Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Sri Lanka vs New Zealand: 2ನೇ ಟೆಸ್ಟ್, ಟಾಸ್ ರಿಪೋರ್ಟ್, ಆಡುವ ಬಳಗ, Live score

Sri Lanka vs New Zealand, 2nd test, Live score and Playing XI, Wellington

ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ವೆಲ್ಲಿಂಗ್ಟನ್‌ನ ಬೇಸಿನ್ ರಿವರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕಿವೀಸ್ ಬಳಗ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ತಂಡಗಳು ತಲಾ ಒಂದೊಂದು ಬದಲಾವಣೆ ಮಾಡಿಕೊಂಡಿವೆ. ಗಾಯಗೊಂಡಿರುವ ನೈಲ್ ವ್ಯಾಗ್ನರ್ ಬದಲಿಗೆ ಡೌಗ್ ಬ್ರೇಸ್‌ವೆಲ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಅವರು ಆರು ವರ್ಷದ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಶ್ರೀಲಂಕಾ ತಂಡದಲ್ಲಿ ಡಿಕ್ವೆಲ್ಲಾ ಆಡುವ ಬಳಗದಿಂದ ಹೊರಬಿದ್ದಿದ್ದು ಮದುಶಂಕ ಅವರ ಸ್ಥಾನದಲ್ಲಿ ಕಣಕ್ಕಿಳಿಯುತ್ತಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
54255

ಇನ್ನು ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ರೋಚಕವಾಗಿ ಅಂತ್ಯಕಂಡಿತ್ತು. ಪಂದ್ಯದ ಅಮತಿಮ ಎಸೆತದಲ್ಲಿ ಫಲಿತಾಂಶ ನಿರ್ಧಾರವಾಗಿದ್ದು ಆ ಪಂದ್ಯವನ್ನು ಆತೊಥೆಯ ನ್ಯೂಜಿಲೆಂಡ್ ತಂಡ ಗೆದ್ದು ಬೀಗಿದೆ. ಆ ಮೂಲಕ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ಸ್ಪರ್ಧೆಯಿಂದ ಹೊರಬಿದ್ದಿದ್ದು ಭಾರತ ತಂಡ ಫೈನಲ್‌ಗೆ ಪ್ರವೇಶ ಪಡೆಯಿತು.

ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್, ಡೌಗ್ ಬ್ರೇಸ್‌ವೆಲ್, ಟಿಮ್ ಸೌಥಿ (ನಾಯಕ), ಮ್ಯಾಟ್ ಹೆನ್ರಿ, ಬ್ಲೇರ್ ಟಿಕ್ನರ್
ಬೆಂಚ್: ವಿಲ್ ಯಂಗ್, ಸ್ಕಾಟ್ ಕುಗ್ಗೆಲೀಜ್ನ್

ಶ್ರೀಲಂಕಾ ಆಡುವ ಬಳಗ: ಓಷಾದ ಫೆರ್ನಾಂಡೋ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಾಲ್, ಧನಂಜಯ ಡಿ ಸಿಲ್ವ, ನಿಶಾನ್ ಮದುಷ್ಕ (wk), ಕಸುನ್ ರಜಿತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೋ
ಬೆಂಚ್: ಚಾಮಿಕಾ ಕರುಣಾರತ್ನ, ರಮೇಶ್ ಮೆಂಡಿಸ್, ಕಮಿಂದು ಮೆಂಡಿಸ್, ಮಿಲನ್ ಪ್ರಿಯನಾಥ್ ರಥನಾಯಕ, ನಿರೋಶನ್ ಡಿಕ್ವೆಲ್ಲಾ, ವಿಶ್ವ ಫೆರ್ನಾಂಡೋ

Story first published: Friday, March 17, 2023, 8:46 [IST]
Other articles published on Mar 17, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+