ಶ್ರೀಲಂಕಾ vs ಪಾಕಿಸ್ತಾನ 2ನೇ ಟೆಸ್ಟ್: ಪಂದ್ಯದ ಪ್ರಿವ್ಯೂ, ಹೆಡ್ ಟು ಹೆಡ್ ಹಾಗೂ ಆಡುವ ಬಳಗ

ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಭಾನುವಾರ ಗಾಲೆ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸಾಕಷ್ಟು ರೋಚಕವಾಗಿ ನಡೆದ ಪಂದ್ಯ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡ 342 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸಿತು. ಹೀಗಾಗಿ ಎರಡನೇ ಪಂದ್ಯಕ್ಕೆ ಆತ್ಮ ವಿಶ್ವಾಸದಿಂದ ಸಜ್ಜಾಗಿದೆ ಬಾಬರ್ ಅಜಂ ಪಡೆ.
ಶ್ರೀಲಂಕಾ ತಂಡ ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ತಂಡದ ವಿರುದ್ಧದ ಟೆಸ್ಟ್ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಲುವಲ್ಲಿ ಯಶಸ್ವಿಯಾಗಿತ್ತು. ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ಆಸ್ಟ್ರೇಲಿಯಾ ವಿರುದ್ಧ ಇನ್ನಿಂಗ್ಸ್ ಹಾಗೂ 39 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಇದೀಗ ಪಾಕಿಸ್ತಾನದ ವಿರುದ್ಧವೂ ಸರಣಿಯಲ್ಲಿ ತಿರುಗಿ ಬೀಳಬೇಕಾದರೆ ಅಂತಾದ್ದೇ ಪ್ರದರ್ಶನವನ್ನು ಶ್ರೀಲಂಕಾ ತಂಡ ನೀಡಬೇಕಾದ ಅಗತ್ಯವಿದೆ.

ಗಾಲೆ ಪಿಚ್ ರಿಪೋರ್ಟ್
ಶ್ರೀಲಂಕಾ ಆತಿಥ್ಯ ವಹಿಸಿರುವ ಅಂತಿಮ ಮೂರು ಟೆಸ್ಟ್ ಪಂದ್ಯಗಳು ಗಾಲೆಯಲ್ಲಿಯೇ ನಡೆದಿದ್ದು ಭಾನುವಾರದ ಪಂದ್ಯ ನಾಲ್ಕನೇ ಪಂದ್ಯವಾಗಿದೆ. ಇದು ಸಾಮಾನ್ಯವಾಗಿ ಸಾಕಷ್ಟು ತಿರುವು ಪಡೆಯುತ್ತದೆ ಹಾಗೂ 4 ನೇ ದಿನ ಮತ್ತು 5ನೇ ದಿನ ಬ್ಯಾಟರ್‌ಗಳಿಗೆ ಸಾಕಷ್ಟು ಸವಾಲು ಒಡ್ಡುತ್ತದೆ. ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಬ್ಯಾಟಿಂಗ್‌ಗೆ ಅನುಕೂಲ ನೀಡಿದಷ್ಟು ಸಮಯ ಉತ್ತಮವಾಗಿ ಬ್ಯಾಟಿಂಗ್ ನಡೆಸಿ ರನ್‌ಗಳಿಸಿದರೆ ಆರಂಭದಿಂದ ಮೇಲುಗೈ ಸಾಧಿಸಬಹುದು.

ಸಂಭಾವ್ಯ ಆಡುವ ಬಳಗ
ಪಾಕಿಸ್ತಾನ ಸಂಭಾವ್ಯ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ಶಾಹೀನ್ ಶಾ ಅಫ್ರಿದಿ, ಯಾಸಿರ್ ಶಾ, ಹಸನ್ ಅಲಿ, ನಸೀಮ್ ಶಾ
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ XI: ಓಷಾದ ಫೆರ್ನಾಂಡೊ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಲ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ (ವಿಕೆ), ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ಲಕ್ಷಿತಾ ಮಾನಸಿಂಘೆ, ಕಸುನ್ ರಜಿತಾ

ಸಮಯ ಹಾಗೂ ನೇರಪ್ರಸಾರ
ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಭಾನುವಾರ ಆರಂಭವಾಗಲಿದೆ. ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ಕೂಡ ನಡೆಯಲಿದ್ದು ಬೆಳಿಗ್ಗೆ 10 ಗಂಟೆಗೆ ಪಂದ್ಯ ಆರಂಬವಾಗಲಿದೆ. ಟಾಸ್ ಪ್ರಕ್ರಿಯೆ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರವಾಸ ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಾಗಲಿದೆ. ಸೋನಿ ಲಿವ್‌ನಲ್ಲಿ ಲೈವ್ ಸ್ಟ್ರೀಮಿಂಗ್ ದೊರೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications