ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಮೂರನೇ ಏಕದಿನ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಭಾರತ ತಂಡದ ಪಾಲಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ. ಭಾರತ ತಂಡದಲ್ಲಿ ಮಹತ್ವದ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಲಾಗಿದೆ. ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರ ಬದಲಿಗೆ ತಿಲಕ್ ವರ್ಮಾ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದು ಪಂದ್ಯ ಗೆದ್ದಿದ್ದರಿಂದ ಈ ಪಂದ್ಯ ರೋಕಚತೆ ಹುಟ್ಟಿಸಿದೆ.
ಈಗಾಗಲೇ ಉಭಯ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿವೆ. ರಾಯ್ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ್ದ 359 ರನ್‌ಗಳ ಗುರಿಯನ್ನು ಮೆಟ್ಟಿನಿಂತ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಸಮಬಲ ಸಾಧಿಸಿತ್ತು. ಈ ಮೂಲಕ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಸಮಬಲ ಸಾಧಿಸಿದೆ. ಹೀಗಾಗಿ ವಿಶಾಖಪಟ್ಟಣಂನ ಮೂರನೇ ಪಂದ್ಯಕ್ಕಾಗಿ ಎಲ್ಲರ ಚಿತ್ತ ಕದ್ದಿದೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿ ಸರಣಿಯನ್ನು ಸಮಬಲ ಸಾಧಿಸುವ ಆಸೆಯನ್ನು ಹೊಂದಿದೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದಲ್ಲಿ ಹ್ಯಾಟ್ರಿಕ್ ಶತಕದ ನಗೆ ಬೀರಲಿದ್ದಾರೆ. ಹೀಗಾಗಿ ಎಲ್ಲರ ಕಣ್ಣುಗಳ ವಿರಾಟ್ ಕೊಹ್ಲಿ ಅವರ ಮೇಲೆ ನೆಟ್ಟಿರಲಿದೆ. ಅಲ್ಲದೆ ಈ ಪಂದ್ಯದ ಟಿಕೆಟ್‌ಗಳು ಎಲ್ಲವೂ ಸೋಲ್ಡ್ ಔಟ್ ಆಗಿವೆ. ವಿರಾಟ್ ಕೊಹ್ಲಿ ಅವರ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದಾರೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆ ಎಲ್ ರಾಹುಲ್, ತಿಲಕ್ ವರ್ಮಾ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ದಕ್ಷಿಣ ಆಫ್ರಿಕಾ ತಂಡ: ರಯಾನ್ ರಿಕೆಲ್ಟನ್, ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ, ಮ್ಯಾಥ್ಯೂ ಬ್ರೀಟ್ಜ್ಕೆ, ಐಡೆನ್ ಮಾರ್ಕ್ರಮ್, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಒಟ್ನಿಲ್ ಬಾರ್ಟ್ಮನ್.