SA vs SL 2nd Test: ದಕ್ಷಿಣ ಆಫ್ರಿಕಾ ವಿರುದ್ಧ ಲಂಕಾ ಗೆಲುವಿಗೆ ಟೀಮ್ ಇಂಡಿಯಾ ಪ್ರಾರ್ಥನೆ
ಶ್ರೀಲಂಕಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ವೇಳೆ ಟೆಸ್ಟ್ ಸರಣಿಯನ್ನು ಆಡುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿರುವ ಈ ಸರಣಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಸೋತಿರುವ ಲಂಕಾ ಎರಡನೇ ಟೆಸ್ಟ್‌ನಲ್ಲಿ ಕಮ್ ಬ್ಯಾಕ್ ಮಾಡುವ ಲೆಕ್ಕಾಚಾರದಲ್ಲಿದೆ. ಎರಡನೇ ಟೆಸ್ಟ್‌ನಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಲಂಕಾ ಗೆಲುವಿಗೆ 348 ರನ್‌ಗಳ ಬೃಹತ್ ಮೊತ್ತ ನೀಡಿದೆ. ನಾಲ್ಕನೇ ದಿನದಾಟದ ಮುಕ್ತಾಯಕ್ಕೆ ಲಂಕಾ 5 ವಿಕೆಟ್ ನಷ್ಟಕ್ಕೆ 205 ರನ್ ಸೇರಿಸಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಲು ಲಂಕಾಕ್ಕೆ ಇನ್ನು 143 ರನ್ ಅವಶ್ಯಕತೆ ಇದೆ. ಪ್ರತಿಯೊಂದು ಸರಣಿಯಲ್ಲಿ ದಾಖಲಿಸುವ ಗೆಲುವು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ವ್ಯತ್ಯಾಸ ಮಾಡುತ್ತದೆ.
ಲಂಕಾ ತಂಡ ಎರಡನೇ ಟೆಸ್ಟ್‌ನಲ್ಲಿ ಗೆಲುವು ದಾಖಲಿಸಲಿ ಎಂದು ಟೀಮ್ ಇಂಡಿಯಾ ಆಟಗಾರರು ಹಾಗೂ ಅಭಿಮಾನಿಗಳು ಲೆಕ್ಕಾಚಾರ ಆರಂಭಿಸಿದ್ದಾರೆ. ಒಂದು ವೇಳೆ ಲಂಕಾ ಗೆಲುವು ಸಾಧಿಸಿದರೆ, ಭಾರತ ತಂಡಕ್ಕೆ ಇದರ ಲಾಭವಾಗಲಿದೆ. ಮತ್ತೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ವ್ಯತ್ಯಾಸ ಆಗಲಿದೆ. ಇದೇ ಕಾರಣಕ್ಕೆ ಪಂದ್ಯದ ಐದನೇ ದಿನದಂದು ಇಡೀ ಭಾರತವೇ ಶ್ರೀಲಂಕಾ ಗೆಲುವಿಗಾಗಿ ಪ್ರಾರ್ಥಿಸುತ್ತಿದೆ. ಒಂದು ವೇಳೆ ಲಂಕಾ ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ, ವಿಶ್ವ ಟೆಸ್ಟ್ ಚಾಪಿಯನ್‌ಶಿಪ್ ಫೈನಲ್ ತಲುಪುವ ಟೀಮ್ ಇಂಡಿಯಾ ಕನಸು ಹತ್ತಿರವಾಗುತ್ತದೆ.

ಟೀಮ್ ಇಂಡಿಯಾ ಪ್ರಾರ್ಥನೆ
ಆಡಿಲೇಡ್‌ನಲ್ಲಿ ಟೀಮ್ ಇಂಡಿಯಾ 10 ವಿಕೆಟ್‌ಗಳ ಸೋಲು ನಿಜಕ್ಕೂ ಭಾರತ ತಂಡದ ಮನೋಬಲವನ್ನು ಕುಗ್ಗಿಸಿದೆ. ಇದರಿಂದ ಹೊರ ಬರಲು ಟೀಮ್ ಇಂಡಿಯಾಕ್ಕೆ ಮೆಲ್ಬೋರ್ನ್‌ನಲ್ಲಿ ಗೆಲುವಿನ ಅನಿವಾರ್ಯತೆ ಇದೆ. ಈಗಾಗಲೇ ಸರಣಿ ಸಮಬಲದಲ್ಲಿ ಸಾಗಿದ್ದು ಗೆಲುವಿನ ಅನಿವಾರ್ಯತೆ ಇದೆ. ಇನ್ನು ಸರಣಿಯಲ್ಲಿ ಯಾವುದೇ ಪಂದ್ಯವನ್ನು ಸೋಲುವ ಪ್ರಶ್ನೆ ಇಲ್ಲವೇ ಇಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ಎಲ್ಲ ಪಂದ್ಯಗಳಲ್ಲಿ ಗೆಲುವು ಅನಿವಾರ್ಯ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಸದ್ಯ ಮೂರನೇ ಸ್ಥಾನದಲ್ಲಿದೆ. ಟೀಮ್ ಇಂಡಿಯಾ 57.69 ಶೇಕಡಾವಾರು ಗೆಲುವುಗಳನ್ನು ದಾಖಲಿಸಿದೆ. ಇನ್ನು ಈ ಪಟ್ಟಿಯ ಮೊದಲ ಸ್ಥಾನದಲ್ಲಿ ಆಸೀಸ್ ಇದ್ದು ಈ ತಂಡ 60.71 ಶೆಕಡಾ ವಾರು ಗೆಲುವು ದಾಖಲಿಸಿದೆ. ಅಂಕ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದ್ದು, ಈ ತಂಡ 59.26 ಅಂಕಗಳನ್ನು ಹೊಂದಿದೆ. ಲಂಕಾ ವಿರುದ್ಧದ ಸರಣಿಯ ಬಳಿಕ ದಕ್ಷಿಣ ಆಫ್ರಿಕಾ, ಪಾಕಿಸ್ತಾನ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಲಿದೆ.

ಲಂಕಾ ಫೈನಲ್‌ಗೆ ಪ್ರವೇಶಿಸಲು ಏನು ಮಾಡಬೇಕು?
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸುವ ಕನಸನ್ನು ಲಂಕಾ ಕಾಣುತ್ತಿದೆ. ಈ ನಿಟ್ಟಿನಲ್ಲಿ ಯಶಸ್ವಿಯಾಗಬೇಕಾದರೆ, ಲಂಕಾ ಮುಂದಿನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯ. ಅಂದಹಾಗೆ ಲಂಕಾದ ಮುಂದೆ ದೊಡ್ಡ ಸವಾಲು ಎದುರಾಗಲಿದೆ. ಲಂಕಾ, ಆಸ್ಟ್ರೇಲಿಯಾ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಗೆಲುವು ದಾಖಲಿಸಿದರೆ, ಫೈನಲ್ ಪ್ರವೇಶಿಸುವ ಆಸೆ ಹಸಿರಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications