Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SRH vs RCB: ಆರ್‌ಸಿಗೆ ಜಯದ ಕನಸು; ಪ್ಲೇಯಿಂಗ್‌ ಇಲೆವೆನ್, ಪಿಚ್‌ ವರದಿ, ನೇರಪ್ರಸಾರ, ಸಮಯದ ಪೂರ್ಣ ಮಾಹಿತಿ

ಹೈದರಾಬಾದ್: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್‌) ತಂಡಗಳು 19ನೇ ಆವೃತ್ತಿಯ ಐಪಿಎಲ್‌ನ 67ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ರೋಚಕತೆ ಹುಟ್ಟಿಸಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ 2 ಅಂಕಗಳನ್ನು ಕಲೆ ಹಾಕಿ, ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆಯುವ ಆಸೆ ಉಭಯ ತಂಡಗಳದ್ದಾಗಿದೆ.

ಹಾಲಿ ಚಾಂಪಿಯನ್ಸ್ ಆರ್‌ಸಿಬಿ ಈಗಾಗಲೇ 13 ಪಂದ್ಯಗಳಲ್ಲಿ 9 ಗೆಲುವಿನೊಂದಿಗೆ 18 ಅಂಕಗಳನ್ನು ಪಡೆದು ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ಇನ್ನು ಲೀಗ್‌ ಹಂತದ ಕೊನೆಯ ಪಂದ್ಯವನ್ನು ಗೆದ್ದು ಅಗ್ರ ಸ್ಥಾನವನ್ನು ಪಡೆಯುವ ಆಸೆ ರಜತ್ ಪಾಟಿದಾರ್ ಹೊಂದಿದೆ. ಎಸ್‌ಆರ್‌ಎಚ್‌ ತಂಡ ಆಡಿದ 13 ಪಂದ್ಯಗಳಲ್ಲಿ 8 ಜಯ, 5 ಸೋಲು ಕಂಡಿದ್ದು 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ದೊಡ್ಡ ಅಂತರದಿಂದ ಗೆಲುವು ದಾಖಲಿಸಿದರೆ ಮಾತ್ರ ಟಾಪ್‌ 2ನಲ್ಲಿ ಸ್ಥಾನ ಪಡೆಯಬಹುದಾಗಿದೆ.

SRH vs RCB

ಪಿಚ್ ಯಾರಿಗೆ ನೆರವು ನೀಡಲಿದೆ?

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ನೆರವು ನೀಡಲಿದೆ. ಈ ಪಿಚ್‌ನಲ್ಲಿ ರನ್‌ ಸುರಿಮಳೆ ನಿರೀಕ್ಷಿಸಬಹುದಾಗಿದೆ. ಈ ಮೈದಾನದಲ್ಲಿ ಟಾಸ್‌ ಗೆದ್ದ ತಂಡ ಮೊದಲು ಬ್ಯಾಟ್ ಮಾಡುವ ಅವಕಾಶವನ್ನು ಮಾಡುವ ಸಾಧ್ಯತೆ ಇದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಹೆಚ್ಚು ಬಾರಿ ಗೆದ್ದಿದೆ. ಇನ್ನು ಈ ಮೈದಾನದಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಕಡಿಮೆ. ವೇಗದ ಬೌಲರ್‌ಗಳಿಗೆ ಪಿಚ್‌ನಲ್ಲಿ ಬೌನ್ಸ್ ಸಿಗುವ ಸಾಧ್ಯತೆ ಇದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ ಯಾವೆಲ್ಲಾ ಆಟಗಾರರಿಗೆ ಅವಕಾಶ ನೀಡಬಹುದು?

ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಶ್ರೇಯಸ್ ಅಯ್ಯರ್/ಕಮಿಂದು ಮೆಂಡಿಸ್, ಪ್ಯಾಟ್ ಕಮಿನ್ಸ್ (ನಾಯಕ), ಕ್ರುನಾಲ್ ಪಾಂಡ್ಯ, ಹರ್ಷಲ್ ಪಟೇಲ್, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ ಇಲೆವೆನ್‌ ಹೇಗಿರಲಿದೆ?

ಜ್ಯಾಕೋಬ್ ಬೆಥೆಲ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್ (ನಾಯಕ), ದೇವದತ್ ಪಡಿಕ್ಕಲ್, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ರಸಿಖ್ ಸಲಾಮ್ ದಾರ್.

1
4-2026

ಪ್ರಮುಖ ಅಂಕಿ ಅಂಶಗಳು

  1. ಉಭಯ ತಂಡಗಳು ಈ ಲೀಗ್‌ನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಜಯ ಸಾಧಿಸಿತ್ತು.

  2. ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಸೀಸನ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಿದ್ದು, 54.20 ರ ಸರಾಸರಿಯಲ್ಲಿ ರನ್ ಕಲೆ ಹಾಕುತ್ತಿದ್ದಾರೆ.

  3. ಆರ್‌ಸಿಬಿ ತಂಡದ ಸ್ಟಾರ್ ವೇಗದ ಬೌಲರ್‌ ಭುವನೇಶ್ವರ್ ಕುಮಾರ್ ಈ ಅಂಗಳದಲ್ಲಿ 48 ವಿಕೆಟ್‌ ಪಡೆದ ಹೆಗ್ಗಳಿಕೆ ಪಡೆದಿದ್ದಾರೆ. ಇವರು ಶುಕ್ರವಾರ 2 ವಿಕೆಟ್‌ ಪಡೆದಲ್ಲಿ ಒಂದೇ ಮೈದಾನದಲ್ಲಿ 50 ವಿಕೆಟ್‌ ಪಡೆದ ಸಾಧನೆ ಮಾಡಬಹುದಾಗಿದೆ.

ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ನೋಡಬಹುದು?

ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್‌ ನಡುವಣ ಲೀಗ್‌ ಹಂತದ ಪಂದ್ಯವನ್ನು ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ನೋಡಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ ಸ್ಟಾರ್‌ನಲ್ಲಿ ನೋಡಬಹುದಾಗಿದೆ.

ಆರ್‌ಸಿಬಿ, ಎಸ್‌ಆರ್‌ಎಚ್‌ ಪಂದ್ಯ ಆರಂಭವಾಗುವುದು ಯಾವಾಗ?

19ನೇ ಆವೃತ್ತಿಯ 67ನೇ ಪಂದ್ಯ ಸಂಜೆ 7.30ಕ್ಕೆ ನಡೆಯಲಿದೆ. ಇನ್ನು ಪಂದ್ಯಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.

Story first published: Friday, May 22, 2026, 7:20 [IST]
Other articles published on May 22, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+