಫಿಯ ಬಲಭಾಗದಲ್ಲಿ ನಿಂತಿರುವುದು ಕಂಡುಬಂದಿದೆ. ಹೀಗಾಗಿ ಹೈದರಾಬಾದ್ ಐಪಿಎಲ್ ಟ್ರೋಫಿ ಗೆಲ್ಲಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿದ್ದಾರೆ
ಈ ಹಿಂದೆಯೂ ಕೂಡ ಫೈನಲ್‌ಗೆ ಮುನ್ನ ಟ್ರೋಫಿಯೊಂದಿಗೆ ನಡೆದ ಫೋಟೋಶೂಟ್‌ನಲ್ಲಿ ಯಾವ ನಾಯಕ ಟ್ರೋಫಿಯ ಬಲಭಾಗದಲ್ಲಿ ನಿಲ್ಲುತ್ತಾನೋ, ಅವನ ತಂಡ ಫೈನಲ್ ಪಂದ್ಯವನ್ನು ಗೆಲ್ಲುತ್ತದೆ ಎಂಬುದು ಅಭಿಮಾನಿಗಳ ನಂಬಿಕೆಯಾಗಿದೆ.