ರಾಜಸ್ಥಾನ್ ರಾಯಲ್ಸ್ ಸವಾಲು ಮೀರಿದ ಸನ್‌ರೈಸರ್ಸ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 36ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಅಮೋಘ ಪ್ರದರ್ಶನ ನೀಡಿ 5 ವಿಕೆಟ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿತು. ಈ ಗೆಲುವಿನ ಮೂಲಕ ಎಸ್ಆರ್‌ಎಚ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. ರಾಜಸ್ಥಾನ್ ರಾಯಲ್ಸ್ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿದೆ.
ರಾಯಲ್ಸ್ ನೀಡಿದ್ದ 229 ರನ್‌ಗಳ ಗುರಿಯನ್ನು ಬೆನ್ನುಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ (6) ರನ್ ಕಲೆ ಹಾಕುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಎರಡನೇ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಎರಡನೇ ವಿಕೆಟ್‌ಗೆ ಶತಕದ ಜೊತೆಯಾಟವನ್ನು ನೀಡಿದರು.

ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಜೋಡಿ 55 ಎಸೆತಗಳಲ್ಲಿ 132 ರನ್ ಸೇರಿಸಿತು. ಈ ವೇಳೆ ಅಭಿಷೇಕ್ ಶರ್ಮಾ 29 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ನೆರವಿನಿಂದ 57 ರನ್ ಸೇರಿಸಿತು. ಇಶಾನ್ ಕಿಶನ್ 31 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ನೆರವಿನಿಂದ 74 ರನ್ ಬಾರಿಸಿದರು. ಹೆನ್ರಿಕ್ ಕ್ಲಾಸೇನ್ 24 ಎಸೆತಗಳಲ್ಲಿ 29 ರನ್ ಸೇರಿಸಿದರು. ನಿತೀಶ್ ಕುಮಾರ್ ರೆಡ್ಡಿ 36 ರನ್ ಬಾರಿಸಿದರು. ಅಂತಿಮವಾಗಿ ಸನ್‌ರೈಸರ್ಸ್ 18.3 ಓವರ್‌ಗಳಲ್ಲಿ 5 ವಿಕೆಟ್‌ಗೆ 229 ರನ್ ಸೇರಿಸಿ ಜಯ ಸಾಧಿಸಿತು.
ವೈಭವ್ ಶತಕ
ಇದಕ್ಕೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭ ಸಾಧಾರಣವಾಗಿತ್ತು. ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ 2.3 ಓವರ್‌ಗಳಲ್ಲಿ 40 ರನ್ ಸೇರಿಸಿತು. ಯಶಸ್ವಿ ಜೈಸ್ವಾಲ್ 10 ರನ್ ಬಾರಿಸಿ ಔಟ್ ಆದರು. ಎರಡನೇ ವಿಕೆಟ್‌ಗೆ ಧ್ರುವ್ ಜುರೇಲ್, ವೈಭವ್ ಸೂರ್ಯವಂಶಿ ಅವರನ್ನು ಸೇರಿಕೊಂಡು ಮನಮೋಹಕ ಇನಿಂಗ್ಸ್ ಕಟ್ಟಿದರು. ಈ ಜೋಡಿ 62 ಎಸೆತಗಳಲ್ಲಿ 112 ರನ್ ಸೇರಿಸಿತು. ಈ ಹಂತದಲ್ಲಿ ಧ್ರುವ್ ಜುರೇಲ್ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 51 ರನ್ ಬಾರಿಸಿದರು.

15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ 37 ಎಸೆತಗಳಲ್ಲಿ 5 ಬೌಂಡರಿ, 12 ಸಿಕ್ಸರ್ ಸಹಾಯದಿಂದ 103 ರನ್ ಬಾರಿಸಿದರು. ಡೊನೊವನ್ ಫೆರೀರಾ 33 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 228 ರನ್ ಕಲೆ ಹಾಕಿತು. ಎಸ್‌ಆರ್‌ಎಚ್ ತಂಡದ ಪರ ಇಶಾನ್ ಮಲಿಂಗ್ 2 ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications