Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಶ್ರೀಲಂಕಾ vs ಅಫ್ಘಾನಿಸ್ತಾನ, ಮೊದಲ ಏಕದಿನ ಪಂದ್ಯ: ಟಾಸ್ ರಿಪೋರ್ಟ್, Live score, ಆಡುವ ಬಳಗ

ಅಫ್ಘಾನಿಸ್ತಾನ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಈ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಿದ್ದು ಈ ಪಂದ್ಯದಲ್ಲಿ ಪ್ರವಾಸಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಆತಿಥೇಯ ಶ್ರೀಲಂಕಾ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡದ ಪರವಾಗಿ ಇಬ್ಬರು ಆಟಗಾರರು ಏಕದಿನ ಮಾದರಿಗೆ ಪದಾರ್ಪಣೆ ಮಾಡಿದ್ದಾರೆ. ದುಷನ್ ಹೇಮಂತ ಹಾಗೂ ಮಥೀಶ ಪತಿರಣ ಮೊದಲ ಬಾರಿಗೆ ಅಂತಾರಾಷ್ಟ್ರೀತ ಏಕದಿನ ಪಂದ್ಯವನ್ನಾಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಮಥೀಶ ಪತಿರಣ ಈ ಬಾರಿಯ ಐಪಿಎಲ್‌ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಕಣಕ್ಕಿಳಿದು ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

Sri Lanka vs Afghanistan, 1st ODI Live score, playing XI and toss report, Hambantota

ಇನ್ನು ಅಫ್ಘಾನಿಸ್ತಾನ ತಂಡದ ಪರವಾಗಿ ಅನುಭವಿ ಆಟಗಾರ ರಶೀದ್ ಖಾನ ಮೊದಲ ಎರಡು ಪಂದ್ಯಗಳಿಗೆ ಅಲಭ್ಯವಾಗುವುದು ಖಚಿತವಾಗಿದೆ. ಹೀಗಾಗಿ ರಶೀದ್ ಖಾನ್ ಇಲ್ಲದೆ ತಂಡ ಕಣಕ್ಕಿಳಿಯುತ್ತಿದ್ದು ಅವರ ಬದಲಿಗೆ ನೂರ್ ಅಹ್ಮದ್‌ಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿದೆ. ನೂರ್ ಅಹ್ಮದ್ ಕೂಡ ಐಪಿಎಲ್‌ನಲ್ಲಿ ರನ್ನರ್‌ಅಪ್ ಗುಜರಾತ್ ಟೈಟನ್ಸ್ ಪರವಾಗಿ ಆಡಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು.

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ (ನಾಯಕ), ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶನ್ ಹೇಮಂತ, ಕಸುನ್ ರಜಿತ, ಮಥೀಶ ಪತಿರಣ, ಲಹಿರು ಕುಮಾರ
ಬೆಂಚ್: ಚಾಮಿಕ ಕರುಣಾರತ್ನ, ವನಿಂದು ಹಸರಂಗ, ದುಷ್ಮಂತ ಚಮೀರ, ಸದೀರ ಸಮರವಿಕ್ರಮ, ಮಹೇಶ್ ತೀಕ್ಷಣ

ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜೀಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್
ಬೆಂಚ್: ಇಕ್ರಂ ಅಲಿಖಿಲ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್

Story first published: Friday, June 2, 2023, 11:20 [IST]
Other articles published on Jun 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+