ಭಾರತ vs ಶ್ರೀಲಂಕಾ, Live ಸ್ಕೋರ್: ಶ್ರೀಲಂಕಾದ ಪ್ರಮುಖ ವಿಕೆಟ್‌ಗಳು ಪತನ

ಕೊಲಂಬೋ: ಕೊಲಂಬೋದಲ್ಲಿರುವ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಇಂದು (ಜುಲೈ 20) ಭಾರತ ಮತ್ತು ಶ್ರೀಲಂಕಾ ತಂಡಗಳು ದ್ವಿತೀಯ ಏಕದಿನ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ಇಂದಿನ ಪಂದ್ಯದಲ್ಲಿ ಶ್ರೀಲಂಕಾ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಟಾಸ್ ಗೆದ್ದಿರುವ ಶ್ರಿಲಂಕಾ ಹಿಂದಿನ ಪಂದ್ಯದಂತೆ ಬ್ಯಾಟಿಂಗ್ ಆಯ್ದುಕೊಂಡಿದೆ. 31ನೇ ಓವರ್ ಮುಕ್ತಾಯ ವೇಳೆಗೆ ಶ್ರೀಲಂಕಾ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.
ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಸದ್ಯ ಶ್ರೀಲಂಕಾದಲ್ಲಿದ್ದು, ಆರಂಭಿಕ ಏಕದಿನ ಪಂದ್ಯದಲ್ಲಿ ಬ್ಲೂಬಾಯ್ಸ್ ಪಡೆ ಭರ್ಜರಿ 7 ವಿಕೆಟ್‌ಗಳಿಂದ ಗೆದ್ದಿತ್ತು. ದ್ವಿತೀಯ ಪಂದ್ಯದಲ್ಲೂ ಭಾರತ ಗೆಲ್ಲುವ ನಿರೀಕ್ಷೆಯಿದೆ. ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಏಕದಿನ ಸರಣಿ 2-0ಯಿಂದ ಭಾರತದ ವಶವಾಗಲಿದೆ.
ಭಾರತ vs ಲಂಕಾ, 2ನೇ ಏಕದಿನ ಪಂದ್ಯ: Live ಸ್ಕೋರ್
ಭಾರತ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್ (ಸಿ), ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್.
ಶ್ರೀಲಂಕಾ ಪ್ಲೇಯಿಂಗ್ XI: ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಾಸುನ್ ಶಾನಕಾ (ಸಿ), ವನಿಂದು ಹಸರಂಗ, ಚಮಿಕಾ ಕರುಣರತ್ನ, ಕಸುನ್ ರಾಜಿತಾ, ದುಷ್ಮಂತ ಚಮೀರ, ಇಶಾನ್ ಜಯರತ್ನ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications