
ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿ ಆರಂಭವಾಗಿದೆ. ಟೆಸ್ಟ್ ಸರಣಿಯ ಬಳಿಕ ವೈಟ್‌ಬಾಲ್ ಮಾದರಿ ಆರಂಭವಾಗಿದ್ದು ಮೊದಲ ಪಂದ್ಯ ಆಕ್ಲಂಡ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ನ್ಯೂಜಿಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.ಇನ್ನು ಈ ಸರಣಿಯಲ್ಲಿ ಶ್ರೀಲಂಕಾ ತಂಡವನ್ನು ಖಾಯಂ ನಾಯಕ ದಸುನ್ ಶನಕ ಮುನ್ನಡೆಸಿದ್ದರೆ ನ್ಯೂಜಿಲೆಂಡ್ ತಂಡದ ನಾಯಕತ್ವ ಟಾಮ್ ಲ್ಯಾಥಮ್ ವಹಿಸಿಕೊಂಡಿದ್ದಾರೆ. ಎರಡು ತಂಡಗಳು ಕೂಡ ಯುವ ಹಾಗೂ ಅನುಬವಿಗಳ ಅತ್ಯುತ್ತಮ ಸಂಯೋಜನೆಯೊಂದಿಗೆ ಕಣಕ್ಕಿಳಿದಿವೆ.
Live score ಹೀಗಿದೆ:
ಇನ್ನು ಇದಕ್ಕೂ ಮುನ್ನ ನಡೆದ ಟೆಸ್ಟ್ ಸರಣಿಯಲ್ಲಿ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಪೈಪೋಟಿ ನಡೆಸಿದ್ದವು. ಈ ಸರಣಿಯ ಎರಡು ಪಂದ್ಯದಲ್ಲಿಯೂ ನ್ಯೂಜಿಲೆಂಡ್ ತಂಡ ಲಂಕಾ ಪಡೆಯನ್ನು ಮಣಿಸಿದ್ದು ವೈಟ್‌ವಾಶ್ ಮೂಲಕ ಸರಣಿ ವಶಕ್ಕೆ ಪಡೆದುಕೊಂಡಿದೆ. ಹೀಗಾಗಿ ಏಕದಿನ ಮಾದರಿಯಲ್ಲಿ ಪೈಪೋಟಿ ನೀಡಲು ಪ್ರವಾಸಿ ಲಂಕಾ ಹವಣಿಸುತ್ತಿದೆ.
ಇನ್ನು ಮೂರು ಪಂದ್ಯಗಳ ಏಕದಿನ ಸರಣಿಯ ಮುಕ್ತಾಯದ ಬಳಿಕ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಟಿ20 ಸರಣಿಯಲ್ಲಿಯೂ ಪೈಪೋಟಿ ನಡೆಸಲಿದೆ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಚಾಡ್ ಬೋವ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಹೆನ್ರಿ ಶಿಪ್ಲಿ, ಇಶ್ ಸೋಧಿ, ಮ್ಯಾಟ್ ಹೆನ್ರಿ, ಬ್ಲೇರ್ ಟಿಕ್ನರ್
ಬೆಂಚ್: ಲಾಕಿ ಫರ್ಗುಸನ್, ಮಾರ್ಕ್ ಚಾಪ್ಮನ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್, ಬೆನ್ ಲಿಸ್ಟರ್
ಶ್ರೀಲಂಕಾ ಆಡುವ ಬಳಗ: ನುವಾನಿಡು ಫೆರ್ನಾಂಡೊ, ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ದಾಸುನ್ ಶನಕ (ನಾಯಕ), ವನಿಂದು ಹಸರಂಗ,
ಚಾಮಿಕ ಕರುಣಾರತ್ನೆ, ಕಸುನ್ ರಜಿತ, ಲಹಿರು ಕುಮಾರ, ದಿಲ್ಶನ್ ಮಧುಶಂಕ
ಬೆಂಚ್: ಧನಂಜಯ ಡಿ ಸಿಲ್ವ, ಮಹೇಶ ತೀಕ್ಷಣ, ಸದೀರ ಸಮರವಿಕ್ರಮ, ಪ್ರಮೋದ್ ಮದುಶನ್, ಸಹನ್ ಆರಚ್ಚಿಗೆ, ದುನಿತ್ ವೆಳ್ಳಾಲಗೆ, ಮತೀಶ ಪತಿರಣ