SRH vs PBKS IPL 2024: ಹೈದರಾಬಾದ್-ಪಂಜಾಬ್ ಮುಖಾಮುಖಿ; ಟಾಸ್, ಆಡುವ 11ರ ಬಳಗ ವರದಿ
ಮೇ 19 ಭಾನುವಾರ, ಐಪಿಎಲ್ 2024ರ ಲೀಗ್ ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ.
ಮೊದಲು ಟಾಸ್ ಗೆದ್ದ ಪಂಜಾಬ್‌ದ ಕಿಂಗ್ಸ್ ತಂಡದ ನಾಯುಕ ಜಿತೇಶ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ಯಾಟ್ ಕಮಿನ್ಸ್ ಮುನ್ನೆಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಎಸ್‌ಆರ್‌ಹೆಚ್ ಒಟ್ಟು 13 ಪಂದ್ಯಗಳನ್ನು ಆಡಿದ್ದು, 7 ರಲ್ಲಿ ಗೆಲುವು, 5 ರಲ್ಲಿ ಸೋಲು ಕಂಡಿದೆ. ಪ್ರಸ್ತುತ 15 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 13 ಪಂದ್ಯಗಳನ್ನು ಆಡಿದೆ. 5 ಪಂದ್ಯ ಗೆದ್ದು 8 ಸೋಲು ಕಂಡಿದೆ. 10 ಅಂಕಗಳಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಎಸ್‌ಆರ್‌ಹೆಚ್ vs ಪಿಬಿಕೆಎಸ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಎಸ್‌ಆರ್‌ಹೆಚ್ vs ಪಿಬಿಕೆಎಸ್ ಆಡುವ 11ರ ಬಳಗ
ಸನ್‌ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್(ವಿ.ಕೀ), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್.
ಪಂಜಾಬ್ ಕಿಂಗ್ಸ್ ತಂಡ: ಪ್ರಭಾಸಿಮ್ರಾನ್ ಸಿಂಗ್, ಅಥರ್ವ ಟೈಡೆ, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ(ವಿ.ಕೀ ಮತ್ತು ನಾಯಕ), ಅಶುತೋಷ್ ಶರ್ಮಾ, ಶಿವಂ ಸಿಂಗ್, ಹರ್ಪ್ರೀತ್ ಬ್ರಾರ್, ರಿಷಿ ಧವನ್, ಹರ್ಷಲ್ ಪಟೇಲ್, ರಾಹುಲ್ ಚಹಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications