
ಆಸೀಸ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲಿ ಶ್ರೀಲಂಕಾ ಉತ್ತಮ ಪ್ರದರ್ಶನ ನೀಡುತ್ತಿದೆ. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಲಂಕಾ ಪಡೆ ಮೊದಲ ಮೂರು ಪಂದ್ಯಗಳಲ್ಲಿ 2-1 ಅಂತರದಿಮದ ಮುನ್ನಡೆಯಲ್ಲಿದ್ದು ಸರಣಿ ವಶಕ್ಕೆ ಪಡೆಯುವ ಪ್ರಯತ್ನದಲ್ಲಿದೆ. ನಾಲ್ಕನೇ ಪಂದ್ಯದಲ್ಲಿಯೂ ಲಂಕಾ ಉತ್ತಮ ಹೋರಾಟವನ್ನು ನಡೆಸಿದೆ. ಸರಣಿಯ ನಾಲ್ಕನೇ ಪಂದ್ಯದಲ್ಲಿ ಶ್ರೀಲಂಕಾ ತಮಡ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಲಂಕಾ ದಾಂಡಿಗ ಚರಿತ್ ಅಸಲಂಕಾ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
34 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಶ್ರೀಲಂಕಾ ತಂಡಕ್ಕೆ ಧನಂಜಯ ಡಿಸಿಲ್ವ ಹಾಗೂ ಚರಿತ್ ಅಸಲಂಕ ಜೋಡಿ ಶತಕದ ಜೊತೆಯಾಟ ನೀಡುವ ಮೂಲಕ ಚೇತರಿಕೆ ನೀಡಿದರು. ನಂತರ ಅಸಲಂಕಾ ಏಕಾಂಗಿ ಹೋರಾಟ ನಡೆದಿ ತಂಡ ಸವಾಲಿನ ಮೊತ್ತ ಪೇರಿಸಲು ಕಾರಣವಾದರು. ಧನಂಜಯ 60 ರನ್‌ಗಳ ಕೊಡುಗೆ ನೀಡಿದರೆ ಅಸಲಂಕಾ 106 ಎಸೆತಗಳನ್ನು ಎದುರಿಸಿ 110 ರನ್‌ಗಳಿಸಿ ಪ್ಯಾಟ್ ಕಮ್ಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಶ್ರೀಲಂಕಾ ತಂಡ 49 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 258 ರನ್‌ಗಳಿಸಲು ಯಶಸ್ವಿಯಾಯಿತು.
ಅಸಲಂಕಾ ಗಳಿಸಿದ ಅದ್ಭುತ ಶತಕದಲ್ಲಿ 10 ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿತ್ತು. ಅವರು 103.77 ಸ್ಟ್ರೈಕ್ ರೇಟ್‌ನಲ್ಲಿ ಅವರು ಬ್ಯಾಟ್ ಬೀಸಿದ್ದಾರೆ. ಶ್ರೀಲಂಕಾ ತಂಡದ ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿರುವ ಆಸ್ಟ್ರೇಲಿಯಾ ಸರಣಿ ಸಮಬಲಗೊಳಿಸುವ ಪ್ರಯತ್ನದಲ್ಲಿದೆ.
ಶ್ರೀಲಂಕಾ ಸ್ಕ್ವಾಡ್: ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಜೆಫ್ರಿ ವಂಡರ್ಸೆ, ಮಹೀಶ್ ತೀಕ್ಷಣ
ಬೆಂಚ್: ದುಷ್ಮಂತ ಚಮೀರ, ದನುಷ್ಕ ಗುಣತಿಲಕ, ದಿನೇಶ್ ಚಂಡಿಮಲ್, ಭಾನುಕಾ ರಾಜಪಕ್ಸೆ, ಲಹಿರು ಮಧುಶಂಕ, ರಮೇಶ್ ಮೆಂಡಿಸ್, ಅಸಿತ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ, ಪ್ರಮೋದ್ ಮದುಶನ್, ನುವಾನ್ ತುಷಾರ
ಆಸ್ಟ್ರೇಲಿಯಾ; ಆರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಜ್ಯೆ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಸ್