SRH vs MI: ಆಡುವ ಬಳಗದಿಂದ ಹೊರಬಿದ್ದ ಮಾರಕ ವೇಗಿ ಉಮ್ರಾನ್ ಮಲಿಕ್
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣೆಸಾಡುತ್ತಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ತಂಡ ಒಂದು ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ತಂಡದ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರನ್ನು ಈ ಪಂದ್ಯದಿಂದ ಹೊರಗಿಡಲಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಿದಾಗ ಉಮ್ರಾನ್ ಮಲಿಕ್ ಅತ್ಯಂತ ದುಬಾರಿ ಬೌಲಿಂಗ್ ನಡೆಸಿದ್ದರು. ಕೇವಲ ಎರಡು ಓವರ್‌ಗಳ ಬೌಲಿಂಗ್ ದಾಳಿ ನಡೆಸಿದ್ದ ಉಮ್ರಾನ್ ಬರೊಬ್ಬರಿ 36 ರನ್‌ಗಳನ್ನು ನೀಡಿ ಒಂದು ವಿಎಕಟ್ ಪಡೆದುಕೊಂಡಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಅವರನ್ನು ಆಡುವ ಬಳಗದಿಂದ ಹೊರಗಿಡಲಾಗಿದೆ.

ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೆ ನಾಲ್ಕು ಪಂದ್ಯಗಳನ್ನು ಆಡದ್ದು ಇಂದು ಐದನೇ ಪಂದ್ಯವನ್ನು ಆಡಲು ಕಣಕ್ಕಿಳಿದಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ನಾಲ್ಕು ಅಂಕಗಳನ್ನು ಹೊಂದಿದ್ದು ಅಂಕಪಟ್ಟಿಯಲ್ಲಿ ಮೇಲಕ್ಕೇರಲು ಎರಡು ತಂಡಗಳು ಕೂಡ ಇಂದು ಪ್ರಯತ್ನಿಸಲಿದೆ.
ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications