ಶ್ರೀಲಂಕಾ vs ಜಿಂಬಾಬ್ವೆ: 3ನೇ ಏಕದಿನ ಪಂದ್ಯ, Live ಸ್ಕೋರ್, ಪ್ಲೇಯಿಂಗ್ XI

ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯ ಇಂದು ಆರಂಭವಾಗಿದೆ. ಶ್ರೀಲಂಕಾದ ಪಲ್ಲೆಕೆಲೆಯಲ್ಲಿರುವ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಎರಡು ತಂಡಗಳು ಸರಣಿಯಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು ಮೊದಲಿ ಬ್ಯಾಟಿಂಗ್‌ ನಡೆಸುವ ನಿರ್ಧಾರ ತೆಗೆದುಕೊಂಡಿದೆ.

ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳೂ ಕೂಡ ಒಂದೊಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆರಂಭಿಕ ಪಂದ್ಯದಲ್ಲಿ ಶ್ರಿಲಂಕಾ ತಂಡ ರೋಚಕವಾಗಿ ಗೆದ್ದುಕೊಂಡಿದ್ದರೆ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಅದ್ಭುತ ಗೆಲುವು ಸಾಧಿಸುವ ಮೂಲಕ ಆತಿಥೇಯ ಲಂಕಾಗೆ ಆಘಾತ ನೀಡಿತ್ತು. ಈ ಮೂಲಕ ಸರಣಿಯನ್ನು ಸಮಬಲಗೊಳಿಸುವಲ್ಲಿ ಜಿಂಬಾಬ್ವೆ ಯಶಸ್ವಿಯಾಗಿದೆ. ಇದು ಸರಣಿಯ ಅಂತಿಮ ಪಂದ್ಯವಾಗಿದ್ದು ಇಲ್ಲಿ ಗೆದ್ದ ತಂಡ ಸರಣಿಯನ್ನು ವಶಕ್ಕೆ ಪಡೆಯಲಿದೆ. ಲಂಕಾ ನೆಲದಲ್ಲಿ ಐತಿಹಾಸಿಕ ಸರಣಿ ಗೆಲ್ಲುವ ಕನಸು ಕಾಣುತ್ತಿದೆ ಜಿಂಬಾಬ್ವೆ ತಂಡ.

Live score ಕಾರ್ಡ್ ಹೀಗಿದೆ

1
52795

ಇನ್ನು ಈ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ವಿಸ್ಲೀ ಮೆದೇವೆರೆ ಈ ಪಂದ್ಯದಿಂದ ಹೊರಗುಳಿದಿದ್ದು ಮಿಲ್ಟನ್ ಶುಂಬಾ ಆಡುವ ಅವಕಾಶ ಪಡೆದುಕೊಂಡಿದ್ದಾರೆ. ಇನ್ನು ಶ್ರೀಲಂಕಾ ತಂಡದಲ್ಲಿಯೂ ಒಂದು ಬದಲಾವಣೆಯಾಗಿದ್ದು ನುವಾನ್ ಪ್ರದೀಪ್ ಬದಲಿಗೆ ರಮೇಶ್ ಮೆಂಡಿಸ್ ಅವಕಾಶ ಪಡೆದುಕೊಂಡಿದ್ದಾರೆ.

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕಮಿಂದು ಮೆಂಡಿಸ್, ದಿನೇಶ್ ಚಂಡಿಮಲ್, ಚರಿತ್ ಅಸಲಂಕಾ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ಮಹೀಶ್ ತೀಕ್ಷಣ, ದುಷ್ಮಂತ ಚಮೀರ, ರಮೇಶ್ ಮೆಂಡಿಸ್,
ಬೆಂಚ್: ಪ್ರವೀಣ್ ಜಯವಿಕ್ರಮ, ಶಿರಾನ್ ಫೆರ್ನಾಂಡೋ, ನುವಾನ್ ಪ್ರದೀಪ್, ನುವಾನ್ ತುಷಾರ, ಮಿನೋದ್ ಭಾನುಕ, ಚಾಮಿಕಾ ಗುಣಶೇಖರ

ಜಿಂಬಾಬ್ವೆ ಆಡುವ ಬಳಗ: ತಕುಡ್ಜ್ವಾನಾಶೆ ಕೈಟಾನೊ, ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಕ್ರೇಗ್ ಎರ್ವಿನ್ (ನಾಯಕ), ಸೀನ್ ವಿಲಿಯಮ್ಸ್, ಮಿಲ್ಟನ್ ಶುಂಬಾ, ಸಿಕಂದರ್ ರಜಾ, ರಿಯಾನ್ ಬರ್ಲ್, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ, ರಿಚರ್ಡ್ ನಾಗರವಾ
ಬೆಂಚ್: ಕ್ಲೈವ್ ಮದಂಡೆ, ಟಿನೊಟೆಂಡಾ ಮುಟೊಂಬೊಡ್ಜಿ, ವೆಸ್ಲಿ ಮಾಧೆವೆರೆ, ಲ್ಯೂಕ್ ಜೊಂಗ್ವೆ

For Quick Alerts
ALLOW NOTIFICATIONS
For Daily Alerts
Story first published: Friday, January 21, 2022, 15:05 [IST]
Other articles published on Jan 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X