SRH vs LSG: ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ ಎರಡು ಪಂದ್ಯಗಳಲ್ಲಿಯೂ ಸೋಲು ಅನುಭವಿಸಿರುವ ಹೈದರಾಬಾದ್ ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಖಾತೆ ತೆರೆಯುವ ಯತ್ನದಲ್ಲಿದೆ. ಇತ್ತ ಲಕ್ನೋ ಗೆಲುವಿನ ಲಯವನ್ನು ಮುಂದುವರಿಸುವ ಉತ್ಸಾಹದಲ್ಲಿದೆ.
ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದರೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಆದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಆಲ್‌ರೌಂಡರ್ ಜೇಸನ್ ಹೋಲ್ಡರ್ ಆಡುವ ಬಳಗಕ್ಕೆ ಸೇರಿಕೊಂಡಿದ್ದು ಚಮೀರಾ ಆಡುವ ಬಳಗದಿಂದ ಹೊರಗುಳಿದಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್
ಬೆಂಚ್ ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ಶಶಾಂಕ್ ಸಿಂಗ್, ರವಿಕುಮಾರ್ ಸಮರ್ಥ್, ವಿಷ್ಣು ವಿನೋದ್, ಪ್ರಿಯಾಂ ಗಾರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಮಾರ್ಕೊ ಜಾನ್ಸೆನ್, ಸೌರಭ್ ದುಬೆ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಎವಿನ್ ಲೂಯಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಅವೇಶ್ ಖಾನ್
ಬೆಂಚ್: ಶಹಬಾಜ್ ನದೀಮ್, ಕೃಷ್ಣಪ್ಪ ಗೌತಮ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್, ಕೈಲ್ ಮೇಯರ್ಸ್, ಮನನ್ ವೋಹ್ರಾ, ದುಷ್ಮಂತ ಚಮೀರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications