ಟಿ20 ಕ್ರಿಕೆಟ್‌ನ ಅತ್ಯುತ್ತಮ ಬೌಲರ್ ಬೂಮ್ರಾ: ಟಿ20 ವಿಶ್ವಕಪ್‌ಗೆ ಅಲಭ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಆಸಿಸ್ ಸ್ಟಾರ್

ಟಿ20 ವಿಶ್ವಕಪ್‌ನ ಆರಂಭಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಭಾರತದ ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಗಾಯದ ಕಾರಣದಿಂದಾಗಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ಈ ಮೂಲಕ ರವೀಂದ್ರ ಜಡೇಜಾ ಬಳಿಕ ಟೀಮ್ ಇಂಡಿಯಾದ ಎರಡನೇ ಆಟಗಾರ ವಿಶ್ವಕಪ್ ಟೂರ್ನಿಯಿಂದ ಗಾಯದ ಕಾರಣಕ್ಕೆ ಹೊರಗುಳಿಯಬೇಕಾಗಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಜೋಶ್ ಹೇಜಲ್‌ವುಡ್ ಪ್ರತಿಕ್ರಿಯೆ ನಿಡಿದ್ದು ಟೀಮ್ ಇಂಡಿಯಾ ವಿಶ್ವಕಪ್‌ನಲ್ಲಿ ಜಸ್ಪ್ರಿತ್ ಬೂಮ್ರಾ ಅವರನ್ನು ಕಂಡಿತಾ ಮಿಸ್ ಮಾಡಿಕೊಳ್ಳಲಿದೆ ಎಂದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಬೂಮ್ರಾ ಕಣಕ್ಕಳಿದು ಅದ್ಬುತ ಪ್ರದರ್ಶನ ನೀಡಿದ್ದರು. ಒಂದು ಅದ್ಭುತ ಯಾರ್ಕರ್ ಮೂಲಕ ಆಸಿಸ್ ನಾಯಕ ಆರೋನ್ ಫಿಂಚ್ ಅವರನ್ನು ಬೌಲ್ಡ್ ಮಾಡಿದ್ದರು. ಆದರೆ ಚುಟುಕು ವಿಶ್ವಕಪ್‌ಗೆ ಬೂಮ್ರಾ ಅಲಭ್ಯವಾಗುತ್ತಿರುವುದು ಭಾರತ ತಂಡಕ್ಕೆ ಹಿನ್ನಡೆಯುಂಟು ಮಾಡಲಿದೆ ಎಂದಿದ್ದಾರೆ ಹೇಜಲ್‌ವುಡ್.

ಅತ್ಯುತ್ತಮ ಟಿ20 ಬೌಲರ್
ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗದ ಬೌಲರ್ ಆಗಿರುವ ಜೋಶ್ ಹೇಜಲ್‌ವುಡ್ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಅವರನ್ನು ಟಿ20 ಮಾದರಿಯ ಅತ್ಯುತ್ತಮ ಬೌಲರ್ ಎಂದಿದ್ದಾರೆ. "ನನ್ನ ಪ್ರಕಾರ ಅವರು ಟಿ20 ಕ್ರಿಕೆಟ್‌ನ ಅತ್ಯುತ್ತಮ ಬೌಲರ್ ಆಗಿದ್ದಾರೆ. ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಆಟವನ್ನು ನಾನು ನೋಡಿದ್ದೇನೆ. ಅಂತಿಮ ಎರಡು ಪಂದ್ಯಗಳಲ್ಲಿ ಅವರ ಕೆಲ ಯಾರ್ಕರ್‌ಗಳು ಅಮೋಘವಾಗಿತ್ತು. ವೇಗದಲ್ಲಿ ಮಾಡುವ ಏರಿಳಿತಗಳು ಕೂಡ ಬಹಳ ವಿಶೇಷ ಎಂದಿದ್ದಾರೆ ಜೋಶ್ ಹೇಜಲ್‌ವುಡ್.

ಗಾಯದಿಂದ ಬೂಮ್ರಾ ಔಟ್
ಸುದೀರ್ಘ ಕಾಲದ ವಿಶ್ರಾಂತಿಯ ಬಳಿಕ ಕಳೆದ ಆಸ್ಟ್ರೇಲಿಯಾ ಸರಣಿಯ ಮೂಲಕ ಜಸ್ಪ್ರಿತ್ ಬೂಮ್ರಾ ಕಮ್‌ಬ್ಯಾಕ್ ಮಾಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಎರಡು ಪಂದ್ಯಗಳಲ್ಲಿ ಆಡಿದ್ದ ಬೂಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಆಯ್ಕೆಯಾಗಿದ್ದರು. ಆದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಬೂಮ್ರಾ ಬೆನ್ನು ನೋವಿಗೆ ಒಳಖಗಾಗಿರುವ ವಿಚಾರವನ್ನು ನಾಯಕ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದರು. ಇದೀಗ ಗಾಯದ ತೀವ್ರತೆ ಗಂಭೀರವಾಗಿದ್ದು ಸಂಪೂರ್ಣ ವಿಶ್ವಕಪ್‌ನಿಂದಲೇ ಬೂಮ್ರಾ ಹೊರಗುಳಿಯಳಿಯಲಿದ್ದಾರೆ ಎಂಬ ಸಂಗತಿ ಬಹಿರಂಗವಾಗಿದೆ.

ಇಬ್ಬರು ಪ್ರಮುಖ ಆಟಗಾರರು ಅಲಭ್ಯ
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಅಲಭ್ಯವಾಗಲಿದ್ದಾರೆ. ಕಳೆದ ಏಷ್ಯಾಕಪ್‌ನಲ್ಲಿ ಭಾರತ ತಂಡದ ಭಾಗವಾಗಿದ್ದ ರವೀಂದ್ರ ಜಡೇಜಾ ಬಳಿಕ ಅವರು ಕುಡ ಗಾಯಕ್ಕೆ ತುತ್ತಾಗಿದ್ದು ಸದ್ಯ ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ದೀರ್ಘ ಕಾಲದ ವಿಶ್ರಾಂತಿಯ ಅಗತ್ಯವಿರುವ ಕಾರಣ ಜಡೇಜಾ ಮಹತ್ವದ ಟೂರ್ನಿಯಿಂದ ಈಗಾಗಲೇ ಹೊರಗುಳಿದಿದ್ದಾರೆ. ಇದೀಗ ಜಸ್ಪ್ರಿತ್ ಬೂಮ್ರಾ ಕೂಡ ಚುಟುಕು ವಿಶ್ವಕಪ್‌ನಿಂದ ಹೊರಗುಳಿಯುತ್ತಿರುವುದು ನಿರಾಸೆ ಮೂಡಿಸಿದೆ.

ಬೂಮ್ರಾ ಬದಲಿಗೆ ಯಾರಿಗೆ ಅವಕಾಶ?
ಇನ್ನು ಜಸ್ಪ್ರೀತ್ ಬೂಮ್ರಾ ವಿಶ್ವಕಪ್ ಟೂರ್ನಿಗೆ ಅಲಭ್ಯವಾಗಲಿದ್ದಾರೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಬೂಮ್ರಾ ಬದಲಿಗೆ ಯಾರಿಗೆ ಅವಕಾಶ ದೊರೆಯಲಿದೆ ಎಂಬುದು ಕುತೂಹಲಕಾರಿಯಾಗಿದೆ. ಟೀಮ್ ಇಂಡಿಯಾದ ಮೀಸಲು ವಿಭಾಗದಲ್ಲಿ ವೇಗಿಗಳಾಗಿ ಅನುಭವಿ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಾಹರ್ ಸ್ಥಾನವನ್ನು ಪಡೆದುಕೊಂಡಿದ್ದು ಈ ಪೈಕಿ ಮೊಹಮ್ಮದ್ ಶಮಿಗೆ ಸ್ಥಾನ ದೊರೆಯುವ ಸಾಧ್ಯತೆಯಿದೆ. ಅನುಭವದ ಹಿನ್ನೆಲೆಯಲ್ಲಿ ಶಮಿ ಭಾರತ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಾಹರ್ ಕೂಡ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದು ಆಯ್ಕೆ ಮಂಡಳಿ ಶೀಘ್ರದಲ್ಲೇ ನಿರ್ಧಾರವನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications