ಶ್ರೀಲಂಕಾ vs ಆಸ್ಟ್ರೇಲಿಯಾ 5ನೇ ಏಕದಿನ ಸರಣಿ: ಅಂತಿಮ ಪಂದ್ಯದಲ್ಲಿ ಗೆಲುವು ಯಾರಿಗೆ? Live ಸ್ಕೋರ್

ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ತಂಡ ಲಂಕಾ ನೆಲದಲ್ಲಿ ಭಾರೀ ಹಿನ್ನಡೆಯನ್ನು ಅನುಭವಿಸಿದೆ. ಅದರಲ್ಲೂ ಏಕದಿನ ಸರಣಿಯಲ್ಲಿ ಆಸಿಸ್ ಪಡೆ ಈಗಾಗಲೇ ಸರಣಿ ಸೋಲು ಅನುಭವಿಸಿದ್ದು ಇಂದು ಅಂತಿಮ ಪಂದ್ಯವನ್ನಾಡಲು ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಆತಿಥೆಯ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟಿ20 ಸರಣಿಯಲ್ಲಿ ಗೆಲುವು ಸಾಧಿಸಿದರೂ ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನಿಡಲು ವಿಫಲವಾಗಿದೆ. ಈಗಾಗಲೇ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಒಮದು ಪಂದ್ಯದಲ್ಲಿ ಮಾತ್ರವೇ ಆಸ್ಟ್ರೇಲಿಯಾ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಶ್ರೀಲಂಕಾ ತಂಡ ತವರು ನೆಲದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ವಿಂಚುಹರಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿಯೂ ಅಂತಾದ್ದೇ ಪ್ರದರ್ಶನ ನಿಡುವ ವಿಶ್ವಾಸ ಲಂಕಾ ಪಡೆಯಲ್ಲಿದೆ.
Live ಸ್ಕೋರ್ ಕಾರ್ಡ್ ಹೀಗಿದೆ

ಆಸಿಸ್ ಪಡೆಗೆ ಗಾಯದ ಸಮಸ್ಯೆ
ಇನ್ನು ಈ ಅಂತಿಮ ಪಂದ್ಯಲ್ಲೂ ಮುನ್ನ ಆಸ್ಟ್ರೇಲಿಯಾ ತಂಡ ಗಾಯದ ಸಮಸ್ಯೆಗೂ ತುತ್ತಾಗಿದೆ. ಕೆಲ ಪ್ರಮುಖ ಆಟಗಾರರು ಗಾಯದ ಕಾರಣದಿಂದಾಗಿ ಅಂತಿಮ ಪಂದ್ಯಕ್ಕೆ ಲಭ್ಯವಿಲ್ಲ. ಸ್ಟೀವ್ ಸ್ಮಿತ್ ಹಾಗೂ ಮಿಚೆಲ್ ಸ್ಟಾರ್ಕ್ ಬಳಿಕ ಬ್ಯಾಟರ್ ಟ್ರೆವಿಸ್ ಹೆಡ್ ಕೂಡ ಅಂತಿಮ ಪಂದ್ಯಕ್ಕೆ ಲಭ್ಯವಿಲ್ಲ. ಜೋಶ್ ಇಂಗ್ಲಿಸ್ ಈ ಪಂದ್ಯದ ಮೂಲಕ ಆಸಿಸ್ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಅಲೆಕ್ಸ್ ಕ್ಯಾರಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದಾರೆ. ಇನ್ನು ಶ್ರೀಲಂಕಾ ತಂಡದಲ್ಲಿಯೂ ಈ ಪಂದ್ಯಕ್ಕಾಗಿ ಮೂರು ಬದಲಾವಣಝೆ ಮಾಡಿಕೊಳ್ಳಲಾಗಿದೆ.

ಶ್ರಿಲಂಕಾ ಆಡುವ ಬಳಗ
ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ದಿನೇಶ್ ಚಂಡಿಮಲ್, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಾಗೆ, ಚಾಮಿಕ ಕರುಣಾರತ್ನೆ, ಜೆಫ್ರಿ ವಂಡರ್ಸೆ, ಪ್ರಮೋದ್ ಮದುಶನ್, ಮಹೀಶ್ ತೀಕ್ಷಣ
ಬೆಂಚ್: ನಿರೋಶನ್ ಡಿಕ್ವೆಲ್ಲಾ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಭಾನುಕಾ ರಾಜಪಕ್ಸೆ, ದುಷ್ಮಂತ ಚಮೀರ, ಲಹಿರು ಮಧುಶಂಕ, ರಮೇಶ್ ಮೆಂಡಿಸ್, ಅಸಿತ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ, ನುವಾನ್ ತುಷಾರ

ಆಸ್ಟ್ರೇಲಿಯಾ ಆಡುವ ಬಳಗ
ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಝೇ ರಿಚರ್ಡ್ಸನ್, ಮಿಚೆಲ್ ಸ್ವೆಪ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications