ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂದು ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ನಿರ್ಧಾರಕ್ಕೆ ಬಂದಿದೆ. ಹೀಗಾಗಿ ಪ್ರವಾಸಿ ಅಫ್ಘಾನಿಸ್ತಾನ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದ್ದು ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಬರೊಬ್ಬರಿ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಸರಣಿ ಸೋಲಿನ ಆತಂಕದಲ್ಲಿರುವ ಶ್ರೀಲಂಕಾ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಭಾರೀ ಬದಲಾವಣೆಯೊಂದಿಗೆ ಲಂಕಾ ಪಡೆ ಕಣಕ್ಕಿಳಿದಿದೆ. ಮತ್ತೊಂದೆಡೆ ಅಫ್ಘಾನಿಸ್ತಾನ ತಂಡ ಯಾವುದೇ ಬದಲಾವಣೆಯಿಲ್ಲದೆ ಗೆಲುವಿನ ತಂಡದೊಂದಿಗೆ ಆಡಲಿಳಿದಿದೆ.

Live ಸ್ಕೋರ್
ಇನ್ನು ಈ ಸರಣಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಎಲ್ಲಾ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡುವ ಮೂಲಕ ಅಬ್ಬರಿಸಿದೆ. ಮೊದಲಿಗೆ ಬೌಲಿಂಗ್‌ಲ್ಲಿ ಮಿಂಚಿದ್ದ ಅಫ್ಘನ್ ಬಳಿಕ ಬ್ಯಾಟಿಂಗ್‌ನಲ್ಲಿಯೂ ಮಿಂಚಿತ್ತು. ಹೀಗಾಗಿ ಅಧಿಕಾರಿಯುತವಾಗಿ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿತ್ತು. ಹೀಗಾಗಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂದಿನ ಈ ಪಂದ್ಯವನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಳ್ಳುವ ಅದ್ಭುತ ಅವಕಾಶವನ್ನು ಹೊಂದಿದೆ ಅಫ್ಘನ್ ಬಳಗ.
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ವನಿಂದು ಹಸರಂಗ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ, ಕಸುನ್ ರಜಿತ
ಬೆಂಚ್: ಏಂಜೆಲೊ ಮ್ಯಾಥ್ಯೂಸ್, ದುಶನ್ ಹೇಮಂತ, ಲಹಿರು ಕುಮಾರ, ಮತೀಶ ಪತಿರಣ, ಚಾಮಿಕ ಕರುಣರತ್ನ
ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್
ಬೆಂಚ್: ಅಬ್ದುಲ್ ರಹಮಾನ್, ರಿಯಾಜ್ ಹಸನ್, ಇಕ್ರಂ ಅಲಿಖಿಲ್