ಲಂಕಾ ವಿರುದ್ಧ ಏಕದಿನ ಸರಣಿ ಸೋತ ಆಸಿಸ್ ಪಡೆಗೆ ಮತ್ತೊಂದು ಆಘಾತ: 5ನೇ ಪಂದ್ಯಕ್ಕಿಲ್ಲ ಪ್ರಮುಖ ಆಟಗಾರ

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದ್ದು ಶ್ರೀಲಂಕಾ ಈಗಾಗಲೇ ಈ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಶ್ರೀಲಂಕಾ ಮೂರರಲ್ಲಿ ಗೆಲುವು ಸಾಧಿಸಿದ್ದು ಒಂದು ಪಂದ್ಯವನ್ನು ಮಾತ್ರವೇ ಪ್ರವಾಸಿ ಆಸಿಸ್ ಪಡೆ ಗೆದ್ದುಕೊಂಡಿದೆ. ಈ ಮೂಲಕ ಶ್ರೀಲಂಕಾ ತಂಡ 30 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಸರಣಿ ಗೆದ್ದ ಸಾಧನೆ ಮಾಡಿದೆ.
ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದಲ್ಲಿ ಸಾಲು ಸಾಲು ಸಮಸ್ಯೆಗಳು ಕಾಣಿಸಿಕೊಳ್ಳತ್ತಿದ್ದು ಪ್ರಮುಖ ಆಟಗಾರರು ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ತಂಡದ ಓರ್ವ ಆಟಗಾರ ಅಂತಿಮ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ. ಕಳೆದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಗಾಯಕ್ಕೊಳಗಾಗಿದ್ದ ಟ್ರೆವಿಸ್ ಹೆಡ್ ಅಂತಿಮ ಪಂದ್ಯಕ್ಕೆ ಲಭ್ಯವಿರುವುದಿಲ್ಲೆ ಎಂಬ ಸುದ್ದಿ ಆಸ್ಟ್ರೇಲಿಯಾ ತಂಡಕ್ಕೆ ಮತ್ತಷ್ಟು ಹಿನ್ನಡೆಯುಂಟು ಮಾಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಹೆಡ್‌ಗೆ ವಿಶ್ರಾಂತಿ
ನಾಳ್ಕನೇ ಪಂದ್ಯದಲ್ಲಿ ಗಾಯಕ್ಕೆ ಒಂಗಾಗಿರುವ ಟ್ರೆವಿಸ್ ಹೆಡ್ ಅವರು ಅಂತಿಮ ಪಂದ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಾವಾಹಿ ಆಡುತ್ತಿಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಅರೋನ್ ಫಿಂಚ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಟೆಸ್ಟ್ ಸರಣಿಗೆ ಟ್ರೆವಿಸ್ ಹೆಡ್ ಅವರ ಲಭ್ಯತೆಯ ಬಗ್ಗೆ ಸ್ಪಷ್ಟತೆಯಿಲ್ಲ. ಆದರೆ ಅಂತಿಮ ಏಕದಿನ ಪಂದ್ಯಕ್ಕೆ ಖಂಡಿತಾ ಅವರು ಆಡುವುದಿಲ್ಲ" ಎಂದು ಫಿಂಚ್ ಕ್ರಿಕೆಟ್.ಕಾಮ್.ಎಯುಗೆ ಮಾಹಿತಿ ನೀಡಿದ್ದಾರೆ.

ಆಸಿಸ್ ಪಡೆಗೆ ಮೇಲಿಂದ ಮೇಲೆ ಗಾಯದ ಬರೆ
ಇನ್ನು ಶ್ರೀಲಂಕಾ ವಿರುದ್ಧಧ ಸರಣಿಯಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ಗಾಯಕ್ಕೆ ಒಳಗಾಗುತ್ತಿರುವುದು ಮ್ಯಾನೇಜ್‌ಮೆಂಟ್‌ಗೆ ಕಂಗೆಡಿಸಿದೆ. ಈಗಾಘಲೇ ಸರಣಿಯಲ್ಲಿ ಗಾಯಕ್ಕೆ ಒಳಗಾಗೊರುವ ಮಿಚೆಲ್ ಸ್ಟಾರ್ಕ್ ಹಾಗೂ ಸ್ಟೀವ್ ಸ್ಮಿತ್ ಕೂಡ ಐದನೇ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ. ಆದರೆ ಈ ಆಟಗಾರರು ಟೆಸ್ಟ್ ಸರಣಿಯ ಮೇಲೆ ಈಗಾಗಲೇ ಕಣ್ಣಿಟ್ಟಿದ್ದು ರೆಡ್ ಬಾಲ್‌ನಲ್ಲಿ ಅಭ್ಯಾಸವನ್ನು ನಡೆಸುತ್ತಿದ್ದಾರೆ ಎಂದು ಕೂಡ ಮಾಹಿತಿ ಲಭ್ಯವಾಗಿದೆ.

ಏಕದಿನ ಸರಣಿಯಲ್ಲಿ ಆಸಿಸ್ ಕಳಪೆ ಪ್ರದರ್ಶನ
ಟಿ20 ಸರಣಿಯನ್ನು ಗೆದ್ದು ಬೀಗಿದ ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಶ್ರೀಲಂಕಾದ ಶಿಸ್ತಿನ ಬೌಲಿಂಗ್ ದಾಳಿಯ ಮುಂದೆ ಆಸಿಸ್ ಬಲಾಢ್ಯ ಆಟಗಾರರು ರನ್ ಗಳಿಸಲು ಪರದಾಡುತ್ತಿದ್ದಾರೆ. ಈ ಮೂಲಕ ಆಸಿಸ್ ಕ್ರಿಕೆಟ್ ಅಭಿಮಾನಿಗಳು ಊಹಿಸದ ರೀತಿಯಲ್ಲಿ ಸೋಲು ಅನುಭವಿಸುತ್ತಿದೆ ಪ್ರವಾಸಿ ತಂಡ. ನಾಲ್ಕನೇ ಪಂದ್ಯದಲ್ಲಿ ಗೆಲುವಿಗಾಗಿ ಅಂತಿಮ ಕ್ಷಣದವರೆಗೆ ಹೋರಾಟ ನಡೆಸಿದರೂ ಅಂತಿಮವಾಗಿ ಶ್ರೀಲಂಕಾ ಪಡೆ ಗೆಲುವಿನ ನಗೆ ಬೀಡುವಲ್ಲಿ ಯಶಸ್ವಿಯಾಗಿತ್ತು.

ಸ್ಕ್ವಾಡ್‌ಗಳು ಹೀಗಿದೆ
ಶ್ರೀಲಂಕಾ: ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಜೆಫ್ರಿ ವಂಡರ್ಸೆ, ಮಹೀಶ್ ತೀಕ್ಷಣ, ದುಷ್ಮಂತ ಚಮೀರ, ದನುಷ್ಕ ಗುಣತಿಲಕ, ದಿನೇಶ್ ಚಂಡಿಮಲ್, ಭಾನುಕಾ ರಾಜಪಕ್ಸೆ, ಲಹಿರು ಮಧುಶಂಕ, ರಮೇಶ್ ಮೆಂಡಿಸ್, ಅಸಿತ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ, ಪ್ರಮೋದ್ ಮದುಶನ್, ನುವಾನ್ ತುಷಾರ
ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್ವುಡ್, ಜ್ಯೆ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications