ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಕದಿನ ಸರಣಿ: ಶ್ರೀಲಂಕಾಗೆ ತವರಿನಲ್ಲೇ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ

Sri Lanka vs Zimbabwe ODI series: Zimbabwe won against Sri Lanka by 22 runs

ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ 22 ರನ್‌ಗಳ ಅಂತರದ ರೋಚಕ ಗೆಲುವು ಸಾಧಿಸಿದೆ. ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಈ ಎರಡನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಜಿಂಬಾಬ್ವೆ ಬೃಹತ್ ಮೊತ್ತವನ್ನು ದಾಖಲಿಸಿತು. ಈ ಮೊತ್ತ ಬೆನ್ನಟ್ಟಿದ ಶ್ರೀಲಂಕಾ ತಂಡ ಆರಂಭದಲ್ಲಿಯೇ ಕುಸಿತಕ್ಕೆ ಒಳಗಾಯಿತು. ಆದರೆ ಬಳಿಕ ಚೇತರಿಸಿಕೊಂಡು ಹೊರಾಟ ನಡೆಸಿತಾದರೂ ಗೆಲುವು ಸಾಧ್ಯವಾಗಲಿಲ್ಲ. ಶ್ರೀಲಂಕಾ ತಂಡದ ನಾಯಕ ದಾಸುನ್ ಶನಕ ಏಕಾಂಗಿ ಹೋರಾಟ ನಡೆಸಿದರಾದರೂ ಈ ಹೋರಾಟ ವ್ಯರ್ಥವಾಯಿತು.

ಟಾಸ್ ಗೆದ್ದ ಜಿಂಬಾಬ್ವೆ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ವಿಕೆಟ್‌ಗೆ 59 ರನ್‌ಗಳ ಉತ್ತಮ ಆರಂಭ ಪಡೆದ ತಂಡಕ್ಕೆ ನಂತರ ನಾಯಕ ಕ್ರೇಗ್ ಇರ್ವೀನ್ ಮತ್ತಷ್ಟು ಉತ್ತಮ ಇನ್ನಿಂಗ್ಸ್ ನೀಡಿದರು. 91 ರನ್‌ಗಳಿಸಿದ ಇರ್ವೀನ್ ಶತಕ ವಂಚಿತವಾದರು. ಜಿಂಬಾಬ್ವೆ ತಂಡದ ಸಿಕಂದರ್ ರಾಜಾ ಕೂಡ 56 ರನ್‌ಗಳ ಮಹತ್ವದ ಕೊಡುಗೆ ನೀಡಿದರು. ಇದರ ಪರಿಣಾಮವಾಗಿ ಜಿಂಬಾಬ್ವೆ ಈ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 302 ರನ್‌ಗಳಿಸಿತು.

ನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್‌ಮನ್‌ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್‌ಮನ್‌ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿ

ಈ ಮೊತ್ತವನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ ಆರಂಭದಿಂದಲೇ ಭಾರೀ ಕುಸಿತವನ್ನು ಕಂಡಿತು. 31 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಲಂಕಾ 63 ರನ್‌ಗೆ 4ನೇ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಕಮಿಂದು ಮೆಂಡಿಸ್ 57 ರನ್‌ಗಳ ಕೊಡುಗೆ ನೀಡುವ ಮೂಲಕ ತಂಡಕ್ಕೆ ಆಸರೆಯಾದರು. ಬಳಿಕ ನಾಯಕ ದಾಸುನ್ ಶನಕ ಅದ್ಭುತ ಹೋರಾಟವನ್ನು ನಡೆಸಿದರು. ಹೀನಾಯ ಸೋಲಿನ ಸ್ಥಿತಿಯಿಂದ ಗೆಲುವು ಸಾಧಿಸುವ ವಿಶ್ವಾಸ ಮೂಡಿಸುವ ಮಟ್ಟಿಗೆ ಶ್ರೀಲಂಕಾ ತಂಡದ ಹೋರಾಟಕ್ಕೆ ಕಾರಣವಾದರು.

ಆದರೆ ದಾಸುನ್ ಶನಕ ವಿಕೆಟ್ ಕಳೆದುಕೊಂಡ ಬಳಿಕ ಮತ್ತೆ ತಂಡ ಬ್ಯಾಟಿಂಗ್‌ನಲ್ಲಿ ಕುಸಿತವನ್ನು ಕಂಡಿತು. ಹೀಗಾಗಿ ಶ್ರೀಲಂಕಾ ತಂಡ 303 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ ನಿಗದಿತ 50 ಓವರ್‌ಗಳಲ್ಲಿ 280 ರನ್‌ಗಳನ್ನು ಗಳಿಸಲು ಮಾತ್ರವೇ ಶಕ್ತವಾಯಿತು. ಈ ಮೂಲಕ 22 ರನ್‌ಗಳ ಅಂತರದಿಂದ ಜಿಂಬಾಬ್ವೆ ತಂಡಕ್ಕೆ ಶರಣಾಗಿದೆ.

ಈ ಗೆಲುವಿನೊಂದಿಗೆ ಜಿಂಬಾಬ್ವೆ ತಂಡ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಸರಣಿಯ ಆರಂಭಿಕ ಪಂದ್ಯದಲ್ಲಿ ಕೂಡ ಜಿಂಬಾಬ್ವೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ಜಿಂಬಾಬ್ವೆ 296 ರನ್‌ಗಳಿಸಿತ್ತು. ಆದರೆ ಆತಿಥೇಯ ಶ್ರೀಲಂಕಾ ಕೂಡ ಅಮೋಘ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಈ ಮೊತ್ತವನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವಲ್ಲಿ ತಂಡ ಯಶಸ್ವಿಯಾಗಿದೆ.

ಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿ

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕಮಿಂದು ಮೆಂಡಿಸ್, ದಿನೇಶ್ ಚಂಡಿಮಲ್, ಚರಿತ್ ಅಸಲಂಕಾ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ಮಹೀಶ್ ತೀಕ್ಷಣ, ದುಷ್ಮಂತ ಚಮೀರ, ನುವಾನ್ ಪ್ರದೀಪ್
ಬೆಂಚ್: ಪ್ರವೀಣ್ ಜಯವಿಕ್ರಮ, ರಮೇಶ್ ಮೆಂಡಿಸ್, ಶಿರಾನ್ ಫೆರ್ನಾಂಡೋ, ನುವಾನ್ ತುಷಾರ, ಮಿನೋದ್ ಭಾನುಕ, ಚಾಮಿಕಾ ಗುಣಶೇಖರ

ಕೊಹ್ಲಿ ನಾಯಕತ್ವ ತ್ಯಜಿಸಿದ್ದರ ಬಗ್ಗೆ ಶಾಹಿದ್ ಅಫ್ರಿದಿ ಕೊಟ್ಟ ಹೇಳಿಕೆ ನಿಜಕ್ಕೂ ಆಶ್ಚರ್ಯ | Oneindia Kannada

ಜಿಂಬಾಬ್ವೆ ಆಡುವ ಬಳಗ: ತಕುಡ್ಜ್ವಾನಾಶೆ ಕೈಟಾನೊ, ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಕ್ರೇಗ್ ಎರ್ವಿನ್ (ನಾಯಕ), ಸೀನ್ ವಿಲಿಯಮ್ಸ್, ವೆಸ್ಲಿ ಮಾಧೆವೆರೆ, ಸಿಕಂದರ್ ರಜಾ, ರಿಯಾನ್ ಬರ್ಲ್, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಾಬಾನಿ, ಟೆಂಡೈ ಚಟಾರಾ, ರಿಚರ್ಡ್ ನಾಗರವಾ
ಬೆಂಚ್: ಕ್ಲೈವ್ ಮದಂಡೆ, ಟಿನೊಟೆಂಡಾ ಮುಟೊಂಬೊಡ್ಜಿ, ಮಿಲ್ಟನ್ ಶುಂಬಾ, ಲ್ಯೂಕ್ ಜೊಂಗ್ವೆ

Story first published: Wednesday, January 19, 2022, 13:42 [IST]
Other articles published on Jan 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X