SRH vs RR IPL 2024: ಹೆಡ್, ನಿತೀಶ್ ಸ್ಫೋಟಕ ಬ್ಯಾಟಿಂಗ್; ರಾಜಸ್ಥಾನ್‌ಗೆ ಸವಾಲಿನ ಗುರಿ ನೀಡಿದ ಹೈದರಾಬಾದ್
ಗುರುವಾರ, ಮೇ 2ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 50ನೇ ಪಂದ್ಯದಲ್ಲಿ ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಟ್ರಾವಿಸ್ ಹೆಡ್ ಮತ್ತು ನಿತೀಶ್ ರೆಡ್ಡಿ ಅವರ ಅಮೋಘ ಅರ್ಧಶತಕಗಳ ನೆರವಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 202 ರನ್‌ಗಳ ಗುರಿ ನೀಡಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಲು ಸಾಧ್ಯವಾಗಲಿಲ್ಲ. ಈ ಜೋಡಿ ಮೊದಲ ವಿಕೆಟ್‌ಗೆ 4.1 ಓವರ್‌ಗಳಲಿ 25 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 12 ರನ್ ಗಳಿಸಿದ್ದ ಅಭಿಷೇಕ್ ಶರ್ಮಾ ಔಟಾದರು.
ನಂತರ ಬಂದ ಅನ್ಮೋಲ್‌ಪ್ರೀತ್ ಸಿಂಗ್ ಕೇವಲ 5 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೆ, ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ 44 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ 58 ರನ್ ಗಳಿಸಿ ಔಟಾದರು.
ಇನ್ನು ಮುರಿಯದ ನಾಲ್ಕನೇ ವಿಕೆಟ್‌ಗೆ ಜೊತೆಯಾದ ನಿತೀಶ್ ರೆಡ್ಡಿ ಮತ್ತು ಹೆನ್ರಿಚ್ ಕ್ಲಾಸೆನ್ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ನಿತೀಶ್ ರೆಡ್ಡಿ 42 ಎಸೆತಗಳಲ್ಲಿ 3 ಬೌಂಡರಿ ಹಾಗೂ 8 ಸಿಕ್ಸರ್ ಮೂಲಕ ಅಜೇಯ 76 ರನ್ ಗಳಿಸಿದರೆ, ಹೆನ್ರಿಚ್ ಕ್ಲಾಸೆನ್ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 42 ರನ್ ಬಾರಿಸಿದರು.
ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಅವೇಶ್ ಖಾನ್ 4 ಓವರ್‌ಗಳಲ್ಲಿ 39 ರನ್ ನೀಡಿ 2 ವಿಕೆಟ್ ಪಡೆದರೆ, ಸಂದೀಪ್ ಶರ್ಮಾ 4 ಓವರ್‌ಗಳಲ್ಲಿ 31 ರನ್ ನೀಡಿ 1 ವಿಕೆಟ್ ಕಬಳಿಸಿದರೆ, ಉಳಿದವರು ವಿಫಲರಾದರು ಮತ್ತು ದುಬಾರಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications