ಶ್ರೀಲಂಕಾ vs ಜಿಂಬಾಬ್ವೆ: 2ನೇ ಏಕದಿನ ಪಂದ್ಯ: Live ಸ್ಕೋರ್, ಪ್ಲೇಯಿಂಗ್ XI

ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ನಡೆಯುತ್ತಿದೆ. ಶ್ರೀಲಂಕಾದ ಪಲ್ಲೆಕೆಲೆಯಲ್ಲಿರುವ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ಜಿಂಬಾಬ್ವೆ ತಂಡ ಟಾಸ್ ಗೆದ್ದಿದ್ದು ಮೊದಲಿ ಬ್ಯಾಟಿಂಗ್‌ ನಡೆಸುವ ನಿರ್ಧಾರ ತೆಗೆದುಕೊಂಡಿದೆ.

ಮೂರು ಪಂದ್ಯಗಳ ಈ ಸರಣಿಯ ಎಲ್ಲಾ ಪಂದ್ಯಗಳು ಕೂಡ ಪಲ್ಲೆಕೆಲೆ ಕ್ರೀಡಾಂಗಣದಲ್ಲಿಯೇ ನಡೆಯಲಿದೆ. ಸರಣಿಯ ಆರಂಭಿಕ ಪಂದ್ಯದಲ್ಲಿ ಜಿಂಬಾಬ್ವೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ಜಿಂಬಾಬ್ವೆ 296 ರನ್‌ಗಳಿಸಿತ್ತು. ಆದರೆ ಆತಿಥೇಯ ಶ್ರೀಲಂಕಾ ಕೂಡ ಅಮೋಘ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಈ ಮೊತ್ತವನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿತ್ತು. ಈ ಮೂಲಕ ಶ್ರೀಲಂಕಾ ತಂಡ ಸರಣಿಯಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ. ಹೀಗಾಗಿ ಜಿಂಬಾಬ್ವೆ ಸರಣಿ ಸಮಬಲಕ್ಕೆ ಇಂದು ಶತಪ್ರಯತ್ನ ನಡೆಸುತ್ತಿದೆ.

Live score ಕಾರ್ಡ್ ಹೀಗಿದೆ

1
52794

MS ಧೋನಿ ಟೆಸ್ಟ್‌ ಕ್ರಿಕೆಟ್ ನಿವೃತ್ತಿ ಘೋಷಿಸಿದಾಗ, ಗಳಗಳನೆ ಅತ್ತಿದ್ರಂತೆ ವಿರಾಟ್ ಕೊಹ್ಲಿ!MS ಧೋನಿ ಟೆಸ್ಟ್‌ ಕ್ರಿಕೆಟ್ ನಿವೃತ್ತಿ ಘೋಷಿಸಿದಾಗ, ಗಳಗಳನೆ ಅತ್ತಿದ್ರಂತೆ ವಿರಾಟ್ ಕೊಹ್ಲಿ!

ಇನ್ನು ಈ ಪಂದ್ಯಕ್ಕಾಗಿ ಪ್ರವಾಸಿ ಜಿಂಬಾಬ್ವೆ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ತಂಡದೊಂದಿಗೆ ಆಡಲಿಳಿದಿದೆ. ಆದರೆ ಶ್ರೀಲಂಕಾ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಚಾಮಿಕ ಗುಣಶೇಕರ ಗಾಯಗೊಂಡಿದ್ದು ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ದುಷ್ಮಂತ ಚಮೀರ ಕಣಕ್ಕಿಳಿಯುವ ಅವಕಾಶ ಪಡೆದಿದ್ದಾರೆ.

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕಮಿಂದು ಮೆಂಡಿಸ್, ದಿನೇಶ್ ಚಂಡಿಮಲ್, ಚರಿತ್ ಅಸಲಂಕಾ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ಮಹೀಶ್ ತೀಕ್ಷಣ, ದುಷ್ಮಂತ ಚಮೀರ, ನುವಾನ್ ಪ್ರದೀಪ್
ಬೆಂಚ್: ಪ್ರವೀಣ್ ಜಯವಿಕ್ರಮ, ರಮೇಶ್ ಮೆಂಡಿಸ್, ಶಿರಾನ್ ಫೆರ್ನಾಂಡೋ, ನುವಾನ್ ತುಷಾರ, ಮಿನೋದ್ ಭಾನುಕ, ಚಾಮಿಕಾ ಗುಣಶೇಖರ

ರಾಜಗೋಪಾಲ್ ಸತೀಶ್‌ಗೆ 40 ಲಕ್ಷ ರೂಪಾಯಿ ಮ್ಯಾಚ್ ಫಿಕ್ಸಿಂಗ್‌ ಆಫರ್: ಬಿಸಿಸಿಐ, ಐಸಿಸಿಗೆ ದೂರುರಾಜಗೋಪಾಲ್ ಸತೀಶ್‌ಗೆ 40 ಲಕ್ಷ ರೂಪಾಯಿ ಮ್ಯಾಚ್ ಫಿಕ್ಸಿಂಗ್‌ ಆಫರ್: ಬಿಸಿಸಿಐ, ಐಸಿಸಿಗೆ ದೂರು

ಜಿಂಬಾಬ್ವೆ ಆಡುವ ಬಳಗ: ತಕುಡ್ಜ್ವಾನಾಶೆ ಕೈಟಾನೊ, ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಕ್ರೇಗ್ ಎರ್ವಿನ್ (ನಾಯಕ), ಸೀನ್ ವಿಲಿಯಮ್ಸ್, ವೆಸ್ಲಿ ಮಾಧೆವೆರೆ, ಸಿಕಂದರ್ ರಜಾ, ರಿಯಾನ್ ಬರ್ಲ್, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ, ರಿಚರ್ಡ್ ನಾಗರವಾ
ಬೆಂಚ್: ಕ್ಲೈವ್ ಮದಂಡೆ, ಟಿನೊಟೆಂಡಾ ಮುಟೊಂಬೊಡ್ಜಿ, ಮಿಲ್ಟನ್ ಶುಂಬಾ, ಲ್ಯೂಕ್ ಜೊಂಗ್ವೆ

For Quick Alerts
ALLOW NOTIFICATIONS
For Daily Alerts
Story first published: Tuesday, January 18, 2022, 15:34 [IST]
Other articles published on Jan 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X