ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ಅಫ್ಘಾನಿಸ್ತಾನ ನಡುವಿನ ಪಂದ್ಯಕ್ಕೂ ಅಡ್ಡಿಯಾದ ಮಳೆ

Sri lanka vs Afghanistan 2nd ODI Match Called Off Due To Rain

ಭಾನುವಾರ ನಡೆದ ಎರಡು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೆ ಮಳೆ ಅಡ್ಡಿಯಾಯಿತು. ಭಾರತ ನ್ಯೂಜಿಲೆಂಡ್‌ ನಡುವಿನ ಸರಣಿಯ ಏಕದಿನ ಪಂದ್ಯ ಮಳೆಯಿಂದ ರದ್ದಾದ ಬಳಿಕ, ಶ್ರೀಲಂಕಾ ಅಫ್ಘಾನಿಸ್ತಾನ ನಡುವಿನ ಸರಣಿಯ 2ನೇ ಪಂದ್ಯ ಕೂಡ ಮಳೆಯಿಂದಾಗಿ ರದ್ದಾಯಿತು.

ಅಫ್ಘಾನಿಸ್ತಾನ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡುತ್ತಿದೆ. ಮೊದಲನೇ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ವಿಕೆಟ್ ಕೀಪರ್ ಬ್ಯಾಟರ್ ರಹಮನುಲ್ಲಾ ಗುರ್ಬಾಜ್, ರಹಮತ್ ಶಾ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ 48.2 ಓವರ್ ಗಳಲ್ಲಿ 228 ರನ್‌ಗಳಿಗೆ ಆಲೌಟ್ ಆಯಿತು.

ರಹಮನುಲ್ಲಾ ಗುರ್ಬಾಜ್, ರಹಮತ್ ಶಾ 113 ರನ್‌ಗಳ ಜೊತೆಯಾಟ ಆಡುವ ಮೂಲಕ ಅಫ್ಘಾನಿಸ್ತಾನಕ್ಕೆ ಉತ್ತಮ ಅಡಿಪಾಯ ಹಾಕಿದ್ದರು. ಆದರೆ, ಇವರಿಬ್ಬರೂ ಔಟ್ ಆದ ನಂತರ ಅಫ್ಘಾನಿಸ್ತಾನ ದಿಢೀರ್ ಕುಸಿತ ಕಂಡಿತು.

ನಜೀಬುಲ್ಲಾ ಜರ್ದಾನ್, ಹಸ್ಮತುಲ್ಲಾ ಶಹಿದಿ, ಗುಲ್ಬಾದಿನ್ ನಯೀಬ್ ರನ್ ಗಳಿಸುವಲ್ಲಿ ವಿಫಲರಾದರು. ಆದರೆ, ಆಲ್‌ರೌಂಡರ್ ಮೊಹಮ್ಮದ್ ನಬಿ ಅಂತಿಮ ಓವರ್ ಗಳಲ್ಲಿ 34 ಎಸೆತಗಳಲ್ಲಿ 41 ರನ್ ಗಳಿಸಿ ಅಫ್ಘಾನಿಸ್ತಾನ 228 ರನ್ ಗಳಿಸುವಲ್ಲಿ ಸಹಾಯ ಮಾಡಿದರು.

ನಂತರ ಈ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ 2.4 ಓವರ್ ಗಳಲ್ಲಿ 10 ರನ್ ಗಳಿಸಿದ್ದಾಗ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಯಿತು. ಮಳೆ ಹೆಚ್ಚಾದ ಕಾರಣ ಪಂದ್ಯವನ್ನು ರದ್ದುಗೊಳಿಸಲು ತೀರ್ಮಾನಿಸಲಾಯಿತು.

Sri lanka vs Afghanistan 2nd ODI Match Called Off Due To Rain

ಸರಣಿ ಸೋತರೆ ಶ್ರೀಲಂಕಾ ತಂಡಕ್ಕೆ ಭಾರಿ ಹಿನ್ನಡೆ

ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಶ್ರೀಲಂಕಾ ಸರಣಿಯನ್ನು ಸಮಬಲಗೊಳಿಸಲು ವಿಫಲವಾಗಿದೆ. ಐಸಿಸಿ ಏಕದಿನ ಸೂಪರ್ ಲೀಗ್‌ನಲ್ಲಿ ಹೆಚ್ಚಿನ ಅಂಕಗಳನ್ನು ಕಳೆದುಕೊಳ್ಳಲಿದೆ. ಏಕದಿನ ಸೂಪರ್ ಲೀಗ್‌ನಲ್ಲಿ ಶ್ರೀಲಂಕಾ 67 ಅಂಕಗಳೊಂದಿಗೆ 10 ನೇ ಸ್ಥಾನಕ್ಕೆ ಕುಸಿದಿದೆ. ಅಫ್ಘಾನಿಸ್ತಾನ 115 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ.

ಉಭಯ ತಂಡಗಳ ಪ್ಲೇಯಿಂಗ್ XI

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಶಾಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಧನಂಜಯ ಲಕ್ಷಣ್, ಮಹೇಶ್ ತೀಕ್ಷಣ, ಕಸುನ್ ರಜಿತ, ಲಹಿರು ಕುಮಾರ

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಯಾಮಿನ್ ಅಹ್ಮದ್‌ಝೈ, ಫಜಲ್ಹಕ್ ಫಾರೂಕಿ

Story first published: Sunday, November 27, 2022, 22:01 [IST]
Other articles published on Nov 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X