ಕ್ಲಾಸೆನ್, ಟ್ರಾವಿಸ್ ಹೆಡ್ ಅಬ್ಬರ, ಸನ್‌ಗೆ ಜಯ: ಮುಂಬೈಗೆ ಸೋಲು
ಮುಂಬೈ: ಭರವಸೆ ಆಟಗಾರ ಹೆನ್ರಿಕ್ ಕ್ಲಾಸೆನ್ ಹಾಗೂ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಬಾರಿಸಿದ ಅರ್ಧಶತಕದ ಬಲದಿಂದ ಸನ್‌ರೈಸರ್ಸ್ ಹೈದರಾಬಾದ್ 19ನೇ ಆವೃತ್ತಿ ಐಪಿಎಲ್‌ನ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿ, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. ತವರಿನಲ್ಲಿ ಗೆಲುವಿನ ಟ್ರ್ಯಾಕ್‌ಗೆ ಮರಳುವ ಮುಂಬೈ ಆಸೆ ಕಮರಿದೆ.
ಹೈದರಾಬಾದ್ ತಂಡದ ಆರಂಭಿಕರು ದೊಡ್ಡ ಮೊತ್ತವನ್ನು ಹೇಗೆ ಬೆನ್ನಟ್ಟಬೇಕು ಎಂಬುದನ್ನು ತೋರಿಸಿದರು. ಸ್ಫೋಟಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಮೊದಲ ವಿಕೆಟ್ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿತು. ಈ ಜೋಡಿ ಪವರ್ ಪ್ಲೇನ ಸಂಪೂರ್ಣ ಲಾಭ ಪಡೆದು ಬ್ಯಾಟ್ ಮಾಡಿತು. ಈ ಜೋಡಿ 8.4 ಓವರ್‌ಗಳಲ್ಲಿ 129 ರನ್ ಸೇರಿಸಿತು. ಈ ಹಂತದಲ್ಲಿ ಅಭಿಷೇಕ್ ಶರ್ಮಾ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 45 ರನ್ ಬಾರಿಸಿ ಔಟ್ ಆದರು. ಇವರು ಔಟ್ ಆಗುತ್ತಿದ್ದಂತೆ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 76 ರನ್ ಸೇರಿಸಿದರು. ಇವರ ಇನಿಂಗ್ಸ್‌ನಲ್ಲಿ 4 ಬೌಂಡರಿ, 8 ಸಿಕ್ಸರ್ ಸೇರಿವೆ.

ಭರವಸೆಯ ಆಟಗಾರ ಇಶಾನ್ ಕಿಶನ್ ಬಂದು ಹೋಗುವ ಸಂಪ್ರದಾಯ ಮುಗಿಸಿದರು. 4ನೇ ವಿಕೆಟ್‌ಗೆ ನಿತೀಶ್ ಕುಮಾರ್ ರೆಡ್ಡಿ ಹಾಗೂ ಭರವಸೆಯ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಜೋಡಿ ಸಮಯೋಚಿತ ಬ್ಯಾಟಿಂಗ್ ನಡೆಸಿತು. ಈ ಜೋಡಿ ಸಹ ರನ್ ರೇಟ್ ಒತ್ತಡ ಯಾವುದೇ ಹಂತದಲ್ಲಿ ತಂಡದ ಮೇಲೆ ಬೀಳದಂತೆ ನೋಡಿಕೊಂಡಿತು. ಈ ಜೋಡಿ 40 ಎಸೆತಗಳಲ್ಲಿ 80 ರನ್ ಸೇರಿಸಿತು. ಈ ಹಂತದಲ್ಲಿ ನಿತೀಶ್ ಕುಮಾರ್ ರೆಡ್ಡಿ 21 ರನ್ ಬಾರಿಸಿ ಔಟ್ ಆದರು.
ಕ್ಲಾಸೆನ್ ಅರ್ಧಶತಕ
ಹೆನ್ರಿಕ್ ಕ್ಲಾಸೆನ್ ಕ್ಲಾಸಿಕ್ ಬ್ಯಾಟಿಂಗ್ ನಡೆಸಿ ತಂಡಕ್ಕೆ ಜಯದ ಮಾಲೆ ತೊಡಿಸಿದರು. ಇವರು 7 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 65 ರನ್ ಬಾರಿಸಿ ಜಯದಲ್ಲಿ ಮಿಂಚಿದರು. ಅಂತಿಮವಾಗಿ ಹೈದರಾಬಾದ್ 18.4 ಓವರ್‌ಗಳಲ್ಲಿ 4 ವಿಕೆಟ್‌ಗೆ 249 ರನ್ ಸೇರಿಸಿ ಜಯ ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ರಯಾನ್ ರಿಕಲ್ಟನ್ ಹಾಗೂ ವಿಲ್ ಜಾಕ್ಸ್ ಅಬ್ಬರಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ ಸೊಗಸಾದ ಜೊತೆಯಾಟದ ಕಾಣಿಕೆ ನೀಡಿತು. ವಿಲ್ ಜಾಕ್ಸ್ ತಂಡ ನೀಡಿದ್ದ ಜವಾಬ್ದಾರಿಯನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿದರು. ಮೊದಲ ವಿಕೆಟ್‌ಗೆ ಜಾಕ್ಸ್ (46) ಹಾಗೂ ಹಾಗೂ ರಿಕಲ್ಟನ್ ಜೋಡಿ 7.1 ಓವರ್‌ಗಳಲ್ಲಿ 93 ರನ್ ಸೇರಿಸಿತು.
ರಿಕಲ್ಟನ್ ಶತಕ
ಈ ಲೀಗ್‌ನಲ್ಲಿ ಸೂರ್ಯಕುಮಾರ್ ಯಾದವ್ ರನ್ ಕಲೆ ಹಾಕುವಲ್ಲಿ ವಿಫಲರಾದರು.ಮೂರನೇ ವಿಕೆಟ್‌ಗೆ ರಿಕಲ್ಟನ್ ಹಾಗೂ ನಮನ್ ಧೀರ್ ಜೋಡಿ 31 ಎಸೆತಗಳಲ್ಲಿ 55 ರನ್ ಸೇರಿಸಿತು. ನಮನ್ 22 ರನ್ ಬಾರಿಸಿದರು. 4ನೇ ವಿಕೆಟ್‌ಗೆ ಆರಂಭಿಕ ರಿಕಲ್ಟನ್ ಜೊತೆಗೂಡಿದ ನಾಯಕ ಹಾರ್ದಿಕ್ (31) ಜೋಡಿ 56 ರನ್ ಸೇರಿಸಿತು. ಆರಂಭಿಕ ರಿಕಲ್ಟನ್ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದರು. ಇವರು 55 ಎಸೆತಗಳಲ್ಲಿ 10 ಬೌಂಡರಿ, 8 ಸಿಕ್ಸರ್ ಸಹಾಯದಿಂದ ಅಜೇಯ 123 ರನ್ ಬಾರಿಸಿದರು. ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 243 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications