For Quick Alerts
ALLOW NOTIFICATIONS  
For Daily Alerts
 

SRH vs RR IPL 2024: ಸನ್ ರೈಸರ್ಸ್‌ಗೆ ಸವಾಲೆಸೆದ ರಾಜಸ್ಥಾನ್ ರಾಯಲ್ಸ್; ಟಾಸ್ ವರದಿ, ಆಡುವ 11ರ ಬಳಗ

ಗುರುವಾರ, ಮೇ 2ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 50ನೇ ಪಂದ್ಯದಲ್ಲಿ ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡಗಳು ರೋಚಕ ಹಣಾಹಣಿ ನಡೆಸುತ್ತಿವೆ.

ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

SRH vs RR IPL 2024 Sun Risers Hyderabad vs Rajasthan Royals Match Toss Report And Playing 11 Details

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸತತ ಎರಡು ಸೋಲು ಅನುಭವಿಸಿದ್ದು, ಐಪಿಎಲ್ 2024ರಲ್ಲಿ ಈವರೆಗೆ ಆಡಿದ 9 ಪಂದ್ಯಗಳಲ್ಲಿ 5 ಗೆಲುವು ಮತ್ತು 4 ಸೋಲು ಕಂಡಿದ್ದು 10 ಅಂಕಗಳೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ತಂಡ 9 ಪಂದ್ಯಗಳಲ್ಲಿ 8 ಗೆಲುವು ಮತ್ತು 1 ಸೋಲು ಕಂಡಿದ್ದು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ಸತತ ನಾಲ್ಕು ಗೆಲುವುಗಳ ಹಿನ್ನಲೆಯಲ್ಲಿ ಈ ಪಂದ್ಯಕ್ಕೆ ಬರುತ್ತಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ 350 ಟಿ20 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಕೇವಲ ಒಂದು ವಿಕೆಟ್ ಅಂತರದಲ್ಲಿದ್ದಾರೆ.

SRH vs RR IPL 2024 Sun Risers Hyderabad vs Rajasthan Royals Match Toss Report And Playing 11 Details

ಎಸ್‌ಆರ್‌ಹೆಚ್ vs ಆರ್‌ಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ ಆಡುವ 11ರ ಬಳಗ

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ.

ಸನ್ ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನ್ಮೋಲ್‌ಪ್ರೀತ್ ಸಿಂಗ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್.

Story first published: Thursday, May 2, 2024, 19:25 [IST]
Other articles published on May 2, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+