37 ವರ್ಷಗಳ ಹಳೆಯ ದಾಖಲೆ ಅಳಿಸುವ ಕನಸಿನಲ್ಲಿ ರೋಹಿತ್ ಶರ್ಮಾ
ಭಾರತ ಹಾಗೂ ಅಫ್ಘಾನಿಸ್ತಾನ್ ತಂಡಗಳ ನಡುವಣ ಏಕದಿನ ಸರಣಿ ಶನಿವಾರದಿಂದ ಆರಂಭವಾಗಲಿದೆ. ಈ ಪಂದ್ಯದ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಕಣಕ್ಕೆ ಇಳಿಯಲಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಆತ್ಮವಿಶ್ವಾಸದಿಂದ ಕಣಕ್ಕೆ ಇಳಿಯಲಿದೆ. ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಇನಿಂಗ್ಸ್ ಹಾಗೂ 300 ರನ್‌ಗಳಿಂದ ಜಯ ಸಾಧಿಸಿದ್ದು, ಏಕದಿನ ಸರಣಿಯಲ್ಲೂ ಮುನ್ನಡೆ ಸಾಧಿಸುವ ಕನಸು ಕಾಣುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪರ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಣಕ್ಕೆ ಇಳಿಯಲಿದ್ದಾರೆ.
ಸುಮಾರು ಆರು ತಿಂಗಳ ಸುದೀರ್ಘ ಬಿಡುವಿನ ಬಳಿಕ 'ಹಿಟ್‌ಮ್ಯಾನ್' ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಿರುವುದರಿಂದ ಸಹಜವಾಗಿಯೇ ಎಲ್ಲರ ಚಿತ್ತ ಅವರ ಮೇಲಿದೆ. ಇತ್ತೀಚಿನ ದಿನಗಳಲ್ಲಿ ಅವರ ಫಿಟ್‌ನೆಸ್ ಸುತ್ತ ಎದ್ದಿದ್ದ ಎಲ್ಲಾ ಅನಿಶ್ಚಿತತೆಗಳಿಗೆ ತೆರೆ ಬಿದ್ದಿದ್ದು, ಅವರು ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಪ್ರಕಟಿಸಲಾಗಿದೆ. ಈ ಮೂರು ಪಂದ್ಯಗಳ ಸರಣಿಯಲ್ಲಿ ಅವರು ಆಡುವುದು ಖಚಿತವಾಗಿದೆ.

ಮಾಜಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಕೆಲವು ಆಟಗಾರರ ಫಿಟ್‌ನೆಸ್ ಸುತ್ತಲೂ ಕೆಲವು ಅನಿಶ್ಚಿತತೆ ಇತ್ತು. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ರೋಹಿತ್ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಘೋಷಿಸಲಾಗಿದೆ ಮತ್ತು ಅವರು ಮೂರು ಪಂದ್ಯಗಳಲ್ಲಿ ಆಡುವ ನಿರೀಕ್ಷೆಯಿದೆ. ಈ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತೊಂದು ದಾಖಲೆ ಬರೆಯುವ ಕನಸಿನಲ್ಲಿದ್ದಾರೆ.
ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು ಕಣಕ್ಕೆ ಇಳಿಯುತ್ತಿದ್ದಂತೆ ದೊಡ್ಡ ದಾಖಲೆಯ ಸಮಕ್ಕೆ ನಿಲ್ಲಲಿದ್ದಾರೆ. ರೋಹಿತ್ ಶರ್ಮಾ ಪ್ರಸ್ತುತ 39 ವರ್ಷ ಮತ್ತು 42 ದಿನಗಳ ವಯಸ್ಸಿನವರಾಗಿದ್ದು, ಅಫ್ಘಾನ್ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ಮೊಹಿಂದರ್ ಅಮರನಾಥ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಕಣಕ್ಕೆ ಇಳಿದ ಹಿರಿಯ ಆಟಗಾರ ಎಂಬ ಹೆಗ್ಗಳಿಕೆ ಮೊಹಿಂದರ್ ಅಮರನಾಥ್ ಅವರ ಹೆಸರಿನಲ್ಲಿತ್ತು. ಈ ದಾಖಲೆಯನ್ನು 1983 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಆಲ್‌ರೌಂಡರ್ ಮೊಹಿಂದರ್ ಅಮರನಾಥ್ ಹೊಂದಿದ್ದಾರೆ. ಅವರು 1989 ರಲ್ಲಿ 39 ವರ್ಷ ಮತ್ತು 44 ದಿನಗಳಲ್ಲಿ ಏಕದಿನ ಪಂದ್ಯವನ್ನು ಆಡಿದ್ದರು. ಈಗ ಈ ದಾಖಲೆಯನ್ನು ಅಳಿಸುವ ಸನಿಹದಲ್ಲಿ ರೋಹಿತ್ ಶರ್ಮಾ ಇದ್ದಾರೆ.
ರೋಹಿತ್ ಶರ್ಮಾ ಸಾಧನೆ
39 ವರ್ಷದ ರೋಹಿತ್ ಶರ್ಮಾ ಮುಂದಿನ ಬಾರಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಕನಸು ಕಾಣುತ್ತಿದ್ದಾರೆ. ಇವರು ಸದ್ಯ ಭಾರತ ತಂಡದ ಪರ ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕೆ ಇಳಿಯುತ್ತಿದ್ದಾರೆ. ರೋಹಿತ್ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಏಕದಿನ ಮಾದರಿಯಲ್ಲಿ ರೋಹಿತ್ ಅಮೋಘ ದಾಖಲೆಯನ್ನು ಹೊಂದಿದ್ದಾರೆ. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 282 ಪಂದ್ಯಗಳಲ್ಲಿ ಕಣಕ್ಕೆ ಇಳಿದಿದ್ದು, 48ರ ಸರಾಸರಿಯಲ್ಲಿ 11577 ರನ್ ಕಲೆ ಹಾಕಿದ್ದಾರೆ. ಈ ವೇಳೆ 33 ಶತಕ, 61 ಅರ್ಧಶತಕ ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications