SRH vs RCB: ಮದಗಜಗಳ ಕಾದಾಟಕ್ಕೆ ವೇದಿಕೆ ಸಜ್ಜು: ಅಗ್ರಸ್ಥಾನದ ಕನಸಿನಲ್ಲಿ ಆರ್‌ಸಿಬಿ
ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 19ನೇ ಆವೃತ್ತಿಯ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದ್ದು, ಅಗ್ರ 2 ಸ್ಥಾನಗಳನ್ನು ತಲುಪಲು ಇದು ಕೊನೆಯ ಅವಕಾಶವಾಗಿದೆ. ಆರ್‌ಸಿಬಿ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿ ಅಗ್ರ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಕನಸು ಕಾಣುತ್ತಿದೆ.
ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ತಂಡಗಳು ಈಗಾಗಲೇ ಐಪಿಎಲ್ ಇತಿಹಾಸದಲ್ಲಿ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್‌ಸಿಬಿ 12 ಪಂದ್ಯದಲ್ಲಿ ಜಯ ಸಾಧಿಸಿದರೆ, ಎಸ್‌ಆರ್‌ಎಚ್ 14 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಬಾರಿಯ ಲೀಗ್‌ನಲ್ಲಿ ಉಭಯ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು ಮದಗಜಗಳ ಕಾದಾಟವನ್ನು ನೋಡಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಆರ್‌ಸಿಬಿ ತಂಡದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪ್ರಸಕ್ತ ಲೀಗ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇವರು ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದು, ಭರವಸೆ ಮೂಡಿಸಿದ್ದಾರೆ. ಇನ್ನು ಇವರಿಗೆ ಜಾಕೊಬ್ ಬೆಥೆಲ್ ಅವರು ಉತ್ತಮ ಸಾಥ್ ನೀಡಬೇಕಿದೆ. ಕಳೆದ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ನಾಯಕ ರಜತ್ ಪಾಟಿದಾರ್ ಮತ್ತೆ ಅಖಾಡಕ್ಕೆ ಇಳಿಯಬಹುದಾಗಿದೆ. ಇನ್ನು ಭರವಸೆಯ ಆಟಗಾರ ದೇವದತ್ ಪಡಿಕ್ಕಲ್ ರನ್‌ಗಳಿಸುತ್ತಿದ್ದು ಭರವಸೆಯ ಮೂಡಿಸಿದ್ದಾರೆ. ಉಳಿದ ಬ್ಯಾಟರ್‌ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರೆ 2 ಅಂಕದ ಕನಸು ನನಸಾಗುತ್ತದೆ.
ಭುವಿ ಆಕರ್ಷಣೆ
ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಇವರು ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಾಡಬಲ್ಲರು. ಭುವಿ ಸದ್ಯ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರಿಗೆ ಜೋಶ್ ಹ್ಯಾಜಲ್‌ವುಡ್ ಉತ್ತಮ ಸಾಥ್ ನೀಡುತ್ತಿದ್ದಾರೆ. ರಸಿಕ್ ಸಲಾಂ ದಾರ್, ಕೃನಾಲ್ ಪಾಂಡ್ಯ, ಸುಯಶ್ ಶರ್ಮಾ ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಅಂದಾಗ 2 ಅಂಕದ ಕನಸು ನನಸಾಗುತ್ತದೆ.
ಇತಿಹಾಸದ ಕನಸಿನಲ್ಲಿ ಆರ್‌ಸಿಬಿ
ಆರ್‌ಸಿಬಿ ಈ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಆರ್‌ಸಿಬಿ ಆಡಿದ 13 ಪಂದ್ಯಗಳಲ್ಲಿ 9 ಜಯ ಸಾಧಿಸಿದ್ದು, 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ ಆರ್‌ಸಿಬಿ ಲೀಗ್‌ನಲ್ಲಿ 20 ಅಂಕಗಳನ್ನು ಕಲೆ ಹಾಕಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಳ್ಳಲಿದೆ. ಇದಕ್ಕೂ ಮೊದಲು ಆರ್‌ಸಿಬಿ ಈ ತರಹದ ಸಾಧನೆಯನ್ನು ಈ ಹಿಂದೆ ಮಾಡಿಲ್ಲ. ಇದಕ್ಕೂ ಮೊದಲು ಆರ್‌ಸಿಬಿ 19 ಅಂಕಗಳನ್ನು ಗಳಿಸಿದ್ದೇ ದೊಡ್ಡ ಸಾಧನೆ ಆಗಿತ್ತು. ಈ ಬಾರಿ ಈ ಸಾಧನೆಯನ್ನು ಮೀರಿ ನಿಲ್ಲುವ ಅವಕಾಶವಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಆರಂಭಿಕರಾದ ಅಭಿಷೇಕ್ ಶರ್ಮಾ ಒಳ್ಳೆಯ ಲಯದಲ್ಲಿದ್ದಾರೆ. ಟ್ರಾವಿಸ್ ಹೆಡ್ ರನ್ ಕಲೆ ಹಾಕುವ ಅನಿವಾರ್ಯತೆ ಇದೆ. ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವ ಹೆನ್ರಿಕ್ ಕ್ಲಾಸೇನ್ ಆರ್ಭಟ ನಡೆಸುತ್ತಿದ್ದು ಭರವಸೆ ಮೂಡಿಸಿದ್ದಾರೆ. ಇನ್ನು ನಿತೀಶ್ ಕುಮಾರ್ ರೆಡ್ಡಿ ಸಹ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಬೌಲಿಂಗ್‌ನಲ್ಲಿ ನಾಯಕ ಪ್ಯಾಟ್ ಕಮಿನ್ಸ್, ಪ್ರಫುಲ್ ಹಿಂಗೆ, ಇಶಾನ್ ಮಲಿಂಗ್ ಬಿಗುವಿನ ದಾಳಿ ನಡೆಸಿ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಬೇಕಿದೆ ಅಂದಾಗ ಮಾತ್ರ ಎರಡು ಅಂಕದ ಕನಸು ನನಸಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications